ನೆಹರು ಮೀಸಲಾತಿ ವಿರೋಧಿಯಾಗಿದ್ರು, ಅವರ ಚಿಂತನೆಯೇ ಕಾಂಗ್ರೆಸ್‌ ನದ್ದು: ಪ್ರಧಾನಿ ಮೋದಿ

ಕಾಂಗ್ರೆಸ್‌ ಹಿಂದುಳಿದ ಜಾತಿ, ಹಿಂದುಳಿದ ವರ್ಗ ಮತ್ತು ಆದಿವಾಸಿಗಳ ವಿರೋಧಿಯಾಗಿದೆ.

Team Udayavani, Feb 7, 2024, 4:25 PM IST

ನೆಹರು ಮೀಸಲಾತಿ ವಿರೋಧಿಯಾಗಿದ್ರು, ಅವರ ಚಿಂತನೆಯೇ ಕಾಂಗ್ರೆಸ್‌ ನದ್ದು: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ಫೆ.07) ರಾಜ್ಯಸಭೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ವಂದನಾ ನಿರ್ಣಯದ ಮೇಲಿನ ಚರ್ಚೆಯ ಕುರಿತು ಮಾತನಾಡುತ್ತಾ,‌ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರು ಅವರು ಹಿಂದುಳಿದ ಸಮುದಾಯಗಳಿಗೆ ಮೀಸಲಾತಿ ನೀಡುವುದರ ವಿರುದ್ಧ ಇದ್ದಿದ್ದರು. ಮೀಸಲಾತಿ ವ್ಯವಸ್ಥೆಯನ್ನು ಅಸಮರ್ಥಗೊಳಿಸುತ್ತದೆ ಎಂಬುದು ನೆಹರು ಚಿಂತನೆಯಾಗಿತ್ತು ಎಂದರು.

ಇದನ್ನೂ ಓದಿ:NDAಗೆ 400 ಸ್ಥಾನ ಸಿಗಲಿದೆ ಎಂಬ ಖರ್ಗೆಜೀ ಭವಿಷ್ಯ ನಿಜವಾಗಲಿದೆ: ಪ್ರಧಾನಿ ಮೋದಿ ತಿರುಗೇಟು

“ನಾನು ಇತ್ತೀಚೆಗೆ ನೆಹರುವನ್ನು ಹೆಚ್ಚು ನೆನಪಿಸಿಕೊಳ್ಳುತ್ತಿದ್ದೇನೆ. ನೆಹರು ಅವರು ಒಂದು ಬಾರಿ ಮುಖ್ಯಮಂತ್ರಿಗಳಿಗೆ ಬರೆದಿದ್ದ ಪತ್ರದ ಅನುವಾದ ಓದಿದೆ. ಅವರು ಮೀಸಲಾತಿಯ ವಿರುದ್ಧ ಇದ್ದಿದ್ದರು ಎಂಬುದು ತಿಳಿಯಿತು.

ನೆಹರುಜೀಯ ಪ್ರಕಾರ, ಒಂದು ವೇಳೆ ಉದ್ಯೋಗದಲ್ಲಿ ಎಸ್‌ ಸಿ, ಎಸ್‌ ಟಿ ಅಥವಾ ಒಬಿಸಿಗೆ ಮೀಸಲಾತಿ ಕೊಟ್ಟರೆ ಇದರಿಂದ ಸರ್ಕಾರಿ ಕೆಲಸದ ಗುಣಮಟ್ಟ ಕುಸಿಯುತ್ತದೆ ಎಂದು ಹೇಳಿದ್ದರು. ಅಷ್ಟೇ ಅಲ್ಲ ನೇಮಕಾತಿಯನ್ನು ಕೂಡಾ ನಿಲ್ಲಿಸಿದ್ದರು. ನೆಹರುಜೀ ಏನು ಹೇಳಿದ್ದರೋ ಅದನ್ನೇ ಕಾಂಗ್ರೆಸ್‌ ಕುರುಡಾಗಿ ಅನುಸರಿಸುತ್ತಿದೆ. ಅಂದಿನಿಂದ ಈವರೆಗೂ ಕಾಂಗ್ರೆಸ್‌ ಮನಸ್ಥಿತಿ ಏನೆಂಬುದನ್ನು ಇಂತಹ ಉದಾಹರಣೆಗಳಿಂದಲೇ ತಿಳಿದುಕೊಳ್ಳಬಹುದಾಗಿದೆ ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ ಹಿಂದುಳಿದ ಜಾತಿ, ಹಿಂದುಳಿದ ವರ್ಗ ಮತ್ತು ಆದಿವಾಸಿಗಳ ವಿರೋಧಿಯಾಗಿದೆ. ನಾವು(ಬಿಜೆಪಿ) ಯಾವಾಗಲೂ ಅವರಿಗೆ ಆದ್ಯತೆ ನೀಡಿದ್ದೇವೆ. ಮೊದಲು ದಲಿತರಿಗೆ, ಈಗ ಆದಿವಾಸಿಗಳಿಗೆ ಮನ್ನಣೆ ನೀಡಿದ್ದೇವೆ. ನಾವು ಎಸ್‌ ಸಿ, ಎಸ್‌ ಟಿ ಮತ್ತು ಒಬಿಸಿ ಸಮುದಾಯದ ಏಳಿಗೆಗೆ ಶ್ರಮಿಸಿದ್ದೇವೆ. ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡುವ ಮೂಲಕ ದೇಶದ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ.

ನಾವು ಮುರ್ಮು ಅವರನ್ನು ಆಯ್ಕೆ ಮಾಡಿದ್ದಕ್ಕೆ ನೀವು ಅದನ್ನು ವಿರೋಧಿಸಿದ್ರಿ. ಒಂದು ವೇಳೆ ಬಿಆರ್‌ ಅಂಬೇಡ್ಕರ್‌ ಇಲ್ಲದಿದ್ದರೆ ಎಸ್‌ ಸಿ, ಎಸ್‌ ಟಿ ಸಮುದಾಯಕ್ಕೆ ಸ್ಥಾನಮಾನವೇ ಸಿಗುತ್ತಿರಲಿಲ್ಲ. ನಮ್ಮ ಸರ್ಕಾರ ಅಂಬೇಡ್ಕರ್‌ ಗೆ ಭಾರತ ರತ್ನ ಗೌರವ ನೀಡಿದೆ. ನಿಮ್ಮದು (ಕಾಂಗ್ರೆಸ್)‌ ಬ್ರಿಟಿಷ್‌ ಗುಲಾಮಿ ಮನಸ್ಥಿತಿ ಹಾಗೆಯೇ ಮುಂದುವರಿದಿದೆ ಎಂದು ಪ್ರಧಾನಿ ಮೋದಿ ಟೀಕಿಸಿದರು.

ತಮ್ಮ ಭಾಷಣದಲ್ಲಿ ಜವಾಹರಲಾಲ್‌ ನೆಹರು ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ ಅವರು, ಇಬ್ಬರ ಭಾಷಣಗಳನ್ನು ಗಮನಿಸಿದರೆ ಅವರಿಗೆ ಭಾರತೀಯರ ಸಾಮರ್ಥ್ಯದ ಮೇಲೆ ನಂಬಿಕೆ ಇಲ್ಲವಾಗಿತ್ತು ಎಂಬುದು ತಿಳಿಯುತ್ತದೆ. ಕಾಂಗ್ರೆಸ್‌ ಪಕ್ಷ ಯಾವಾಗಲೂ ತಾನೇ ಆಡಳಿತಗಾರ ಎಂದು ಭಾವಿಸಿತ್ತು. ನೆಹರು ಅವರ ತಪ್ಪಿನಿಂದಾಗಿ ಕಾಶ್ಮೀರ ಭಾರೀ ಬೆಲೆ ತೆರುವಂತಾಗಿತ್ತು ಎಂದು ಮೋದಿ ಹೇಳಿದರು.

ಟಾಪ್ ನ್ಯೂಸ್

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.