Karnataka Budget: ಉಡುಪಿ ಸೇರಿದಂತೆ ಪ್ರತಿ ಜಿಲ್ಲೆಯಲ್ಲೂ ಕ್ರಿಟಿಕಲ್ ಕೇರ್ ಬ್ಲಾಕ್…

ಅರೋಗ್ಯ ಇಲಾಖೆಗೆ ಸಿಕ್ಕಿದ್ದೇನು?

Team Udayavani, Feb 16, 2024, 12:26 PM IST

Budget 2024: ಉಡುಪಿ ಸೇರಿದಂತೆ ಪ್ರತಿ ಜಿಲ್ಲೆಯಲ್ಲೂ ಕ್ರಿಟಿಕಲ್ ಕೇರ್ ಬ್ಲಾಕ್…

ಬೆಂಗಳೂರು: ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ಉಡುಪಿ ಸೇರಿದಂತೆ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆ ಮಾಡಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಬಜೆಟ್ ಮಂಡನೆ ಮಾಡಿದ ಅವರು ಈಗಾಗಲೇ 15 ಜಿಲ್ಲೆಗಳಲ್ಲಿ ಕ್ರಿಟಿಕಲ್ ಕೇರ್ ಬ್ಲಾಕ್ ನ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಮುಂದಿನ ಸಾಲಿನಲ್ಲಿ ಉಳಿದ 9 ಜಿಲ್ಲೆಗಳಲ್ಲಿಯೂ ಕ್ರಿಟಿಕಲ್ ಕೇರ್ ಬ್ಲಾಕ್‌ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆ
ತಾಲ್ಲೂಕು ಆಸ್ಪತ್ರೆಗಳಿಲ್ಲದ ಆನೇಕಲ್, ನೆಲಮಂಗಲ, ಹೊಸಕೋಟೆ, ಶೃಂಗೇರಿ, ಖಾನಾಪುರ, ಶಿರಹಟ್ಟಿ ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ಪ್ರಸಕ್ತ ಸಾಲಿನಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಗಳನ್ನು 280 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಹೇಳಿದರು.

ಆರೋಗ್ಯ ಇಲಾಖೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ಉನ್ನತೀಕರಣಕ್ಕೆ 75 ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗುವುದು ಎಂದರು.

ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಮೂಲಸೌಕರ್ಯ ಕಾಮಗಾರಿಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಎಂದರು.

ಗ್ರಾಮೀಣ ಪ್ರದೇಶದ ಜನರಿಗೆ 24×7 ತುರ್ತು ಆರೋಗ್ಯ ಸೇವೆಯನ್ನು ನೀಡಲು ಮುಂದಿನ 2 ವರ್ಷಗಳಲ್ಲಿ 350 ಕೋಟಿ ರೂ.ಗಳ ವೆಚ್ಚದಲ್ಲಿ 25 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 15 ಸಮುದಾಯ ಆರೋಗ್ಯ ಕೇಂದ್ರಗಳನ್ನು ಮಾನವ ಸಂಪನ್ಮೂಲದೊಂದಿಗೆ ಕಾರ್ಯಗತಗೊಳಿಸಲಾಗುವುದು ಎಂದರು.

ಕ್ಯಾನ್ಸ‌ರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ ಕಿಮೋ ಥೆರಪಿ ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ, ಸರ್ಕಾರವು 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಡಿಜಿಟಲ್ ಮ್ಯಾಮೊಗ್ರಫಿ ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್ ಆಸ್ಪತ್ರೆ ಬೆಂಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ ಕಾಲ್ಪಸ್ಕೊಪಿ (Colposcopy) ಉಪಕರಣಗಳ ಖರೀದಿಗೆ ಒಟ್ಟಾರೆಯಾಗಿ 21 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು ಎಂದರು.

ಇದನ್ನೂಓದಿ: Karnataka Budget: ರಾಜ್ಯ ಬಜೆಟ್‌ ನಲ್ಲಿ ಇಲಾಖಾವಾರು ಹಂಚಿಕೆ ಮಾಡಿದ ಅನುದಾನ ಎಷ್ಟು?

ಟಾಪ್ ನ್ಯೂಸ್

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Slander about Malabar group: Mumbai High Court harsh verdict

Malabar group ಬಗ್ಗೆ ಅಪಪ್ರಚಾರ:  ಮುಂಬಯಿ ಹೈಕೋರ್ಟ್‌ ಕಠಿನ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.