Feb. 22ಕ್ಕೆ ವಿವಿಧ ಕಾಮಗಾರಿಗಳ ಲೋಕಾರ್ಪಣೆಗೆ ಶಿವಮೊಗ್ಗಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ
Team Udayavani, Feb 19, 2024, 8:51 PM IST
ಶಿವಮೊಗ್ಗ: ಕೇಂದ್ರದ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಫೆ.22ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದು, ಸುಮಾರು 6168.41 ಕೋಟಿ ರೂ. ವೆಚ್ಚದ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೆಹರೂ ಕ್ರೀಡಾಂಗಣದಲ್ಲಿ ಮಧ್ಯಾಹ್ನ ಸುಮಾರು 2ಕ್ಕೆ ನಡೆಯುವ ಈ ಕಾರ್ಯಕ್ರಮದಲ್ಲಿ ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಬಂಧಿಸಿದಂತೆ 296.92 ಕಿ.ಮೀ. ಉದ್ದದ 18 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನಡೆಯಲಿದೆ.
ಶಿವಮೊಗ್ಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುಮಾರು 139.41 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಂಡ 4 ಕಾಮಗಾರಿಗಳನ್ನು ಲೋಕಾರ್ಪಣೆ ಮಾಡುವುದರ ಜತೆಗೆ ಈಗಾಗಲೇ ಟೆಂಡರ್ ಮುಗಿಸಿ ಕಾಮಗಾರಿ ಪ್ರಾರಂಭಿಸುವ ಹಂತದಲ್ಲಿರುವ 2138.30 ಕೋಟಿ ರೂ. ವೆಚ್ಚದ 6 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.