KFD; ಉಡುಪಿಗೂ ವಕ್ಕರಿಸಿದ ಮಂಗನಕಾಯಿಲೆ
Team Udayavani, Feb 24, 2024, 6:10 AM IST
ಶಿವಮೊಗ್ಗ/ಉಡುಪಿ: ಮಂಗನ ಕಾಯಿಲೆ (ಕೆಎಫ್ಡಿ) ಪ್ರಕರಣಗಳು ಹೆಚ್ಚಾಗುತ್ತಿದ್ದು, ಶುಕ್ರವಾರ ಶಿವಮೊಗ್ಗದಲ್ಲಿ 1, ಚಿಕ್ಕಮಗ ಳೂರು 4, ಉಡುಪಿಯಲ್ಲಿ 1 ಪಾಸಿಟಿವ್ ಬಂದಿದೆ. ಉಡುಪಿಯಲ್ಲಿ ಈ ವರ್ಷದ ಮೊದಲ ಪ್ರಕರಣ ಇದಾಗಿದೆ. ಈವರೆಗೆ 117 ಮಂದಿಗೆ ಪಾಸಿಟಿವ್ ಬಂದಿದ್ದು, 82 ಮಂದಿ ಗುಣಮುಖರಾಗಿ ಮೂವರು ಮೃತ ಪಟ್ಟಿದ್ದಾರೆ. 19 ಸಕ್ರಿಯ ಪ್ರಕರಣಗಳಿವೆ. ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 58 ವರ್ಷದ ಮಹಿಳೆಗೆ ಮಂಗನ ಕಾಯಿಲೆ ದೃಢಪಟ್ಟಿದೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಎಫ್ಡಿ ಸೋಂಕು ಹೇಗೆ ತಗಲಿತು ಎಂಬ ಬಗ್ಗೆ ಈ ಭಾಗದ ಆಸುಪಾಸಿನಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಕುಂದಾಪುರ ಭಾಗದಲ್ಲಿ ಹೆಚ್ಚಿನ ತಪಾಸಣೆ ಮಾಡಲಾಗುತ್ತಿದೆ. 2019ರಲ್ಲಿ ಒಂದು ಪ್ರಕ ರಣ ಕಂಡುಬಂದಿತ್ತು. ಆ ಬಳಿಕ ಯಾವುದೇ ಪ್ರಕರಣಗಳು ಕಂಡುಬಂದಿರಲಿಲ್ಲ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಪಿ.ಐ. ಗಡಾದ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ
Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ
MLC Election; ಕೊರಿಯರ್ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್!!
RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ
H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್ ಈಗ ಸಿಗುತ್ತಾರಾ?; ಎಚ್ಡಿಕೆ