Kerala; ವಿದ್ಯಾರ್ಥಿ ಸಾವು ಕೇಸ್: ಪಶುವೈದ್ಯಕೀಯ ವಿವಿ ವಿಸಿ ಅಮಾನತು ಮಾಡಿದ ಗವರ್ನರ್

ವಯನಾಡ್‌ ಘಟನೆ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು...

Team Udayavani, Mar 2, 2024, 4:56 PM IST

1-a-wewqewq

ವಯನಾಡ್ : ಕೇರಳದ ವಯನಾಡ್‌ನಲ್ಲಿರುವ ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ವಿಶ್ವವಿದ್ಯಾನಿಲಯಗಳ ಕುಲಪತಿಯಾಗಿರುವ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಶನಿವಾರ ಉಪಕುಲಪತಿಯನ್ನು ಅಮಾನತುಗೊಳಿಸಿದ್ದಾರೆ.

ಫೆಬ್ರವರಿ 18 ರಂದು ನಡೆದ 20 ವರ್ಷದ ಸಿದ್ಧಾರ್ಥನ್ ಜೆ.ಎಸ್.ಸಾವಿನ ಘಟನೆಯ ಕುರಿತು ವಿಸಿ ಪ್ರೊ.ಡಾ.ಎಂ ಆರ್ ಶಶೀಂದ್ರ ನಾಥ್ ಅವರು ನೀಡಿದ ವರದಿಯು “ಉಪ ಕುಲಪತಿಗಳ ಕಡೆಯಿಂದ ಕರ್ತವ್ಯ ಲೋಪಕ್ಕೆ ಸಾಕ್ಷಿಯಾಗಿದೆ” ಎಂದು ಅಮಾನತು ಆದೇಶದಲ್ಲಿ ಖಾನ್ ಹೇಳಿದ್ದಾರೆ.

“ವಿಸಿ ಅವರ ಕರ್ತವ್ಯ ಮತ್ತು ಜವಾಬ್ದಾರಿಗಳ ಬಗ್ಗೆ ಅಸಡ್ಡೆ, ನಿರ್ಲಕ್ಷ್ಯ ಮತ್ತು ನಿಷ್ಠುರ ವರ್ತನೆ, ವಿಶೇಷವಾಗಿ ಈ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಫೆಬ್ರವರಿ 28 ರ ಅವರ ವರದಿಯಿಂದ ಬಹಿರಂಗವಾಗಿದೆ” ಎಂದು ರಾಜ್ಯಪಾಲರು ಹೇಳಿದ್ದು, ವಿದ್ಯಾರ್ಥಿಯ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ. ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಸೂಚಿಸಿದ್ದಾರೆ.

ಸಿದ್ಧಾರ್ಥನ್ ಫೆಬ್ರವರಿ 18 ರಂದು ಹಾಸ್ಟೆಲ್‌ನ ಸ್ನಾನಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಆತನನ್ನು ಕೆಲವು ಸ್ಥಳೀಯ ಎಸ್‌ಎಫ್‌ಐ ಮುಖಂಡರು ಮತ್ತು ಕಾರ್ಯಕರ್ತರು ಹೊಡೆದು ಹತ್ಯೆಗೈದಿದ್ದಾರೆ ಎಂದು ಕಾಲೇಜು ಸಹಪಾಠಿಗಳು ಹೇಳಿದ್ದರು ಎಂದು ಪೋಷಕರು ಹೇಳಿದ್ದರು. ಘಟನೆ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು.

ಆಡಳಿತಾರೂಢ ಸಿಪಿಐ(ಎಂ) ನ ವಿದ್ಯಾರ್ಥಿ ಘಟಕ ಎಸ್‌ಎಫ್‌ಐ ಮೇಲೆ ಮಾಡಿದ್ದ ಆರೋಪ ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಹೋರಾಟಕ್ಕಿಳಿಯಲು ಕಾರಣವಾಗಿತ್ತು.

ಟಾಪ್ ನ್ಯೂಸ್

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.