Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Team Udayavani, Mar 26, 2024, 7:45 PM IST

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

ದಾವಣಗೆರೆ: ಲೋಕಸಭಾ ಚುನಾವಣೆ ಟಿಕೆಟ್ ವಿಷಯವಾಗಿ ಕೆಲ ಮುಖಂಡರಲ್ಲಿನ ಅಸಮಾಧಾನದ ಬೇಗುದಿ ತಣಿಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಲೋಕಸಭಾ ಚುನಾವಣೆಯ ಟಿಕೆಟ್ ಘೋಷಣೆ ನಂತರ ಬದಲಾವಣೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದ ಮಾಜಿ ಸಚಿವರಾದ ಎಸ್.ಎ. ರವೀಂದ್ರನಾಥ್, ಎಂ.ಪಿ. ರೇಣುಕಾಚಾರ್ಯ, ಜಿ. ಕರುಣಾಕರರೆಡ್ಡಿ, ಮಾಜಿ ಶಾಸಕ ರಾದ ಡಾ| ಎ.ಎಚ್. ಶಿವಯೋಗಿಸ್ವಾಮಿ, ಎಂ. ಬಸವರಾಜನಾಯ್ಕ, ಟಿ. ಗುರುಸಿದ್ದನಗೌಡ, ಪುತ್ರ ಡಾ| ಟಿ.ಜಿ. ರವಿಕುಮಾರ್, ಮುಖಂಡ ಮಾಡಾಳ್ ಮಲ್ಲಿಕಾರ್ಜುನ್, ಮಾಜಿ ಮೇಯರ್ ಅಜಯ್ ಕುಮಾರ್, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್, ಎಲ್.ಎನ್. ಕಲ್ಲೇಶ್ ಇತರರೊಂದಿಗೆ ಮಂಗಳವಾರ ದಾವಣಗೆರೆ ಹೊರ ವಲಯದ ಅಪೂರ್ವ ರೆಸಾರ್ಟ್‌ನಲ್ಲಿ ಅತ್ಯಂತ ಸುದೀರ್ಘ ಮಹತ್ವದ ಸಭೆ ನಡೆಸಿದ ಯಡಿಯೂರಪ್ಪ, ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಭಿನ್ನ ಮತ ತಣಿಸಿದರು. ಇದರಿಂದ ಕಮಲ ಪಾಳೆಯದಲ್ಲಿನ ಆತಂಕ ದೂರವಾದಂತೆ ಆಗಿದೆ.

ಅಸಮಾಧಾನಿತರ ಗುಂಪಿನ ಮುಂಚೂಣಿಯಲ್ಲಿದ್ದಂತಹ ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಅವರ ನೇತೃತ್ವದಲ್ಲೇ ಲೋಕಸಭಾ ಚುನಾವಣೆ ಎದುರಿಸಲು ಸಹ ಸಭೆ ತೀರ್ಮಾನಿಸಲಾಗಿದೆ.

ಬಿಜೆಪಿಯ ಸುಭದ್ರಕೋಟೆ ಎಂದೇ ಗುರುತಿಸಲ್ಪಡುವ ದಾವಣಗೆರೆ ಜಿಲ್ಲೆಯಲ್ಲಿ ಭಿನ್ನಮತ, ಅಸಮಾಧಾನ ಇಷ್ಟೊಂದು ಪ್ರಮಾಣದಲ್ಲಿ ಹೊರ ಬಂದಿದ್ದು ಅದೂ ಮಾಜಿ ಸಚಿವರು, ಶಾಸಕರು, ವಿವಿಧ ಜನ ಪ್ರತಿನಿಧಿಗಳಿಂದ ಇದೇ ಪ್ರಥಮ. ಸಂಸದರು ಹೊರ ಜಿಲ್ಲೆಯವರು ಎಂಬ ಕೂಗು ಒಂದೆರೆಡು ಚುನಾವಣೆಯಲ್ಲಿ ವಿಪಕ್ಷಗಳಿಂದ ಕೇಳಿ ಬಂದಿತ್ತು. ಈ ಬಾರಿಯ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಬಿಜೆಪಿಯಲ್ಲೇ ಕೇಳಿ ಬರುವಂತಾಗಿತ್ತು. ಹೊಸಬರಿಗೆ ಟಿಕೆಟ್ ಎನ್ನುವ ಒತ್ತಾಯವು ಪ್ರಬಲವಾಗಿತ್ತು.

ಸ್ವಪಕ್ಷದಲ್ಲೇ ವ್ಯಕ್ತವಾಗುತ್ತಿರುವ ವಿರೋಧದ ಕೂಗಿನ ಸುಳಿವರಿತ ಹೈಕಮಾಂಡ್ ಸಿದ್ದೇಶ್ವರ ಬದಲಿಗೆ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಟಿಕೆಟ್ ನೀಡುವ ಮೂಲಕ ಅಸಮಾಧಾನ ತಣಿಸುವ ಕೆಲಸ ಮಾಡಿತು. ಆದರೂ, ಮುಖಂಡರಲ್ಲಿ ಬೇಗುದಿ ಮುಂದುವರಿದಿತ್ತು, ಘೋಷಿತ ಅಭ್ಯರ್ಥಿಯ ಬದಲಾವಣೆಯ ಕೂಗು ಹೆಚ್ಚಾಗುತ್ತಲೇ ಇತ್ತು. ದಾವಣಗೆರೆ ಬಿಜೆಪಿಯಲ್ಲಿನ ಭಿನ್ನಮತ ಅತೀ ಮುಖ್ಯವಾಗಿ ಮುಖಂಡರಲ್ಲಿನ ಅಸಮಾಧಾನ, ಬೇಗುದಿ, ಸರಣಿ ಸಭೆಯ ಮಾಹಿತಿ ವರಿಷ್ಠರ ಗಮನಕ್ಕೆ ಬಂದಿದ್ದು, ಸೋಮವಾರ ಬೆಂಗಳೂರಿನಲ್ಲಿ ಸಭೆ ನಡೆಸಿದ ಸಂಸದ ಸಿದ್ದೇಶ್ವರ, ಶಾಸಕ ಬಿ.ಪಿ.ಹರೀಶ್, ಮಾಜಿ ಶಾಸಕ ಎಸ್.ವಿ. ರಾಮಚಂದ್ರ ಇತರರು ಸುದೀರ್ಘ ಸಭೆ ನಡೆಸಿ ವಿಸ್ತೃತ ಚರ್ಚೆ ನಡೆಸಿದ್ದರು.

ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ದಾಖಲೆಗಳ ಮತಗಳ ಅಂತರದಲ್ಲಿ ಐತಿಹಾಸಿಕ ಜಯಗಳಿಸುವರು ಎಂದು ಕರ್ನಾಟಕ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ವಿಶ್ವಾಸ ವ್ಯಕ್ತಪಡಿಸಿದರು.

ಮಂಗಳವಾರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹಾಲಿ, ಮಾಜಿ ಜನಪ್ರತಿನಿಧಿಗಳು, ಕಾರ್ಯಕರ್ತರು, ಸಂಘಟನೆಯ ವಿವಿಧ ಪದಾಧಿಕಾರಿಗಳ ಸಭೆ ನಡೆಸಲಾಯಿತು. ಇಡೀ ಸಭೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರನ್ನು ದಾಖಲೆಗಳ ಮತಗಳ ಅಂತರದಲ್ಲಿ ಐತಿಹಾಸಿಕ ಗೆಲುವಿನ ಸಾಮೂಹಿಕ ನಿರ್ಣಯ ಕೈಗೊಂಡಿತು ಎಂದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ರಾಜ್ಯ ಚುನಾವಣಾ ಉಸ್ರುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಅವರ ನೇತೃತ್ವದಲ್ಲಿ ಸಭೆ ನಡೆಸಿ ಲೋಕಸಭಾ ಅಭ್ಯರ್ಥಿಯಾಗಿ ಘೋಷಣೆ ಮಾಡಿರುವ ಗಾಯತ್ರಿ ಸಿದ್ದೇಶ್ವರ ಅವರ ಐತಿಹಾಸಿಕ ಗೆಲುವಿಗೆ ಒಗ್ಗಟ್ಟಾಗಿ ಗೆಲ್ಲಿಸಬೇಕು. ಮಾಜಿ ಸಚಿವ ರವೀಂದ್ರನಾಥ್ ಅವರಿಗೆ ಚುನಾವಣಾ ನೇತೃತ್ವದಲ್ಲಿ ಚುನಾವಣೆ ನಡೆಸಬೇಕು ಎಂಬ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಯಾವುದೇ ಷರತ್ತುಗಳಿಲ್ಲದೆ ರವೀಂದ್ರನಾಥ್ ಅವರ ನೇತೃತ್ವದಲ್ಲೇ ಲೋಕಸಭಾ ಚುನಾವಣೆ ನಡೆಸಿ, ಗಾಯತ್ರಿ ಸಿದ್ದೇಶ್ವರ ಅವರನ್ನು ಗೆದ್ದೆ ಗೆಲ್ಲುಸುವಲ್ಲಿ ಯಾವುದೇ ಸಂಶಯವೇ ಇಲ್ಲ. ದಾವಣಗೆರೆ ಕ್ಷೇತ್ರದಲ್ಲಿ ಎಲ್ಲವೂ ಬಗೆಹರಿದಿದೆ. ಮುಂದೆ ಯಾವುದೇ ಒಡಕಿನ ಮಾತೇ ಇಲ್ಲ. ಗಾಯತ್ರಿ ಸಿದ್ದೇಶ್ವರ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸುವ ಸರ್ವಾನುಮತದ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿಸಿದರು.

ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಮಾತನಾಡಿ, ನಮ್ಮ ನಡುವೆ ಬಗೆಹರಿಯಲಾರದಂತದ್ದು ಏನೂ ಆಗಿಯೇ ಇರಲಿಲ್ಲ. ಸಂಧಾನ ಏನೂ ಇಲ್ಲ. ನಾವು ಮಾತನಾಡದೇ ಇದ್ದ ಕಾರಣಕ್ಕೆ ಸಣ್ಣ ಪುಟ್ಟ ಸಮಸ್ಯೆ ಇದ್ದವು. ತೊಂದರೆ ಆಗಿತ್ತು. ಈಗ ಮಾತನಾಡಿದ ಮೇಲೆ ಎಲ್ಲವೂ ಬಗೆಹರಿದಿವೆ ಎಂದರು.

ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಮಾತನಾಡಿ, ಎಲ್ಲವೂ ಚೆನ್ನಾಗಿದೆ. ಎಲ್ಲರೂ ಚೆನ್ನಾಗಿದ್ದಾರೆ. ದಾವಣಗೆರೆ ಲೋಕ ಸಭಾ ಕ್ಷೇತ್ರದಲ್ಲಿ ಗಾಯತ್ರಿ ಸಿದ್ದೇಶ್ವರ ಅವರನ್ನ ಗೆಲ್ಲಿಸಿ, ದಾವಣಗೆರೆಯಿಂದ ದೆಹಲಿಗೆ ಕಮಲವನ್ನ ಕಳಿಸಿ, ನರೇಂದ್ರ ಮೋದಿ ಅವರನ್ನ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.