Lok Sabha Elections; ಉತ್ತರ ಕರ್ನಾಟಕದತ್ತ ಸುಳಿಯದ ಸ್ಟಾರ್‌ ಪ್ರಚಾರಕರು


Team Udayavani, Apr 9, 2024, 8:30 AM IST

bjp-d

ರಾಯಚೂರು: ಲೋಕಸಭೆ ಚುನಾವಣೆ ಎರಡು ಹಂತಗಳಲ್ಲಿ ನಡೆಯುತ್ತಿರುವ ಕಾರಣಕ್ಕೆ ದಕ್ಷಿಣ ಕರ್ನಾಟಕ ಭಾಗದ ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ ನಡೆಯುತ್ತಿದ್ದರೆ, ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರ ಕಾರ್ಯ ನೀರಸವಾಗಿದೆ. ಅಭ್ಯರ್ಥಿಗಳ ಪರ ಪ್ರಚಾರ ಸ್ಟಾರ್‌ ಪ್ರಚಾರಕರು ಸಿಗುತ್ತಿಲ್ಲ.

ಈಗಾಗಲೇ ದೇಶದಲ್ಲಿ ಚುನಾವಣೆ ಕಾವೇರಿದೆ. ಎಲ್ಲೆಲ್ಲೂ ಅಬ್ಬರದ ಪ್ರಚಾರ ಜೋರಾಗಿದೆ. ಅದರಲ್ಲೂ ಮೊದಲನೇ ಹಂತದ ಚುನಾವಣೆ ಇರುವಂಥ ಕೆಲವೊಂದು ಹೈವೋಲ್ಟೇಜ್ ಕ್ಷೇತ್ರಗಳಲ್ಲಂತೂ ಬಿಸಿಲು ಲೆಕ್ಕಿಸದೆ ಪ್ರಚಾರ ನಡೆಸಲಾಗುತ್ತಿದೆ. ಅದೇ ರೀತಿ ಬಹುತೇಕ ಎಲ್ಲ ಕ್ಷೇತ್ರ ಗಳಿಗೆ ಅಭ್ಯರ್ಥಿಗಳನ್ನು ಕೂಡ ಅಂತಿಮಗೊಳಿಸಿದ್ದು, ಎರಡನೇ ಹಂತದ ಚುನಾವಣೆಗಳಿರುವ ಕಡೆ ಮಾತ್ರ ಪ್ರಚಾರ ಭರಾಟೆ ಅಷ್ಟಾಗಿ ಕಾಣಿಸುತ್ತಿಲ್ಲ.

ಸ್ಥಳೀಯವಾಗಿರುವ ಸಚಿವರು, ಶಾಸಕರೇ ಸದ್ಯಕ್ಕೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಮೇ 7ರಂದು ಎರಡನೇ ಹಂತದಲ್ಲಿ ರಾಯಚೂರು, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ದಾವಣಗೆರೆ, ಶಿವಮೊಗ್ಗದಲ್ಲಿ ಚುನಾವಣೆ ನಡೆಯಲಿದೆ. ಇದರಲ್ಲೂ ಬೆಳಗಾವಿ, ಶಿವಮೊಗ್ಗ, ಧಾರವಾಡದಂಥ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಪ್ರಚಾರ ಜೋರಾಗಿದೆ. ಪ್ರಧಾನಿ ಮೋದಿ ಕಲಬುರಗಿಯಲ್ಲಿ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದ್ದು ಬಿಟ್ಟರೆ ಈ ಭಾಗದಲ್ಲಿ ದೊಡ್ಡ ನಾಯಕರು ಯಾರೂ ಬಂದಿಲ್ಲ.

ರಾಯಚೂರು ಲೋಕಸಭೆ ಕ್ಷೇತ್ರ ಎಂಟು ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡಿದೆ. ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲು ಸಮಯ ಕೂಡ ಸಾಲುವುದಿಲ್ಲ. ಹೀಗಾಗಿ ಅಭ್ಯರ್ಥಿಗಳು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಆದರೆ, ಸ್ಟಾರ್‌ ಪ್ರಚಾರಕರೆಲ್ಲ ಮೊದಲ ಹಂತದ ಚುನಾವಣೆ ಪ್ರಚಾರದಲ್ಲಿ ಬ್ಯುಸಿ ಇರುವ ಕಾರಣಕ್ಕೆ ಸ್ಥಳೀಯ ನಾಯಕರನ್ನೇ ನೆಚ್ಚಿಕೊಳ್ಳಬೇಕಿದೆ. ಎಲ್ಲ ಕಡೆ ಬಣ ರಾಜಕೀಯ ಇರುವುದರಿಂದ ಸ್ಥಳೀಯ ನಾಯಕರೊಟ್ಟಿಗೆ ಪ್ರಚಾರ ನಡೆಸಿದರೆ ಅನುಕೂಲವೋ ಅನಾನುಕೂಲವೋ ಎಂಬ ಗೊಂದಲ ಅಭ್ಯರ್ಥಿಗಳಲ್ಲಿದ್ದು, ಪಕ್ಷದ ರಾಜ್ಯ, ರಾಷ್ಟ್ರ ಮಟ್ಟದ ನಾಯಕರ ಬರುವಿಕೆಗಾಗಿ ಕಾಯುವಂತಾಗಿದೆ.

ಅಭ್ಯರ್ಥಿಗಳಿಂದ ಟೆಂಪಲ್‌ ರನ್‌
ಚುನಾವಣೆ ರ್‍ಯಾಲಿ, ಬಹಿರಂಗ ಸಮಾವೇಶಗಳಿಗಿಂತ ಟೆಂಪಲ್‌ ರನ್‌ಗೆ ಅಭ್ಯರ್ಥಿಗಳು ಹೆಚ್ಚು ಒತ್ತು ನೀಡುತ್ತಿದ್ದಾರೆ. ಕ್ಷೇತ್ರದಲ್ಲಿರುವ ಪ್ರಮುಖ ಮಠ ಮಾನ್ಯಗಳು, ದೇವಸ್ಥಾನಗಳಿಗೆ ಅಭ್ಯರ್ಥಿಗಳು ಭೇಟಿ ನೀಡಿ ದರ್ಶನ ಪಡೆಯುವ ಮೂಲಕ ಅಲ್ಲಿನ ಭಕ್ತರ ವಿಶ್ವಾಸ ಗಳಿಸುವ ಪ್ರಯತ್ನದಲ್ಲಿದ್ದಾರೆ. ಇನ್ನೂ ವಿವಿಧ ತಾಲೂಕು ಕೇಂದ್ರಗಳಲ್ಲಿ ಸಣ್ಣ ಪ್ರಮಾಣದ ಕಾರ್ಯಕ್ರಮಗಳನ್ನು ನಡೆಸಿ ಕಾರ್ಯಕರ್ತರನ್ನು ಸೇರಿಸಿಕೊಳ್ಳುವ ಮೂಲಕ ಪಕ್ಷ ಸಂಘಟನೆಗೂ ಒತ್ತ ನೀಡಲಾಗುತ್ತಿದೆ.

ಬಿಸಿಲ ಝಳದ ಭೀತಿ
ಈಗಾಗಲೇ ಬಿಸಿಲಿನ ಝಳ ದಿನೇದಿನೆ ಹೆಚ್ಚಾಗುತ್ತಿದ್ದು, 42 ಡಿಗ್ರಿ ಸೆಲ್ಸಿಯಸ್‌ ಸಮೀಪಿಸಿದೆ. ಅಭ್ಯರ್ಥಿಗಳು ಬಿಸಿಲಲ್ಲಿ ಪ್ರಚಾರ ಕಾರ್ಯಕ್ಕೆ ಮುಂದಾಗಲು ಹಿಂಜರಿಯುವಂತಾಗಿದೆ. ಹೀಗಾಗಿ ಬೆಳಗ್ಗೆ ಬೇಗನೆ ಮನೆ ಬಿಡುತ್ತಿದ್ದು, ಮಧ್ಯಾಹ್ನ ವಿಶ್ರಾಂತಿ ಪಡೆಯುತ್ತಿದ್ದಾರೆ. ಸಂಜೆ ನಂತರ ಮತ್ತೆ ಪ್ರಚಾರಕ್ಕೆ ಮುಂದಾಗುತ್ತಿದ್ದಾರೆ. ಮಧ್ಯಾಹ್ನ ಹೋದರೂ ಹೆಚ್ಚು ಜನ ಸೇರುತ್ತಿಲ್ಲ.

- ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

BJP 2

BJP 296-300 ಸ್ಥಾನ: ಫ‌ಲೋಡಿ ಜೂಜು ಅಡ್ಡೆ ಭವಿಷ್ಯ!

MOdi (3)

Uttar Pradesh ಬಗ್ಗೆ ವಿಪಕ್ಷ ಕೂಟ ತುಚ್ಛ ಮಾತು: ಪ್ರಧಾನಿ ಮೋದಿ

1-wewqeqe

Ram Mandir ಆಯ್ತು ಈಗ ಬಿಜೆಪಿ ಸೀತಾ ದೇಗುಲ ಭರವಸೆ!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.