Mumbai; ಸಲ್ಮಾನ್ ಖಾನ್ ಮನೆ ದಾಳಿಯ ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್
Team Udayavani, Apr 14, 2024, 6:21 PM IST
ಮುಂಬೈ: ನಗರದ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಭಾನುವಾರ ಮುಂಜಾನೆ ನಡೆದ ಗುಂಡಿನ ದಾಳಿಯ ನಂತರ ಇಡೀ ಬಾಲಿವುಡ್ ಸಮುದಾಯವು ಆಘಾತಕ್ಕೊಳಗಾಗಿದೆ. ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ನ ಹೊರಗೆ ನಡೆದ ಗುಂಡಿನ ದಾಳಿಯ ಹೊಣೆಯನ್ನು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ವಹಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಮುಂಬೈನ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್ಮೆಂಟ್ ನ ಹೊರಗೆ ಮುಂಜಾನೆ ಇಬ್ಬರು ವ್ಯಕ್ತಿಗಳು ಮೂರು ಸುತ್ತುಗಳಿಗಿಂತ ಹೆಚ್ಚು ಗುಂಡು ಹಾರಿಸಿದ್ದಾರೆ. ಹೆಲ್ಮೆಟ್ ಧರಿಸಿದ್ದ ದಾಳಿಕೋರರನ್ನು ಬಂಧಿಸಲು ಪ್ರದೇಶದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿಕೊಂಡು ಹಿಂಬಾಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಸಮಯದಲ್ಲಿ, ವೈ-ಪ್ಲಸ್ ದರ್ಜೆಯ ಭದ್ರತೆಯಲ್ಲಿ ನಟ ಸಲ್ಮಾನ್ ಖಾನ್ ಘಟನೆಯ ಸಮಯದಲ್ಲಿ ಮನೆಯಲ್ಲಿದ್ದರು. ಬಾಂದ್ರಾ ಪೊಲೀಸರು ಪ್ರಸ್ತುತ ಪ್ರಥಮ ಮಾಹಿತಿ ವರದಿಯನ್ನು (ಎಫ್ಐಆರ್) ದಾಖಲಿಸಿದ್ದು, ಸ್ಥಳೀಯ ಪೊಲೀಸ್ ಅಪರಾಧ ವಿಭಾಗದ ಅಧಿಕಾರಿಗಳು ಸಮಾನಾಂತರ ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಕಳೆದ ವರ್ಷ ಮಾರ್ಚ್ ನಲ್ಲಿ ಖಾನ್ ಅವರ ಕಚೇರಿಗೆ ಬೆದರಿಕೆಗಳನ್ನು ಒಳಗೊಂಡ ಇಮೇಲ್ ಬಂದಿತ್ತು. ಮುಂಬೈ ಪೊಲೀಸರು ಗ್ಯಾಂಗ್ ಸ್ಟರ್ ಗಳಾದ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಸ್ಥಳೀಯ ಪೊಲೀಸರು, ಕ್ರೈಂ ಬ್ರಾಂಚ್ ಜೊತೆಗೆ, ಘಟನೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RTO: ಇನ್ನು ಡ್ರೈವಿಂಗ್ ಲೈಸೆನ್ಸ್ ಟೆಸ್ಟ್ಗಾಗಿ ಆರ್ಟಿಒ ಕಚೇರಿಗೆ ಹೋಗ್ಬೇಕಿಲ್ಲ!
Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ
Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ
GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ
Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್ ಕಿಶೋರ್ ಭವಿಷ್ಯ