Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Team Udayavani, Apr 26, 2024, 5:37 PM IST

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಪಡುಬಿದ್ರಿ: ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್‌ ಬಳಿ ಎ. 26ರಂದು ಬೆಳಗ್ಗೆ ಸುಮಾರು 11 ಗಂಟೆಗೆ ಕೆಂಪು ಬಣ್ಣದ ವ್ಯಾಗನರ್‌ ಕಾರು ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಗಿದ್ದು, ಪರಿಣಾಮ ಅದರ ಚಾಲಕ ಪುರುಷೋತ್ತಮ ಆರ್‌. ಆಭ್ಯಂಕರ್‌ ಅವರ ಪತ್ನಿ ಸುಮಂಗಲಾ ಎಂ. (55) ಸಾವನ್ನಪ್ಪಿದ್ದಾರೆ.

ರಾಜ್ಯ ಹೆದ್ದಾರಿ-1ರಲ್ಲಿ ಪಡುಬಿದ್ರಿ ಕಡೆಯಿಂದ ಕಾರ್ಕಳ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಪರಿಣಾಮ ಅಪಘಾತ ಸಂಭವಿಸಿದೆ. ಈ ದಂಪತಿ ಕಾರ್ಕಳ ಮಾಳದಲ್ಲಿನ ಉಪನಯನ ಕಾರ್ಯಕ್ರಮಕ್ಕೆ ಮಂಗಳೂರು ಕಾವೂರಿನಿಂದ ಹೊರಟು ಹೋಗುತ್ತಿದ್ದರೆಂದು ಸಂಬಂಧಿಕರು ತಿಳಿಸಿದ್ದಾರೆ.

ರಾಜ್ಯ ಹೆದ್ದಾರಿಯಲ್ಲಿ ಸಹಜವಾಗಿ ವೇಗವಾಗಿಯೇ ಬರುತ್ತಿದ್ದ ಕಾರು ಒಮ್ಮೆಲೇ ರಸ್ತೆಯ ತೀರ ಎಡಕ್ಕೆ ಚಲಿಸಿ ಡಾಮರು ರಸ್ತೆಯಿಂದ ಮಣ್ಣಿನ ರಸ್ತೆಗೆ ಇಳಿದು ರಸ್ತೆಯ ಬದಿಯಲ್ಲಿದ್ದ ಸಿಮೆಂಟ್‌ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದಿತ್ತು.

ಸಾರ್ವಜನಿಕರ ಸಹಕಾರ
ಈ ಅಪಘಾತದಿಂದ ಸುಮಂಗಲಾ ಎಂ. ಅವರ ಮುಖಕ್ಕೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರು ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಚಾಲಕ ಪುರುಷೋತ್ತಮ ಅವರಿಗೂ ಗಾಯಗಳಾಗಿದ್ದು, ಸಾರ್ವಜನಿಕರ ಸಹಾಯದಿಂದ ಅವರನ್ನು ಕಾರಿನಿಂದ ಹೊರತೆಗೆದು ಚಿಕಿತ್ಸೆಯ ಬಗ್ಗೆ ಪಡುಬಿದ್ರಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಸುಮಂಗಲಾ ಅವರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

ಕಂಬದಲ್ಲಿ ಬಿರುಕು
ಕಾರಿನ ಎದುರು ಭಾಗ ಜಖಂಗೊಂಡಿದೆ. ಅಪಘಾತದ ರಭಸಕ್ಕೆ ಸಿಮೆಂಟ್‌ ವಿದ್ಯುತ್‌ ಕಂಬವು ಅಲ್ಲಲ್ಲಿ ಬಿರುಕು ಬಿಟ್ಟಿರುತ್ತದೆ. ಪುರುಷೋತ್ತಮ ಅವರು ಇತ್ತೀಚೆಗಷ್ಟೇ ಕೆಐಒಸಿಎಲ್‌ನಿಂದ ನಿವೃತ್ತರಾಗಿದ್ದು, ಕಾವೂರಿನಲ್ಲೇ ನಲೆಸಿದ್ದರು. ಮೃತ ಸುಮಂಗಲಾ ಅವರು ಪತಿ, ಅಮೇರಿಕದಲ್ಲಿರುವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

7-kmc-ramdas-pai-block

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್‌ ಎಂ.ಪೈ ಬ್ಲಾಕ್‌

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.