Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

4ರ ಬದಲು 8 ಮಂದಿಗೆ ಸೇವೆಯ ಅವಕಾಶ

Team Udayavani, May 5, 2024, 6:50 AM IST

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

ಬಂಟ್ವಾಳ: ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ 23 ಸಾವಿರಕ್ಕೂ ಅಧಿಕ ಕೋಲ ಸೇವೆಗಳ ಬುಕ್ಕಿಂಗ್‌ ಇರುವುದರಿಂದ ಭಕ್ತರಿಗೆ ಶೀಘ್ರ ಸೇವೆ ಸಂದಾಯದ ಅವಕಾಶದ ಹಿನ್ನೆಲೆಯಲ್ಲಿ ಪ್ರತೀ ದಿನ ನಡೆಯುತ್ತಿದ್ದ ಕೋಲ ಸೇವೆಯಲ್ಲಿ 4 ಬದಲಿಗೆ 8 ಮಂದಿಗೆ ಸೇವೆ ಸಂದಾಯಕ್ಕೆ ಮೇ 3ರಿಂದ ಅವಕಾಶ ನೀಡಲಾಗಿದೆ.

ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಹಾಗೂ ಕೋಲ ಸೇವೆಗಳು ವಿಶೇಷವಾಗಿದ್ದು, ವಾರದ 3 ದಿನ ಅಗೇಲು ಹಾಗೂ ವಾರದ 5 ದಿನ ಕೋಲ ಸೇವೆ ಸಂದಾಯವಾಗುತ್ತದೆ. ಬೆಳಗ್ಗೆ ನಿಗದಿತ ಸಮಯದೊಳಗೆ ಬಂದವರಿಗೆ ಎಷ್ಟು ಬೇಕಾದರೂ ಅಗೇಲು ಸೇವೆ ನೀಡುವುದಕ್ಕೆ ಅವಕಾಶವಿದ್ದು, ಆದರೆ ಈ ಹಿಂದೆ ದಿನವೊಂದಕ್ಕೆ ಕೋಲ ಸೇವೆ ನೀಡುವುದಕ್ಕೆ ಬರೀ ನಾಲ್ವರಿಗೆ ಮಾತ್ರ ಅವಕಾಶವಿತ್ತು.

ಆದರೆ ಕೋಲ ಸೇವೆಗಳ ಬುಕ್ಕಿಂಗ್‌ ಹೆಚ್ಚಿದ್ದು, ಲೆಕ್ಕಾಚಾರ ಹಾಕಿದರೆ ಅದು ಪೂರ್ಣಗೊಳುವುದಕ್ಕೆ ಕನಿಷ್ಠ 35 ವರ್ಷ ಬೇಕಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಸೋಮವಾರ ಹಾಗೂ ಶನಿವಾರ ಹೊರತುಪಡಿಸಿ ವಾರದಲ್ಲಿ 5 ದಿನ ಕೋಲ ಸೇವೆಗೆ ಅವಕಾಶವಿದ್ದರೂ ತುಳುವಿನ ಆಟಿ ತಿಂಗಳು, ಅಮಾವಾಸ್ಯೆ, ಷಷ್ಠಿ, ಸಜೀಪ ಮಾಗಣೆಯ ಜಾತ್ರೆ, ಉತ್ಸವ ಮೊದಲಾದ ಸಂದರ್ಭ ಕೋಲ ಸೇವೆ ಇರುವುದಿಲ್ಲ. ಹೀಗಾಗಿ ವರ್ಷಕ್ಕೆ 600-700 ಮಂದಿಗೆ ಮಾತ್ರ ಕೋಲ ಸೇವೆಗೆ ಅವಕಾಶ ಸಿಗುತ್ತಿತ್ತು.

ಹೀಗಾಗಿ ಭಕ್ತರಿಗೆ ಶೀಘ್ರ ಸೇವೆಗೆ ಅವಕಾಶ ಸಿಗುವ ದೃಷ್ಟಿಯಿಂದ ದೈವದ ಬಳಿ ಹರಕೆ ಮಾಡಿ ಮಾಗಣೆಯ ದೈವದ ಅಪ್ಪಣೆ ಪಡೆದು ದಿನಕ್ಕೆ 4 ಕೋಲ ಸೇವೆ ನೀಡಿದರೂ ಪ್ರತೀ ಕೋಲದಲ್ಲಿ ಇಬ್ಬರಿಗೆ ಪ್ರಸಾದದಂತೆ 8 ಮಂದಿಗೆ ಪ್ರಸಾದ ನೀಡುವುದಕ್ಕೆ ನಿರ್ಧರಿಸಲಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕೋಲ ಸೇವೆ ನೀಡಲು ಬುಕ್ಕಿಂಗ್‌ ಮಾಡಿದವರಿಗೆ ಶೀಘ್ರ ಅವಕಾಶ ಸಿಗಲಿದೆ ಎಂದು ಪಣೋಲಿಬೈಲು ಕ್ಷೇತ್ರದ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Subramanya: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Belthangady ತಾಯಿಗೆ ಅನಾರೋಗ್ಯ: ವಿದ್ಯಾರ್ಥಿನಿ ಆತ್ಮಹತ್ಯೆ

Belthangady ತಾಯಿಗೆ ಅನಾರೋಗ್ಯ: ವಿದ್ಯಾರ್ಥಿನಿ ಆತ್ಮಹತ್ಯೆ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.