IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

ಪ್ಲೇ ಆಫ್ ಲೆಕ್ಕಾಚಾರ ಆರಂಭ...

Team Udayavani, May 5, 2024, 8:06 PM IST

1-wqeqwqe

ಧರ್ಮಶಾಲಾ: ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 28 ರನ್‌ಗಳ ಜಯ ಸಾಧಿಸಿದೆ. ಜಯದೊಂದಿಗೆ ಚೆನ್ನೈ ಆಡಿದ 11ನೇ ಪಂದ್ಯದಲ್ಲಿ 6 ನೇ ಜಯ ತನ್ನದಾಗಿಸಿಕೊಂಡು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಪಂಜಾಬ್ 11 ನೇ ಪಂದ್ಯದಲ್ಲಿ 7 ನೇ ಸೋಲು ಅನುಭವಿಸಿ ಮುಂದಿನ ಹಾದಿ ಕಠಿನ ಮಾಡಿಕೊಂಡಿದೆ. ಪ್ಲೇ ಆಫ್ ಲೆಕ್ಕಾಚಾರ ಈಗ ಆರಂಭಗೊಂಡಿದೆ.

ಸೋಲಿನ ನಂತರ ಪಂಜಾಬ್ ಕಿಂಗ್ಸ್ ಭವಿಷ್ಯ ತಂಡದ ಕೈಯಲ್ಲಿಲ್ಲ. ಏತನ್ಮಧ್ಯೆ, ಕೆಕೆಆರ್ ವಿರುದ್ಧ ಲಕ್ನೋ ಮತ್ತೊಂದು ನಿರ್ಣಾಯಕ ಆಟ ನಡೆಯುತ್ತಿದೆ.

ಪಂಜಾಬ್ ಕಿಂಗ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಚೆನ್ನೈ 9 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು. ನಾಯಕ ರುತುರಾಜ್ ಗಾಯಕ್ವಾಡ್ 32, ಡೇರಿಲ್ ಮಿಚೆಲ್ 30, ಮೊಯಿನ್ ಅಲಿ 17, ರವೀಂದ್ರ ಜಡೇಜ 43, ಸ್ಯಾಂಟ್ನರ್ 11, ಶಾರ್ದೂಲ್ ಠಾಕೂರ್ 17 ರನ್ ಗಳಿಸಿದರು. ಕೊನೆಯಲ್ಲಿ ಬಂದ ಧೋನಿ ಶೂನ್ಯಕ್ಕೆ ಔಟಾದರು.

ರಾಹುಲ್ ಚಹಾರ್ ಮತ್ತು ಹರ್ಷಲ್ ಪಟೇಲ್ ತಲಾ ಮೂರು ವಿಕೆಟ್ ಕಿತ್ತರು. ಅರ್ಷದೀಪ್ ಸಿಂಗ್ 2 ವಿಕೆಟ್ ಪಡೆದರು. ನಾಯಕ ಸ್ಯಾಮ್ ಕರನ್ 1 ವಿಕೆಟ್ ಪಡೆದರು.

ಗುರಿ ಬೆನ್ನಟ್ಟಿದ ಪಂಜಾಬ್ ಜಡೇಜ ಮತ್ತು ಇತರ ಬೌಲರ್ ಗಳ ಬಿಗಿ ದಾಳಿಗೆ ನಲುಗಿ 9 ವಿಕೆಟ್ ನಷ್ಟಕ್ಕೆ 139 ರನ್ ಮಾತ್ರ ಗಳಿಸಿತು. ಪ್ರಭಸಿಮ್ರಾನ್ ಸಿಂಗ್ ಸಿ 30, ಶಶಾಂಕ್ ಸಿಂಗ್ 27 ರನ್ ಗರಿಷ್ಟ ಸ್ಕೋರ್ , ಪ್ರಮುಖ ಬ್ಯಾಟ್ಸ್ ಮ್ಯಾನ್ ಗಳು ವೈಫಲ್ಯ ಅನುಭವಿಸಿದರು. ಕೊನೆಯಲ್ಲಿ ಹರ್‌ಪ್ರೀತ್ ಬ್ರಾರ್ ಔಟಾಗದೆ 17, ಹರ್ಷಲ್ ಪಟೇಲ್ 12, ರಾಹುಲ್ ಚಹರ್ 16, ಕಗಿಸೊ ರಬಾಡ ಔಟಾಗದೆ 11 ರನ್ ಗಳಿಸಿದರೂ ಗೆಲುವು ಸಾಧ್ಯವಾಗಲಿಲ್ಲ.

ಜಡೇಜ 3 ವಿಕೆಟ್ ಕಿತ್ತು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿ ಪಂದ್ಯ ಶ್ರೇಷ್ಠ ಎನಿಸಿಕೊಂಡರು. ಸಿಮರ್ಜೀತ್ ಸಿಂಗ್ ಮತ್ತು ತುಷಾರ್ ದೇಶಪಾಂಡೆ ತಲಾ 2, ಶಾರ್ದೂಲ್ ಠಾಕೂರ್ ಮತ್ತು ಮಿಚೆಲ್ ಸ್ಯಾಂಟ್ನರ್ ತಲಾ 1 ವಿಕೆಟ್ ಪಡೆದರು.

ಟಾಪ್ ನ್ಯೂಸ್

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsadsad

T 20 WC; ಸೂಪರ್‌-8 ಗಡಿಯಲ್ಲಿ ಬಾಂಗ್ಲಾ: ನೇಪಾಲ ಕೊನೆಯ ಎದುರಾಳಿ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

1-asddasdsa

ODI ಸ್ಮೃತಿ ಮಂಧನಾ ಅಮೋಘ ಶತಕ; ಮಂಕಾದ ದಕ್ಷಿಣ ಆಫ್ರಿಕಾ

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Ajit Doval

ಇಂದಿನಿಂದ ಅಮೆರಿಕ, ಭಾರತ ಭದ್ರತಾ ಸಲಹೆಗಾರರ ಸಭೆ

1-asdsadsad

T 20 WC; ಸೂಪರ್‌-8 ಗಡಿಯಲ್ಲಿ ಬಾಂಗ್ಲಾ: ನೇಪಾಲ ಕೊನೆಯ ಎದುರಾಳಿ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.