Ayodhya;ಮೋದಿ ಭರ್ಜರಿ ರೋಡ್‌ ಶೋ: ಜನರ ಹೃದಯ ರಾಮನಷ್ಟೇ ವಿಶಾಲ

Team Udayavani, May 6, 2024, 6:10 AM IST

1-modi

ಲಕ್ನೋ: 3ನೇ ಹಂತದ ಲೋಕಸಭೆ ಚುನಾವಣೆಗೆ ಇನ್ನೇನು 2 ದಿನಗಳು ಬಾಕಿ ಇರುವಂತೆಯೇ ರವಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿದ್ದಾರೆ. ರಾಮ ಮಂದಿರ ಉದ್ಘಾಟನೆಯ ಬಳಿಕ ಅಯೋಧ್ಯೆಗೆ ಮೋದಿ ಅವರ ಮೊದಲ ಭೇಟಿ ಇದಾಗಿದ್ದು, ಜನರು ಅದ್ದೂರಿ ಸ್ವಾಗತ ಕೋರಿದ್ದಾರೆ.

ಜನಸಾಗರವೇ ಸೇರಿದ್ದ ರಸ್ತೆಯಲ್ಲಿ ತೆರೆದ ವಾಹನದಲ್ಲಿ ಪಿಎಂ ರೋಡ್‌ ಶೋ ನಡೆಸಿದ್ದು, ಸಿಎಂ ಯೋಗಿ ಆದಿತ್ಯನಾಥ ಕೂಡ ಸಾಥ್‌ ನೀಡಿದ್ದಾರೆ. ಫೈಜಾಬಾದ್‌ನ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಲಲ್ಲು ಸಿಂಗ್‌ ಪರವಾಗಿ ಮೋದಿ ಮತಯಾಚಿಸಿದ್ದು, ಜನರು ಪ್ರಧಾನಿ ಮೇಲೆ ಪುಷ್ಪವೃಷ್ಟಿಗರೆದಿದ್ದಾರೆ. ಸುಗ್ರೀವಾ ಫೋರ್ಟ್‌ ನಿಂದ ಲತಾ ಮಂಗೇಶ್ಕರ್‌ ಚೌಕ್‌ ವರೆಗೆ 2 ಕಿ.ಮೀ. ದೂರದವರೆಗೆ ರೋಡ್‌ ಶೋ ನಡೆದಿದೆ. ಇದರಲ್ಲಿ ಭಾಗಿಯಾಗಿದ್ದ ಜನರಿಗೆ ಪ್ರಧಾನಿ ಎಕ್ಸ್‌ ನಲ್ಲಿ ಧನ್ಯವಾದ ತಿಳಿಸಿದ್ದು, “ಅಯೋಧ್ಯಾ ಜನರ ಹೃದಯ ಶ್ರೀರಾಮನಷ್ಟೇ ವಿಶಾಲವಾದುದು. ನಮ್ಮನ್ನು ಬೆಂಬಲಿಸಲು ನೆರೆದಿರುವ ಎಲ್ಲರಿಗೂ ಧನ್ಯವಾದಗಳು’ ಎಂದು ಟ್ವೀಟ್‌ ಮಾಡಿದ್ದಾರೆ. 3ನೇ ಹಂತದ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರವೂ ರವಿವಾರ ಅಂತ್ಯಗೊಂಡಿದೆ.

ಬಾಲಕರಾಮನ ಆಶೀರ್ವಾದ ಪಡೆದ ಮೋದಿ
ಐತಿಹಾಸಿಕ ರಾಮ ಮಂದಿರದ ಪ್ರಾಣಪ್ರತಿಷ್ಠಾಪನೆ ನೆರವೇರಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಬಾಲಕರಾಮನ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ರಾಮನ ಪಾದಕ್ಕೆ ಪುಷ್ಪಗಳನ್ನು ಅರ್ಪಿಸಿ, ದೀರ್ಘ‌ದಂಡ ನಮಸ್ಕಾರ ಮಾಡಿ, ಬಾಲಕರಾಮನ ಆಶೀರ್ವಾದ ಕೋರಿದ್ದಾರೆ. ಪ್ರಧಾನಿ ಆಗಮನಕ್ಕೆ ಮಂದಿರವನ್ನು ಸಂಪೂರ್ಣವಾಗಿ ಸಿಂಗರಿಸಲಾಗಿತ್ತು. ಮಂದಿರದ ಆವರಣದಲ್ಲಿ ಪ್ರಧಾನಿ ಅವರನ್ನು ಕಂಡ ಭಕ್ತರು ಪುಳಕಿತರಾಗಿದ್ದಾರೆ.

ಪ್ರಧಾನಿಗೆ ಅದ್ದೂರಿ ಸ್ವಾಗತ ನೀಡಿದ ಅಯೋಧ್ಯೆ
ಮೋದಿ ಆಗಮನಕ್ಕೆ ಸ್ವಾಗತ ಕೋರಲು ರವಿವಾರ ಇಡೀ ಅಯೋಧ್ಯಾನಗರಿ ಸಜ್ಜು ಗೊಂಡಿತ್ತು. ಎಲ್ಲೆಡೆ ಪುಷ್ಪಾಲಂಕಾರ ಮತ್ತು ದೀಪಾಲಂಕಾರಗಳನ್ನು ಮಾಡಲಾಗಿತ್ತು. ಸಿಎಂ ಯೋಗಿ ಮತ್ತು ಮೋದಿ ಅವರ ಕಟೌಟ್‌ಗಳು ನಗರದ ಎಲ್ಲೆಡೆ ರಾರಾಜಿಸಿದವು. ಮಂದಿರದ ಉದ್ಘಾಟನೆ ಸಂದರ್ಭದಲ್ಲಿ ಅಯೋಧ್ಯೆ ಸಜ್ಜುಗೊಂಡಿದ್ದ ಮಾದರಿಯಲ್ಲೇ ರಸ್ತೆ ಬದಿಯಲ್ಲಿ ಸಂಪೂರ್ಣ ಕೇಸರಿ ಬಾವುಟಗಳು, ಹೂವುಗಳಿಂದ ಅಲಂಕರಿಸಲಾಗಿತ್ತು. ರೋಡ್‌ ಶೋ ನಡೆಯುವ 2 ಕಿ.ಮೀ. ಮಾರ್ಗದ ಉದ್ದಕ್ಕೂ ಜನರು ಪ್ರಧಾನಿಯನ್ನು ಸ್ವಾಗತಿಸಲು ಕಿಕ್ಕಿರಿದು ನಿಂತಿದ್ದರು. ನಗರದಾದ್ಯಂತ ಭದ್ರತಾ ವ್ಯವಸ್ಥೆಯನ್ನೂ ಬಿಗಿಗೊಳಿಸಲಾಗಿತ್ತು.

ಟಾಪ್ ನ್ಯೂಸ್

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.