ಸತ್ಯಶೋಧ ಮಿತ್ರಮಂಡಳಿ ವಿರುದ್ಧ ಕ್ರಮ ಕೈಗೊಳ್ಳಿ

Team Udayavani, Jan 16, 2017, 11:54 AM IST

Pratibhatane.jpg

ಬೆಂಗಳೂರು: “ಸತ್ಯಶೋಧ ಮಿತ್ರಮಂಡಳಿ’ ಎಂಬ ಗುಂಪು ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಬರಹಗಳನ್ನು ಬರೆಯುತ್ತಿದ್ದು, ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿವಿಧ ಮಹಿಳಾ ಸಂಘಟನೆ ಸದಸ್ಯರು ಭಾನುವಾರ ನಗರದ ಪುರಭವನ ಮುಂಭಾಗ ಪ್ರತಿಭಟನೆ ನಡೆಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣುಮಕ್ಕಳು ಹಾಗೂ ಮಹಿಳೆಯರ ಬಗ್ಗೆ ಅವಾಚ್ಯವಾಗಿ ಬರೆದು ನಿಂದಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಅದೇರೀತಿ ಸಾರ್ವಜನಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಿವೆ. ಇವುಗಳಿಗೆ ಕಡಿವಾಣ ಹಾಕಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮಹಿಳಾ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು. 

ಈ ವೇಳೆ ಮಾತನಾಡಿದ ನಾರೀ ಸುರಕ್ಷಾ ಮಹಿಳಾ ಸಂಘಟನೆಯ ಅಧ್ಯಕ್ಷೆ ಪ್ರಮೀಳಾ ನೇಸರ್ಗಿ, ಸಾಮಾಜಿಕ ಜಾಲತಾಣದಲ್ಲಿ ಕೆಲವರು “ಸತ್ಯಶೋಧ ಮಿತ್ರಮಂಡಳಿ’ ಎಂಬ ಗುಂಪು ರಚಿಸಿ ಮಹಿಳೆಯರ ಬಗ್ಗೆ ಅತ್ಯಂತ ಕೀಳು ಶಬ್ಧಗಳಲ್ಲಿ ಹಾಗೂ ವೈಯಕ್ತಿಕವಾಗಿ ಕೆಲ ಮಹಿಳೆಯರ ಶೀಲದ ಬಗ್ಗೆ ಶಂಕೆ ಬರುವ ರೀತಿ ಬರೆದು ಮಾನಸಿಕವಾಗಿ ಆಘಾತ ಉಂಟುಮಾಡುತ್ತಿದ್ದಾರೆ. ಈ ಗುಂಪಿನ ವಿರುದ್ಧ ಸರ್ಕಾರ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

“ಸತ್ಯಶೋಧ ಮಿತ್ರಮಂಡಳಿ’ಯ ಶಾಂತಾರಾಮ ಹೆಗಡೆ ಕಟ್ಟೆ, ಮಹಾಂತೇಶ್‌ ದೊಡ್ಡಮನಿ, ಗಣಪತಿ ಭಟ್‌, ಪ್ರಕಾಶ್‌ ಕಾಕಲ, ಬಾಲಚಂದ್ರ ಹೆಗಡೆ ಮುಂತಾದವರ ವಿರುದ್ಧ ಹಿಂದುಳಿದ ಮುಕ್ರಿ ಸಮಾಜದ ಮಹಿಳೆಯರು ಸೇರಿದಂತೆ, ಅನೇಕ ಹೆಣ್ಣು ಮಕ್ಕಳು ದೂರು ನೀಡಿದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಸಂಶಯ ಉಂಟುಮಾಡುತ್ತಿದೆ. ಸರ್ಕಾರಕ್ಕೆ ನಿಜವಾಗಿಯೂ ಮಹಿಳೆಯರ ಬಗ್ಗೆ ಗೌರವ ಹಾಗೂ ಕಾಳಜಿ ಇದ್ದರೆ ಸತ್ಯಶೋಧ ಮಿತ್ರಮಂಡಳಿ ವಿರುದ್ಧ 24 ಗಂಟೆಗಳಲ್ಲಿ ಕ್ರಮ ಕೈಗೊಳ್ಳಲಿ ಎಂದು ಸವಾಲು ಹಾಕಿದರು. 

ಮುಕ್ರಿ ಸಮಾಜದ ಮಂಜುಳಾ ಮುಕ್ರಿ, ರಂಣ ರಾಜಿಣಿ ಸಂಘಟನೆಯ ರಾಜ್ಯ ಪ್ರಮುಖರಾದ ಕು.ಭವ್ಯಾ ಗೌಡ, ಅಖೀಲ ಹವ್ಯಕ ಮಹಾಸಭೆಯ ರಾಜಲಕ್ಷಿ ಬೇಳೂರು, ಮಡಿವಾಳ ಸಮಾಜದ ಜಯಮ್ಮ, ಹವ್ಯಕ ಮಹಾಮಂಡಲದ ಈಶ್ವರೀ ಬೇರ್ಕಡವು, ಕಲ್ಪನಾ ತಲವಾಟ, ಸಂಧ್ಯಾ ಹೊನ್ನಾವರ, ಹೈಕೋರ್ಟ್‌ ವಕೀಲರಾದ ದಿವ್ಯಾ, ನಾರೀ ಸುರಕ್ಷಾದ ಅನುರಾಧಾ, ಶಿಲ್ಪಾ, ಅಕ್ಷತಾ ಸೇರಿದಂತೆ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.