ನೋಟು ಅಮಾನ್ಯದಿಂದ ಅರ್ಥ ವ್ಯವಸ್ಥೆ ಬುಡಮೇಲು


Team Udayavani, Jan 27, 2017, 11:13 AM IST

paranjay-guha-takurta.jpg

ಬೆಂಗಳೂರು: “ನೋಟು ಅಮಾನ್ಯಗೊಳಿಸಿರುವ ಕೇಂದ್ರ ಸರ್ಕಾರದ ಅವೈಜ್ಞಾನಿಕ ನಿರ್ಧಾರದಿಂದ ರಾಷ್ಟ್ರದ ಅರ್ಥ ವ್ಯವಸ್ಥೆ ಬುಡಮೇಲಾಗುವಂತಾಗಿದೆ ಎಂದು,” ಹಿರಿಯ ಪತ್ರಕರ್ತ ಪರಂಜಯ್‌ ಗುಹಾ ಠಾಖುರ್ತ ಅತಂಕ ವ್ಯಕ್ತಪಡಿಸಿದ್ದಾರೆ. 

ಸಿಪಿಐ ವತಿಯಿಂದ ಗಾಂಧಿ ಭವನದಲ್ಲಿ ಗುರುವಾರ ಆಯೋಜಿಸಿದ್ದ “ನೋಟು ಅಮಾನ್ಯದಿಂದ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯದ ಮೇಲಾಗುವ ಪರಿಣಾಮ’ಗಳ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು “ಭಷ್ಟ್ರಾಚಾರ ತಡೆ, ಕಪ್ಪು ಹಣ ನಿಯಂತ್ರಣ ಮತ್ತು ಭಯೋತ್ಪಾದನೆ ನಿಗ್ರಹಕ್ಕಾಗಿ 500, 1000 ರೂ. ಮುಖಬೆಲೆಯ ನೋಟು ರದ್ದು ಮಾಡಲಾಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಒಪ್ಪುವಂತಹದ್ದಲ್ಲ.

ನೋಟು ಅಮಾನ್ಯಗೊಳಿಸಿರುವುದು ಅವೈಜ್ಞಾನಿಕ. ದೇಶದ ಅರ್ಥ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.  ಸದ್ಯಕ್ಕೆ ಸಮಸ್ಯೆ ಬಿಸಿ ತಟ್ಟದಿದ್ದರೂ ಮುಂದಿನ ಕೆಲವು ದಿನಗಳಲ್ಲಿ ದೇಶ ಎಂದೂ ಕಾಣದ ಅರ್ಥಿಕ ಸಂಕಷ್ಟ ಎದುರಿಸಬೇಕಾಗಿದೆ,” ಎಂದು ಭವಿಷ್ಯ ನುಡಿದರು. 

“ನೋಟು ರದ್ದು ಮಾಡಿರುವುದರಿಂದ ಸಾರ್ವಜನಿಕರು ಇಂದಿಗೂ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದರೆ, ಪ್ರತಿಭಟಿಸಿದರೆ ಅದಕ್ಕೆ ಬೇರೆ ಅರ್ಥ ಕಲ್ಪಿಸಲಾಗುತ್ತದೆ ಎಂಬ ಕಾರಣಕ್ಕೆ ಯಾರೂ ಪ್ರತಿಭಟಿಸುತ್ತಿಲ್ಲ. ಜನರು ಸಹನೆ ಕಳೆದುಕೊಂಡರೆ ದೇಶದ ಸ್ಥಿತಿ ಮತ್ತಷ್ಟು ಹದಗೆಡಲಿದೆ,” ಎಂದು ಎಚ್ಚರಿಸಿದರು. 

ಕರ್ನಾಟಕ ಪ್ರದೇಶ ಬ್ಯಾಂಕ್‌ ನೌಕರರ ಸಂಘಟನೆ ಅಧ್ಯಕ್ಷ ಎಚ್‌.ವಿ.ರೈ, ಎಐಟಿಯುಸಿ ರಾಜ್ಯ ಸಮಿತಿ ಅಧ್ಯಕ್ಷ ಎಚ್‌.ವಿ.ಅನಂತಸುಬ್ಬರಾವ್‌, ಭಾರತೀಯ ವಕೀಲರ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ್‌ ಉಪಸ್ಥಿತರಿದ್ದರು.

ಇಂದಿರಾ ಹಾದಿಯಲ್ಲಿ ಮೋದಿ: “ಪ್ರಧಾನಿ ನರೇಂದ್ರ ಮೋದಿ ಅವರು ದಿವಂಗತ ಇಂದಿರಾ ಗಾಂಧಿ ಅವರ ಹಾದಿಯಲ್ಲೇ ನಡೆಯುತ್ತಿದ್ದಾರೆ. ಅವರಂತೇ ಸರ್ವಾಧಿಕಾರ ಮನೋಭಾವ ಪ್ರದರ್ಶಿಸುತ್ತಿದ್ದಾರೆ. ತಾವು ನಡೆದ ದಾರಿಯನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎಂಬ ನಿರ್ಬಂಧವನ್ನು ದೇಶದ ಜನರ ಮೇಲೆ ಹೇರುತ್ತಿದ್ದಾರೆ. ಪಂಜಾಬ್‌, ಗೋವಾ, ಉತ್ತರಾಖಂಡ್‌, ಉತ್ತರಪ್ರದೇಶ ಹಾಗೂ ಮಣಿಪುರದ ಚುನಾವಣೆಗಳು ನೋಟು ರದ್ದತಿ ನಿರ್ಧಾರ ಸರಿಯೋ? ತಪ್ಪೊ ಎಂಬುದನ್ನು ತಿಳಿಸುತ್ತದೆ ಎಂದು ಪರಂಜಯ್‌ ಗುಹಾ ಠಾಖುರ್ತ  ಹೇಳಿದ್ದಾರೆ.

ಟಾಪ್ ನ್ಯೂಸ್

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.