ಜಯಲಲಿತಾ ಸಾವಿನ ನಿಗೂಢತೆಯನ್ನು ಭೇದಿಸಿದ ಲಂಡನ್‌ ವೈದ್ಯರು

Team Udayavani, Feb 6, 2017, 4:24 PM IST

Jayalalita1-700.jpg

ಚೆನ್ನೈ: ತಮಿಳು ನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಸಾವಿನ ನಿಗೂಢತೆಯನ್ನು ಲಂಡನ್‌ ವೈದ್ಯರು ಕೊನೆಗೂ ಅನಾವರಣಗೊಳಿಸಿದ್ದಾರೆ.

ಜಯಲಲಿತಾ ನಿಧನ ಹೊಂದಿದ ಸುಮಾರು 60 ದಿನಗಳ ಬಳಿಕ ಇದೇ ಮೊದಲ ಬಾರಿಗೆ ಲಂಡನ್‌ ವೈದ್ಯರು ಆಕೆಯ ಸಾವಿಗೆ ಕಾರಣವಾದ ಸಂಗತಿಯನ್ನು ಬಹಿರಂಗಪಡಿಸಲು ಪತ್ರಿಕಾ ಗೋಷ್ಠಿ ನಡೆಸಿ “ಜಯಾ ಅವರ ರಕ್ತದಲ್ಲಿನ ವಿಷಕಾರಿ ಅಂಶಗಳು ಹೃದಯವನ್ನು ಸೇರಿಕೊಂಡ ಪ್ರಯುಕ್ತ ಆಕೆಗೆ ಹೃತ್‌ ಕ್ರಿಯೆ ನಿಂತು ಸಾವು ಸಂಭವಿಸಿತ್ತು’ ಎಂದು ಹೇಳಿದ್ದಾರೆ.

ಜಯಲಲಿತಾ ಅವರು ತೀವ್ರವಾದ ಸೋಂಕಿನಿಂದ ಬಳಲುತ್ತಿದ್ದರು; ಆಕೆಯ ದೇಹದಲ್ಲಿನ ರಕ್ತ ಕೆಟ್ಟು ಹೋಗಿತ್ತು. ಮೇಲಾಗಿ ಆಕೆಯನ್ನು ಅನೇಕ ವರ್ಷಗಳಿಂದ ಬಾಧಿಸುತ್ತಿದ್ದ ಡಯಾಬಿಟಿಸ್‌ ಕಾಯಿಲೆ ತೀವ್ರಗೊಂಡಿತ್ತು ಎಂದು ಜಯಾಗೆ ಚಿಕಿತ್ಸೆ ನೀಡುತ್ತಿದ್ದ ಲಂಡನ್‌ ವೈದ್ಯ ಡಾ. ರಿಚರ್ಡ ಬೀಲೆ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ಜಯಲಲಿತಾ ಬಹುತೇಕ ಗುಣಮುಖರಾಗಿದ್ದು ಶೀಘ್ರವೇ ಆಸ್ಪತ್ರೆಯಿಂದ ಬಿಡುಗಡೆಗೊಂಡು ತಮ್ಮ ನಿತ್ಯ ಕಾರ್ಯಗಳಲ್ಲಿ ಈ ಹಿಂದಿನಂತೆಯೇ ತೊಡಗಿಕೊಳ್ಳಲಿದ್ದಾರೆ ಎಂಬ ವೈದ್ಯಕೀಯ ವರದಿಗಳು ಬರುತ್ತಿದ್ದಂತೆಯೇ ಜಯಾ ಸಾವು ಹಠಾತ್ತನೇ ಸಂಭವಿಸಿತ್ತು. ಹಾಗಾಗಿ ಆಕೆಯ ಸಾವು ನಿಗೂಢವೆಂದೇ ಎಲ್ಲೆಡೆ ಶಂಕಿಸಲಾಗಿತ್ತು. ಈ ಶಂಕೆಯನ್ನು ನಿವಾರಿಸುವ ನಿಟ್ಟಿನಲ್ಲಿ ಈ ಸ್ಪಷ್ಟನೆ ನೀಡುತ್ತಿರುವುದಾಗಿ ಡಾ. ರಿಚರ್ಡ್‌ ಬೀಲೆ ಹೇಳಿದರು. 

ಜಯಲಲಿತಾ ನಿಧನದ ಬಳಿಕ ಆಕೆಯ ಪರಮ ವಿಶ್ವಾಸಿ ಬಂಟ ಓ ಪನ್ನೀರಸೆಲ್ವಂ ಮುಖ್ಯಮಂತ್ರಿಯಾಗಿ ಮುಂದುವರಿದು ಈಗ ಒಂದು ದಿನದ ಹಿಂದಷ್ಟೇ ಅವರು ತಮ್ಮ ಸ್ಥಾನವನ್ನು ಚಿನ್ನಮ್ಮ ಶಶಿಕಲಾ ಅವರಿಗಾಗಿ ಬಿಟ್ಟುಕೊಟ್ಟಿದ್ದಾರೆ. ಈ ಬೆನ್ನಲ್ಲೇ ಲಂಡನ್‌ ವೈದ್ಯರು ಜಯಾ ಸಾವಿನ ನಿಗೂಢತೆಯ ಹಿಂದಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. 

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.