ಅಡ್ವೋಕೇಟ್‌ ಜನರಲ್‌ಗೆ ಹೈಕೋರ್ಟ್‌ ನಿರ್ದೇಶನ 

Team Udayavani, Feb 7, 2017, 3:45 AM IST

High-court-Karnataka-New.jpg

ಬೆಂಗಳೂರು: ರಾಜ್ಯ ಸರ್ಕಾರಿ  ನೌಕರರ ವರ್ಗಾವಣೆಯಲ್ಲಿ 2013ರಲ್ಲಿ ರೂಪಿಸಿರುವ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪಾಲಿಸುತ್ತಿದೆಯೇ  ಅಥವಾ ಮುಖ್ಯಮಂತ್ರಿಗಳ ಆದೇಶ ಪಾಲಿಸುತ್ತಿದೆಯೇ ? ಎಂಬುದನ್ನು ಸ್ಪಷ್ಟಪಡಿಸುವಂತೆ ರಾಜ್ಯದ ಅಡ್ವೋಕೇಟ್‌ ಜನರಲ್‌ಗೆ ಹೈಕೋರ್ಟ್‌ ಸೋಮವಾರ ನಿರ್ದೇಶಿಸಿದೆ.

ಅಲ್ಲದೆ, ಮುಖ್ಯಮಂತ್ರಿಗಳ ಶಿಫಾರಸು ಮೇರೆಗೆ ವರ್ಗಾವಣೆ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ವಿಭಾಗದ ಸಬ್‌ ರಿಜಿಸ್ಟ್ರಾರ್‌ ಹುದ್ದೆಯನ್ನು ಹೈಕೋರ್ಟ್‌ ಅಮಾನತ್ತಿನಲ್ಲಿಟ್ಟು ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಶಿಫಾರಸು ಮೇರೆಗೆ ತಮ್ಮ ಹುದ್ದೆಗೆ ಮತ್ತೂಬ್ಬ ಮಹಿಳಾ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ದಾಸನಪುರ ವಿಭಾಗದ ಸಬ್‌ ರಿಜಿಸ್ಟ್ರಾರ್‌ ಆಗಿದ್ದ ಎಸ್‌.ದಿನೇಶ್‌ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಜಯಂತ್‌ ಪಟೇಲ್‌ ಮತ್ತು ನ್ಯಾ.ಎ.ವಿ.ವೇಣುಗೋಪಾಲ ಗೌಡ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ದಾಸನಪುರ ವಿಭಾಗದ ಸಬ್‌ ರಿಜಿಸ್ಟ್ರಾರ್‌ ಹುದ್ದೆಗೆ ಅರ್ಜಿದಾರರಾದ ಎಸ್‌.ದಿನೇಶ್‌ ಮತ್ತು ಲಲಿತಾ ಅಮೃತೇಶ್‌ ಅವರನ್ನು ವರ್ಗಾವಣೆ ಮಾಡಲಾಗಿದೆ. ಲಲಿತಾ ಅಮೃತೇಶ್‌ ಈ ವರ್ಗಾವಣೆಯಲ್ಲಿ ರಾಜಕೀಯ ಒತ್ತಡವಿದ್ದು, ಸರ್ಕಾರಿ ನೌಕರರ ವರ್ಗಾವಣೆ ನಿಯಮಗಳು ಉಲ್ಲಂಘನೆಯಾಗಿದೆ ಎಂದು ದೂರಲಾಗಿದೆ. ಹೀಗಾಗಿ,  ನ್ಯಾಯಾಲಯವು ಈ ಹುದ್ದೆಯನ್ನು ಅಮಾನತ್ತಿನಟ್ಟಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಫೆ.16ಕ್ಕೆ ಮುಂದೂಡಿದೆ.

ಪ್ರಕರಣವೇನು?:
ಸಬ್‌ ರಿಜಿಸ್ಟ್ರಾರ್‌ ಆದ ಎಸ್‌ ದಿನೇಶ್‌ ಅವರನ್ನು 2016ರ ಜೂ.10ರಂದು ನಾಗರಭಾವಿ ಉಪ ನೋಂದಣಿ ಕಚೇರಿಯಿಂದ ನಗರದ ಕೇಂದ್ರ ಉಪ ನೋಂದಣಿ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ನಂತರ ಅವರನ್ನು ದಾಸನಪುರ ಉಪ ನೋಂದಣಿ ಕಚೇರಿಗೆ ವರ್ಗಾಯಿಸಲಾಗಿತ್ತು. ಸಾಲದೇ ದಿನೇಶ್‌ ಸ್ಥಾನಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ
ನೋಂದಣಾಧಿಕಾರಿ ಕಚೇರಿಯಲ್ಲಿ ಸೂಪರಿಂಟೆಂಡೆಂಟ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಲಲಿತಾ ಅಮೃತೇಶ್‌ ಅವರನ್ನು ವರ್ಗಾಯಿಸಲಾಗಿತ್ತು.

ಇದರಿಂದ ದಿನೇಶ್‌ ಅವರು ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣ(ಕೆಎಟಿ) ಮೆಟ್ಟಿಲೇರಿದ್ದರು. ಕೆಎಟಿ ಅವರ ಅರ್ಜಿ ವಜಾಗೊಳಿಸಿತ್ತು. ಹೀಗಾಗಿ, ದಿನೇಶ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.