ಕಪ್ಪತಗುಡ್ಡ: ಸಿಎಂ ಅಧ್ಯಕ್ಷತೆಯಲ್ಲಿ ನಾಳೆ ಸಭೆ
Team Udayavani, Feb 19, 2017, 3:45 AM IST
ಧಾರವಾಡ: ಕಪ್ಪತಗುಡ್ಡ ಸಂರಕ್ಷಣೆಗೆ ಸಂಬಂಧಿಸಿದಂತೆ ಫೆ. 20ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿರುವ
ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ವನ್ಯಜೀವಿ ಮಂಡಳಿ ಸಭೆ ನಡೆಯಲಿದೆ ಎಂದು ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಪ್ಪತಗುಡ್ಡ ರಕ್ಷಣೆಗಾಗಿ ಹಗಲಿರುಳು ಧರಣಿ ಮಾಡಿರುವುದು ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಪರಿಸರ ಪ್ರೇಮಿಗಳನ್ನು ಸಭೆಗೆ ಆಹ್ವಾನಿಸಿದ್ದಾರೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಅರಣ್ಯ ಸಚಿವರು, ಗದಗ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರೇತರ ಪ್ರತಿನಿಧಿಧಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಪಾಲ್ಗೊಳ್ಳುವರು ಎಂದರು