ಅಭಿಮಾನಿ ಟೀಕೆಗೆ ರಾಹುಲ್ ಟ್ವೀಟ್
Team Udayavani, Mar 1, 2017, 11:14 AM IST
ಮುಂಬಯಿ: ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯ ವಿರುದ್ಧ ಹೀನಾಯವಾಗಿ ಸೋತ ಬೆನ್ನಲ್ಲೇ ಭಾರತ ತಂಡದ ಆಟಗಾರರ ಕಳಪೆ ಪ್ರದರ್ಶನದ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ಇದಕ್ಕೆ ಆರಂಭಿಕ ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ ಕೂಡ ಹೊರತಾಗಿಲ್ಲ. ಅವರು ಅಭಿಮಾನಿಯೊಬ್ಬನಿಂದ ಟ್ವಿಟರ್ನಲ್ಲಿ ಟೀಕೆಗೆ ಗುರಿಯಾಗಿದ್ದಾರೆ. ಆ ಆಭಿಮಾನಿಗೆ ಟ್ವಿಟರ್ನಲ್ಲೇ ಸ್ವಲ್ಪ ಖಾರವಾಗಿ ಉತ್ತರ ನೀಡಿದ್ದಾರೆ.
ರಾಹುಲ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟ್ವಿಟರ್ನಲ್ಲಿ ತನ್ನನ್ನು ಫಾಲೋ ಮಾಡಿದ್ದಕ್ಕೆ ಭಾರೀ ಸಂತಸ ವ್ಯಕ್ತಪಡಿಸಿದ್ದರು. “ನನ್ನ ಪಾಲಿಗೆ ಎಂಥ ದಿನವಿದು. ಕ್ರಿಕೆಟ್ ದಂತಕತೆಯೊಬ್ಬರು ನನ್ನನ್ನು ಫಾಲೋ ಮಾಡಿದ್ದಾರೆ. ಇದರಿಂದ ನನಗೆ ಬಹಳ ಸಂತೋಷವಾಗಿದೆ’ ಎಂದಿದ್ದರು.
ಈ ಟ್ವೀಟ್ ಹಾಕಿದ ಕೆಲವೇ ಕ್ಷಣಗಳಲ್ಲಿ ಅಭಿಮಾನಿಯೊಬ್ಬ ಕೆ.ಎಲ್. ರಾಹುಲ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. “ಅದನ್ನೆಲ್ಲ ಮೊದಲು ಬಿಡು, ರನ್ ಮಾಡುವುದು ಹೇಗೆ ಎನ್ನುವ ದಾರಿಯನ್ನು ಮೊದಲು ಹುಡುಕು’ ಎಂದು ತಿಳಿಸಿದ್ದಾರೆ. ಇದಕ್ಕೆ ರಾಹುಲ್ ಪ್ರತಿ ಟ್ವೀಟ್ ಮಾಡಿ, “ನಿನಗೆ ಹೇಗೆ ರನ್ ಮಾಡುವುದು ಎನ್ನುವುದು ಚೆನ್ನಾಗಿ ಗೊತ್ತು. ದಯವಿಟ್ಟು ಬಂದು ನನಗೂ ಸ್ವಲ್ಪ ಹೇಳಿಕೊಡು…’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !