ಅಭ್ಯರ್ಥಿ ಕಣಕ್ಕಿಳಿಸುವಲ್ಲಿ ಜೆಡಿಎಸ್‌ ಡೋಲಾಯಮಾನ ಸ್ಥಿತಿ

Team Udayavani, Mar 13, 2017, 3:45 AM IST

jds.jpg

ಬೆಂಗಳೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಬಿರುಸಿನ ಪ್ರಚಾರ ಆರಂಭಿಸಿದ್ದರೂ ಜೆಡಿಎಸ್‌ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ವಿಚಾರದಲ್ಲಿ ಇನ್ನೂ ಡೋಲಾಯಮಾನ ಸ್ಥಿತಿಯಲ್ಲಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಬೇಡವೆಂಬ ಚಿಂತನೆಯಲ್ಲಿದ್ದರೆ, ಸ್ಥಳೀಯ ಕಾರ್ಯಕರ್ತರು ಸ್ಪರ್ಧೆಗೆ ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ಏನು ಮಾಡಬೇಕೆಂಬ ಗೊಂದಲದಲ್ಲಿ ಜೆಡಿಎಸ್‌ ಮುಖಂಡರು ಇದ್ದಾರೆಂದು ಮೂಲಗಳು ತಿಳಿಸಿವೆ.

ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿರುವುದು ಒಂದು ವರ್ಷದ ಅವಧಿಗಷ್ಟೇ. ಈ ಒಂದು ವರ್ಷದಲ್ಲಿ ದೊಡ್ಡಮಟ್ಟದ ರಾಜಕೀಯ ಧ್ರುವೀಕರಣವಾಗಿ ಪಕ್ಷಕ್ಕೆ ಭಾರಿ ಪ್ರಮಾಣದ ಲಾಭ ಆಗುವಂತಹದ್ದೇನೂ ಇಲ್ಲ. ಅಲ್ಲದೆ, ಮಹದೇವಪ್ರಸಾದ್‌ ಮೂಲತಃ ಜನತಾ ಪರಿವಾರದವರು. ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಕಣಕ್ಕಿಳಿದಿರುವ ಅವರ ಪತ್ನಿಯ ಪರ ಅನುಕಂಪ ಇರುತ್ತದೆ.

ಇನ್ನೊಂದೆಡೆ, ನಂಜನಗೂಡಿನಲ್ಲಿ ಕಳಲೆ ಕೇಶವಮೂರ್ತಿ ಅವರನ್ನು ಅಭ್ಯರ್ಥಿ ಎಂದು ಹಿಂದೆ ನಿರ್ಧರಿಸಲಾಗಿತ್ತಾದರೂ ಅವರು ಕಾಂಗ್ರೆಸ್‌ ಸೇರಿ ಸ್ಪರ್ಧೆಗಿಳಿದಿದ್ದಾರೆ. ಹೀಗಾಗಿ ಆ ಕ್ಷೇತ್ರಕ್ಕೆ ಹೊಸಬರನ್ನು ಹುಡುಕುವುದರ ಜತೆಗೆ ಚುನಾವಣೆಗೆ “ಸಂಪನ್ಮೂಲ’ ಕ್ರೋಡೀಕರಿಸಬೇಕಾಗುತ್ತದೆ.

ಅಲ್ಲದೆ, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ದೊಡ್ಡಮಟ್ಟದ ಜಿದ್ದಾಜಿದ್ದಿಗೆ ಇಳಿದಿವೆ. ಇಂತಹ ಸಂದರ್ಭದಲ್ಲಿ ಜೆಡಿಎಸ್‌ ನಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ, ಒಂದು ವೇಳೆ ಪಕ್ಷದ ಅಭ್ಯರ್ಥಿಗಳು ತೀರಾ ಕಡಿಮೆ ಮತಗಳನ್ನು ಪಡೆದುಕೊಂಡರೆ ಕ್ಷೇತ್ರಗಳಲ್ಲಿ ಜೆಡಿಎಸ್‌ಗೆ ನೆಲೆ ಇಲ್ಲವೆಂಬ ಸಂದೇಶ ಹೋಗುತ್ತದೆ. ಇದು ಮುಂದಿನ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ ಒಂದು ವರ್ಷಕ್ಕಾಗಿ ಇಷ್ಟೊಂದು ತಾಕಲಾಟವೇಕೆ ಎಂಬ ಅಭಿಪ್ರಾಯಕ್ಕೆ ದೇವೇಗೌಡ ಮತ್ತು ಕುಮಾರಸ್ವಾಮಿ ಬಂದಿದ್ದಾರೆ ಎನ್ನಲಾಗಿದೆ.

ಆದರೆ, ಸ್ಥಳೀಯ ಮಟ್ಟದಲ್ಲಿ ಪಕ್ಷದ ವರ್ಚಸ್ಸು ಮತ್ತು ಅಸ್ತಿತ್ವ ಉಳಿಸಿಕೊಳ್ಳಲು ಸ್ಪರ್ಧೆ ಅನಿವಾರ್ಯ. ಉಪಚುನಾವಣೆ ಫ‌ಲಿತಾಂಶ ನಮಗೆ ಮುಖ್ಯವಲ್ಲ. ಮುಂದಿನ ಚುನಾವಣೆಗೆ ಈ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಒಂದು ನೆಲೆ ಬೇಕು. ಅದಕ್ಕಾದರೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎನ್ನುವುದು ಸ್ಥಳೀಯ ಕಾರ್ಯಕರ್ತರ ಒತ್ತಾಯವಾಗಿದೆ.

15ಕ್ಕೆ ತೀರ್ಮಾನ: ಎಲ್ಲ ಗೊಂದಲಗಳಿಗೆ ಮಾ.15 ರಂದು ನಡೆಯಲಿರುವ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ತೆರೆ ಬೀಳಲಿದೆ. ಬಜೆಟ್‌ ಅಧಿವೇಶನದ ಹಿನ್ನೆಲೆಯಲ್ಲಿ ಮಾ. 15ರಂದು ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಅಲ್ಲಿ ಈ ವಿಚಾರದ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ಈ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಬೇಡ. ಚುನಾವಣೆಗೆ ಪಕ್ಷ ಸ್ಪರ್ಧಿಸಬೇಕು ಎಂದಾದರೆ ಸರ್ವಾನುಮತದ ತೀರ್ಮಾನವಾಗಬೇಕು ಎಂಬುದು ಜೆಡಿಎಸ್‌
ವರಿಷ್ಠ ದೇವೇಗೌಡರ ಅಭಿಪ್ರಾಯವಾಗಿದೆ ಎಂದು ಹೇಳಲಾಗಿದೆ. 

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.