ಅಮೆರಿಕದಲ್ಲಿ ಬಾಕ್ಸರ್ ಅಲಿ ಮಗನಿಗೆ ಅವಮಾನ?
Team Udayavani, Mar 14, 2017, 12:29 AM IST
ವಾಷಿಂಗ್ಟನ್: ಅಮೆರಿಕದ ಬಾಕ್ಸಿಂಗ್ ದಂತಕತೆ ಮೊಹಮ್ಮದ್ ಅಲಿ ಪುತ್ರ ಮೊಹಮ್ಮದ್ ಅಲಿ ಜೂನಿಯರ್ ಅವರನ್ನು ಅಮೆರಿಕದ ವಿಮಾನ ನಿಲ್ದಾಣದಲ್ಲಿ ಮತ್ತೆ ಬಂಧಿಸಲಾಗಿದೆ ಎನ್ನಲಾಗಿದೆ. ಆದರೆ ಈ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಯಾವುದೇ ಖಚಿತ ಮಾಹಿತಿ ಲಭಿಸಿಲ್ಲ.
ವಾಷಿಂಗ್ಟನ್ ದೇಶೀಯ ವಿಮಾನ ನಿಲ್ದಾಣದಲ್ಲಿ ಅಲಿ ಜೂನಿಯರ್ ಜೆಟ್ ಬ್ಲೂ ಏರ್ವೇಸ್ನಿಂದ ಫ್ಲೋರಿಡಾಗೆ ತೆರಳುವವರಿದ್ದರು. ಈ ಸಮಯದಲ್ಲಿ ಅವರನ್ನು ಭದ್ರತಾ ಸಿಬಂದಿಗಳು ಬಂಧಿಸಿ ಸುಮಾರು 20 ನಿಮಿಷಗಳ ಕಾಲ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಇದು ಮೊಹಮ್ಮದ್ ಅಲಿ ಜೂನಿಯರ್ ಅವರಿಗೆ ಅಮೆರಿಕ ವಿಮಾನ ನಿಲ್ದಾಣದಲ್ಲಿ ಆಗುತ್ತಿರುವ ಎರಡನೇ ಅವಮಾನ. ಇದಕ್ಕೂ ಮುನ್ನ ಫೆ.7ರಂದು ಅಲಿ ಜೂನಿಯರ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು ದೊಡ್ಡ ಸುದ್ದಿಯಾಗಿತ್ತು. ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಸರಕಾರ ಆಡಳಿತಕ್ಕೆ ಬಂದ ಅನಂತರ ಮುಸ್ಲಿಂ ಹೆಸರುಳ್ಳ ವ್ಯಕ್ತಿಗಳನ್ನು ಹೆಚ್ಚಿನ ವಿಚಾರಣೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ