ಕರ್ನಾಟಕ ಮಹಾಮಂಡಲ ಮೀರಾ-ಭಾಯಂದರ್‌  ವಾರ್ಷಿಕ ಕ್ರೀಡೋತ್ಸವ


Team Udayavani, Mar 21, 2017, 4:58 PM IST

18-Mum04a.jpg

ಮುಂಬಯಿ: ಕರ್ನಾಟಕ ಮಹಾಮಂಡಲ ಮೀರಾ-ಭಾಯಂದರ್‌ ಇದರ ಯುವ ವಿಭಾಗದ ವತಿಯಿಂದ ವಾರ್ಷಿಕ ಕ್ರೀಡೋತ್ಸವವು ಮಾ. 5 ರಂದು ಭಾಯಂದರ್‌ ಪೂರ್ವದ, ನವಘರ್‌ ರೋಡ್‌ನ‌ ಗುರುದ್ವಾರ ಹಾಲ್‌ ಸಮೀಪದ ಭಾರತ ರತ್ನ ಸಚಿನ್‌ ತೆಂಡೂಲ್ಕರ್‌ ಮೈದಾನದಲ್ಲಿ ಜರಗಿತು.

ಸಮಾರಂಭದಲ್ಲಿ ಆ್ಯಥ್ಲೆಟಿಕ್‌ ಆಟಗಾರ ಆಯುಷ್‌ ಶೆಟ್ಟಿ ಮತ್ತು ರೋಲರ್‌ ಸ್ಕೇಟಿಂಗ್‌ ಆಟಗಾರ ಸವಿತ್‌ ಬಂಗೇರ ಅವರನ್ನು ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಸಾಧಕರನ್ನು ಗಣ್ಯರು ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಗೌರವಿಸಿ ಅಭಿನಂದಿಸಿದರು.

ಕ್ರೀಡೋತ್ಸವದಲ್ಲಿ ನಡೆದ ಕ್ರಿಕೆಟ್‌ ಪಂದ್ಯಾಟದಲ್ಲಿ ಮನೀಶ್‌ ಸುವರ್ಣ ಮತ್ತು ತಂಡ ಪ್ರಥಮ, ಅರುಣ್‌ ಶೆಟ್ಟಿ ಪಣಿಯೂರು ಮತ್ತು ತಂಡ ದ್ವಿತೀಯ, ಹಗ್ಗ ಜಗ್ಗಾಟದಲ್ಲಿ ರಾಘವೇಂದ್ರ ಬಂಗೇರ ಮತ್ತು ತಂಡ ಪ್ರಥಮ, ಶೈಲೇಶ್‌ ಶೆಟ್ಟಿ ಮತ್ತು ತಂಡ ದ್ವಿತೀಯ, ಮಹಿಳೆಯರ ಚೆಂಡೆಸೆತ ಸ್ಪರ್ಧೆಯಲ್ಲಿ ಸವಿತಾ ಡಿ. ಶೆಟ್ಟಿ ಮತ್ತು ತಂಡ ಪ್ರಥಮ, ಮಾಲತಿ ಬಂಗೇರ ಮತ್ತು ತಂಡ ದ್ವಿತೀಯ ಬಹುಮಾನವನ್ನು ತನ್ನದಾಗಿಸಿಕೊಂಡಿದ್ದು, ಅಲ್ಲದೆ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರನ್ನು ಗಣ್ಯರು ಗೌರವಿಸಿದರು.

ಸಮಾರಂಭದ ವೇದಿಕೆಯಲ್ಲಿ ಪಲಿಮಾರು ಮಠದ ಪ್ರಧಾನ ಅರ್ಚಕ ರಾಧಾಕೃಷ್ಣ ಭಟ್‌, ಸೈಂಟ್‌ ಆ್ಯಗ್ನೇಸ್‌ ಶಾಲೆಯ ಅಧ್ಯಕ್ಷ ಅರುಣೋದಯ ರೈ, ಅಯ್ಯಪ್ಪ ಆರಾಧನಾ ಭಕ್ತವೃಂದದ ಸುಧಾಕರ್‌ ಪೂಜಾರಿ ಮತ್ತು ಹರೀಶ್‌ ಪಲಿಮಾರ್‌, ಸಮಿತಿಯ ಸದಸ್ಯ ಪ್ರಭಾಕರ ಶೆಟ್ಟಿ, ಮಂಡಳಿಯ ಅಧ್ಯಕ್ಷ ರವಿಕಾಂತ್‌ ಶೆಟ್ಟಿ ಇನ್ನ, ಉಪಾಧ್ಯಕ್ಷ ಕರುಣಾಕರ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ್‌ ಕೆ. ಕೋಟ್ಯಾನ್‌, ಕೋಶಾಧಿಕಾರಿ ಗುಣಪಾಲ್‌ ಶೆಟ್ಟಿ, ಸಂಸ್ಥೆಯ ಸ್ಥಾಪಕಾಧ್ಯಕ್ಷ ಚಂದ್ರಶೇಖರ್‌ ವಿ. ಶೆಟ್ಟಿ, ಜತಿನ್‌ ಮಾಯವಂಶಿ, ಅಶ್ವಿ‌ನ್‌ ದಾಮೋರ್‌, ದಿನೇಶ್‌ ನಲವಡೆ, ರಾಜೇಶ್‌ ವೇತೋಸ್ಕರ್‌, ಅರುಣ್‌ ಶೆಟ್ಟಿ ಪಕ್ಕಳ, ಅರುಣ್‌ ಶೆಟ್ಟಿ ಪಣಿಯೂರು, ದಯಾನಂದ ಶೆಟ್ಟಿ ಮಾಗಂದಡಿ, ಸುಭಾಶ್‌ ಶೆಟ್ಟಿ, ಅಶೋಕ್‌ ಕೆ. ಕೋಟ್ಯಾನ್‌, ಗುಣಪಾಲ್‌ ಶೆಟ್ಟಿ, ಚೇತನ್‌ ಶೆಟ್ಟಿ, ಪ್ರವೀಣ್‌ ಶೆಟ್ಟಿ, ಮಹಿಳಾ ವಿಭಾಗದ ಸಂಚಾಲಕಿ ಆಶಾ ಶೆಟ್ಟಿ, ಕಾರ್ಯಾಧ್ಯಕ್ಷೆ ಸುಮಂಗಳಾ ಕಣಂಜಾರು, ಗೌರವಾಧ್ಯಕ್ಷ ಅರುಣೋದಯ ರೈ, ಅಧ್ಯಕ್ಷ ರವಿಕಾಂತ್‌ ಶೆಟ್ಟಿ ಇನ್ನ, ಉಪಾಧ್ಯಕ್ಷರುಗಳಾದ ಸುಭಾಶ್‌ ಶೆಟ್ಟಿ, ಕ್ರೀಡಾ ವಿಭಾಗದ ಕಾರ್ಯಾಧ್ಯಕ್ಷೆ ಚೇತನ್‌ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಪ್ರವೀಣ್‌ ಶೆಟ್ಟಿ, ಕಾರ್ಯದರ್ಶಿ ದಿಲೀಪ್‌ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗದ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.  ಚಂದ್ರಶೇಖರ ವಿ. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿನರು. ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ್‌ ಕೆ. ಕೋಟ್ಯಾನ್‌ ವಂದಿಸಿದರು.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.