ಕನ್ನಡಕ್ಕೆ ಭಗತ್‌ಸಿಂಗ್‌; ಕ್ರಾಂತಿ ವೀರನಾಗಿ ಎಂ.ಪಿ.ಜಯರಾಜ್‌ ಪುತ್ರ

Team Udayavani, Mar 23, 2017, 3:41 PM IST

Bhagath-singh.jpg

ಕನ್ನಡದಲ್ಲಿ ಇತಿಹಾಸ ಕುರಿತ ಅನೇಕ ಸಿನಿಮಾಗಳು ಬಂದಿವೆ. ಬರುತ್ತಲೂ ಇವೆ. ಈಗ ಮತ್ತೂಂದು ಸಿನಿಮಾ ಕೂಡ ಸದ್ದಿಲ್ಲದೆಯೇ ಸೆಟ್ಟೇರಿದ್ದು, ಶೇ.60 ರಷ್ಟು ಚಿತ್ರೀಕರಣ ಮುಗಿಸಿದೆ. ಅದು “ಕ್ರಾಂತಿ ವೀರ’. ಈ ಶೀರ್ಷಿಕೆ ಕೇಳಿದಾಕ್ಷಣ, 1972 ರಲ್ಲಿ ಬಂದಿದ್ದ ಡಾ.ರಾಜಕುಮಾರ್‌ ಅಭಿನಯದ “ಕ್ರಾಂತಿ ವೀರ’ ಚಿತ್ರ ನೆನಪಾಗುತ್ತೆ. ಈಗ ಅದೇ ಹೆಸರಿನಲ್ಲಿ ಸಿನಿಮಾ ಚಿತ್ರೀಕರಣವಾಗುತ್ತಿದೆ.

ಇದು ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತ ಭಗತ್‌ ಸಿಂಗ್‌ ಅವರ ಲೈಫ್ಸ್ಟೋರಿಗೆ ಸಂಬಂಧಿಸಿದ ಸಿನಿಮಾ. ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಭಗತ್‌ ಸಿಂಗ್‌ ಕುರಿತ ಸಿನಿಮಾ ಆಗುತ್ತಿರುವುದು ವಿಶೇಷ. ಅಂದಹಾಗೆ, ಈ ಸಿನಿಮಾದಲ್ಲಿ ಭಗತ್‌ ಸಿಂಗ್‌ ಆಗಿ, ಎಂ.ಪಿ. ಜಯರಾಜ್‌ ಅವರ ಪುತ್ರ ಅಜಿತ್‌ ಜಯರಾಜ್‌ ಕಾಣಿಸಿಕೊಳ್ಳುತ್ತಿದ್ದಾರೆ. ಆದತ್‌ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. 

ಚಿತ್ರದಲ್ಲಿ ಅಶೋಕ್‌ ಖೇಣಿ, ಭವಾನಿ ಪ್ರಕಾಶ್‌, ಮಿತ್ರ, ತೇಜಸ್‌ ಸೇರಿದಂತೆ ಇತರೆ ಕಲಾವಿದರು ನಟಿಸುತ್ತಿದ್ದಾರೆ. ಮುಂದಿನ ತಿಂಗಳು ಏರ್‌ಪೋರ್ಟ್‌ ಬಳಿ ಲಾಹೋರ್‌ ಜೈಲ್‌ ಸೆಟ್‌ ಹಾಕಿ ಚಿತ್ರೀಕರಿಸುವ ಯೋಚನೆ ನಿರ್ದೇಶಕರಿಗಿದೆ. ಲಾಹೋರ್‌ ಹೈ ಕೋರ್ಟ್‌ ಸೆಟ್‌ ಕೂಡ ಹಾಕಲಾಗುತ್ತಿದ್ದು, ದೊಡ್ಡ ಬಜೆಟ್‌ನಲ್ಲಿ ಜಲಿಯನ್‌ವಾಲಬಾಗ್‌ ಸೆಟ್‌ ವೊಂದನ್ನು ಹಾಕುವ ಸಲುವಾಗಿ ಈಗ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎನ್ನುತ್ತಾರೆ ನಿರ್ದೇಶಕ ಆದತ್‌.

ಎ.ಆರ್‌.ರೆಹಮಾನ್‌ ಪ್ರೊಡಕ್ಷನ್‌ನಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರದಲ್ಲಿ ಐವರು ಛಾಯಾಗ್ರಾಹಕರು ಕೆಲಸ ಮಾಡುತ್ತಿದ್ದು, ಅವರೆಲ್ಲರ ಹೆಸರನ್ನು ಸಿನಿಮಾ ರಿಲೀಸ್‌ ದಿನವೇ ಹೇಳುವುದಾಗಿ ಹೇಳುತ್ತಾರೆ ಆದತ್‌. ಚಿತ್ರದ ಸಂಕಲನವನ್ನು ಕೆ.ಎಂ.ಪ್ರಕಾಶ್‌ ಮಾಡಿದರೆ, ಡಾ.ಲೋಕೇಶ್‌ ಎಂಬುವರು ಸಂಗೀತ ನೀಡುತ್ತಿದ್ದಾರೆ. ಥ್ರಿಲ್ಲರ್‌ ಮಂಜು ಮತ್ತು ಜಾಕ್ಸನ್‌ ವಿನೋದ್‌ ಅವರು ಸಾಹಸ ನಿರ್ದೇಶನ ಮಾಡಲಿದ್ದಾರೆ. ಇಸ್ಮಾಯಿಲ್‌ ಅವರ ಕಲಾನಿರ್ದೇಶನವಿದೆ. 

ಯೋಗರಾಜ್‌ಭಟ್‌, ನಾಗೇಂದ್ರಪ್ರಸಾದ್‌, ರಾಘವೇಂದ್ರ ಕಾಮತ್‌ ಸಾಹಿತ್ಯ ಬರೆದಿದ್ದಾರೆ. ಅಂದಹಾಗೆ, ಇಂದು (ಮಾ.23) ಭಗತ್‌ಸಿಂಗ್‌ ಅವರ ಪುಣ್ಯತಿಥಿ. ಈಗಾಗಲೇ ಬಾಲಿವುಡ್‌ನ‌ಲ್ಲಿ ಭಗತ್‌ ಸಿಂಗ್‌ ಕುರಿತ ಅನೇಕ ಸಿನಿಮಾಗಳು ಬಂದಿವೆ.  ಒಂದೇ ದಿನ ಭಗತ್‌ ಸಿಂಗ್‌ ಅವರ ಕುರಿತ ಎರಡ್ಮೂರು ಸಿನಿಮಾಗಳು ತೆರೆಕಂಡಿದ್ದು ವಿಶೇಷ. ಈಗ ಕನ್ನಡದಲ್ಲಿ ಭಗತ್‌ ಸಿಂಗ್‌ ಲೈಫ್  ಸ್ಟೋರಿ ಕುರಿತ “ಕ್ರಾಂತಿ
ವೀರ’ ಚಿತ್ರ ಆಗುತ್ತಿರುವುದು ಇದು ಮೊದಲು.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.