ಮೀರಾರೋಡ್‌ ಕರ್ನಾಟಕ ಸಂಘದ 29ನೇ ವಾರ್ಷಿಕ ಮಹಾಸಭೆ

Team Udayavani, Mar 28, 2017, 5:21 PM IST

26-Mum05.jpg

ಮುಂಬಯಿ: ಸಾಮಾಜಿಕ ಸಂಘಟನೆಯಲ್ಲಿ ಪಾರದರ್ಶಕತೆ ಅನಿವಾರ್ಯ ವಾಗಿದೆ. ಸದಸ್ಯರ ಅವ್ಯವಹಾರ ಕಂಡುಬಂದಲ್ಲಿ ಅದನ್ನು ಅಲ್ಲೇ ಬುದ್ಧಿವಾದದ ಮೂಲಕ ತಿದ್ದಬೇಕು. ಸಲಹೆ -ಸೂಚನೆಗಳ ಮೂಲಕ ಸರಿಪಡಿಸಬೇಕು. ಇದರಿಂದ ಅಮೂಲ್ಯ ಸಮಯವನ್ನು ಪ್ರಗತಿಪರ ಚಿಂತನೆಯತ್ತ ಹರಿಸಲು ಸಾಧ್ಯವಾಗುತ್ತದೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ದುಡಿಯುವ ಮನೋಭಾವ ನಮ್ಮದಾಗಬೇಕು. ಮಹಾಸಭೆಯು ಅರೋಪ ಪ್ರತ್ಯಾರೋಪ
ಗಳ  ವೇದಿಕೆಯಾಗದೆ, ಕೂಡು ಕುಟುಂಬದ ಹಬ್ಬದ ಚಾವಡಿಯಾಗಬೇಕು ಎಂದು ಮೀರಾರೋಡ್‌ ಕರ್ನಾಟಕ ಸಂಘದ ಗೌರವಾಧ್ಯಕ್ಷ ಕಿಶೋರ್‌ ಕುಮಾರ್‌ ಶೆಟ್ಟಿ ಕುತ್ಯಾರ್‌ ಅವರು ನುಡಿದರು.

ಮಾ. 26ರಂದು ಮೀರಾರೋಡ್‌ ಪೂರ್ವದ ಸೆಕ್ಟರ್‌ 11 ರ, ಬಿ-1 ರಲ್ಲಿರುವ ಮೀರಾರೋಡ್‌ ಕರ್ನಾಟಕ ಸಂಘದ ಕಚೇರಿಯಲ್ಲಿ ಸಂಘದ 29ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಗ್ರಾಮವಾಗಿದ್ದ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದ, ಬೆರಳೆಣಿಕೆಯ ಸದಸ್ಯರಿದ್ದ ಸಂದರ್ಭ ಮೀರಾರೋಡ್‌ ಕರ್ನಾಟಕ ಸಂಘ ಹುಟ್ಟಿಕೊಂಡಿದೆ. ನಮ್ಮ ಅನೇಕ ಯೋಜನೆಗಳು ಸಂಘದ ಮುಖಾಂತರ ಕಾರ್ಯಗತಗೊಂಡಿದೆ. ಮೀರಾ-

ಭಾಯಂದರ್‌ನಲ್ಲಿ ಸುಮಾರು 55 ಸಂಘ-ಸಂಸ್ಥೆಗಳಿದ್ದರೂ ಅವುಗಳಿಗೆಲ್ಲ ಮಾತೃ ಸಂಸ್ಥೆಯ ಸ್ಥಾನದಲ್ಲಿ ಮೀರಾರೋಡ್‌ ಕರ್ನಾಟಕ ಸಂಘ ಇದೆ ಎಂದು ಹೇಳಲು ಅಭಿಮಾನವಾಗುತ್ತಿದೆ ಎಂದರು.

ಆಯವ್ಯಯ ಪಟ್ಟಿಯನ್ನು ಕೋಶಾಧಿಕಾರಿ ಗೋಪಾಲಕೃಷ್ಣ ಗಾಣಿಗ ವಾಚಿಸಿದರು. ಸಲಹೆಗಾರ ಭಾಸ್ಕರ ಶೆಟ್ಟಿ ಅವರು ಗತ ಸಭೆಯ ವರದಿ ಮಂಡಿಸಿದರು. ಸುಮತಿ ಆರ್‌. ಶೆಟ್ಟಿ ಪ್ರಾರ್ಥನೆಗೈದರು. ಸಂಘದ ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಜಯಶೀಲ ಬಿಜೂರು ವಂದಿಸಿದರು. ಕಾರ್ಯದರ್ಶಿ ದಾಮೋದರ ಎನ್‌. ಶೆಟ್ಟಿ ಸ್ವಾಗತಿಸಿದರು.

 ಜತೆ ಕೋಶಾಧಿಕಾರಿ ಶಾಲಿನಿ ಆರ್‌. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಶಿವಪ್ರಸಾದ್‌ ಶೆಟ್ಟಿ, ಹರೀಶ್‌ ಎಂ. ಶೆಟ್ಟಿ, ಸಾಂಸ್ಕೃತಿಕ ವಿಭಾಗದ ಶಾಲಿನಿ ಎಸ್‌. ಶೆಟ್ಟಿ, ಮಾಜಿ ಅಧ್ಯಕ್ಷ ಸಂತೋಷ್‌ ರೈ ಬೆಳ್ಳಿಪಾಡಿ, ದಿವಾಕರ ಶೆಟ್ಟಿ, ಕೃಷ್ಣ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.