2.15 ಕೋಟಿ ರೈತರ ಸಾಲ ಮನ್ನಾ ಮಾಡಿದ ಯೋಗಿ ಸರಕಾರ

Team Udayavani, Apr 5, 2017, 10:17 AM IST

Yogi-Adityanath-600.jpg

ಲಕ್ನೋ: ನಿರೀಕ್ಷೆಯಂತೆಯೇ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ಸರಕಾರ ಮೊದಲ ಸಂಪುಟ ಸಭೆಯಲ್ಲಿಯೇ ರಾಜ್ಯದ ರೈತರ ಸಾಲ ಮನ್ನಾ ನಿರ್ಧಾರ ಕೈಗೊಂಡಿದೆ. ಈ ಮೂಲಕ ಬಿಜೆಪಿಯು ಪ್ರಣಾಳಿಕೆಯಲ್ಲಿ ನೀಡಿದ್ದ ಆಶ್ವಾಸನೆಯನ್ನು ಈಡೇರಿಸಿದೆ. ಲಕ್ನೋದ ಶಾಸ್ತ್ರಿ ಭವನದಲ್ಲಿ ಮಂಗಳವಾರ ಸಂಜೆ ಉತ್ತರಪ್ರದೇಶ ಸರಕಾರದ ಸಂಪುಟ ಸಭೆ ನಡೆಯಿತು. ಈ ವೇಳೆ, ಚುನಾವಣೆ ಪ್ರಚಾರದ ವೇಳೆ ಬಿಜೆಪಿ ನೀಡಿದ್ದ ಪ್ರಮುಖ ಆಶ್ವಾಸನೆಗಳಲ್ಲಿ ಒಂದಾದ ರೈತರ ಸಾಲ ಮನ್ನಾ ಸೇರಿದಂತೆ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಯಿತು. ರೈತರ 5,630 ಕೋಟಿ ರೂ.ಗಳ ಅನುತ್ಪಾದಕ ಆಸ್ತಿ ಮತ್ತು 30,729 ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಆರೋಗ್ಯ ಸಚಿವ ಸಿದ್ಧಾರ್ಥನಾಥ್‌ ಸಿಂಗ್‌ ಹೇಳಿದ್ದಾರೆ. 1 ಲಕ್ಷ ರೂ. ವರೆಗಿನ ಸಾಲದ ಮಿತಿಯನ್ನೂ ವಿಧಿಸಲಾಗಿದೆ. ಯೋಜನೆ 2.15 ಕೋಟಿ ರೈತರಿಗೆ ನೆರವಾಗಲಿದೆ. ಈ ರೈತರು ಬ್ಯಾಂಕುಗಳಿಗೆ 62 ಸಾವಿರ ಕೋಟಿ ರೂ. ಸಾಲ ಬಾಕಿ ಉಳಿಸಿಕೊಂಡಿದ್ದಾರೆ. ಸಾಲ ಮನ್ನಾ ಮಾಡಿದ ಬಳಿಕ ಬ್ಯಾಂಕುಗಳಿಗೆ ಹೇಗೆ ಹಣ ಪಾವತಿಸಲಾಗುತ್ತದೆ ಎಂಬ ಬಗ್ಗೆ ಸದ್ಯದಲ್ಲೇ ಸರ್ಕಾರ ಮಾಹಿತಿ ನೀಡಲಿದೆ. ಒಂದೋ ಕೇಂದ್ರ ಸರ್ಕಾರದಿಂದ ನೆರವು ಯಾಚಿಸಬಹುದು ಅಥವಾ ರಾಜ್ಯವೇ ಖುದ್ದಾಗಿ ಸಾಲ ಮಾಡಬಹುದು ಎಂದು ಹೇಳಲಾಗಿದೆ.

ಶ್ಲಾಘನೆ: ಇದೇ ವೇಳೆ, ಮಹಿಳೆಯರನ್ನು ಚುಡಾಯಿಸುವವರಿಗೆ ಪಾಠ ಕಲಿಸಲು ಆರಂಭಿಸಲಾದ ರೋಮಿಯೋ ನಿಗ್ರಹ ಪಡೆಯ ಬಗ್ಗೆ ಸಭೆಯಲ್ಲಿ ಶ್ಲಾಘನೆ ವ್ಯಕ್ತವಾಗಿದೆ. ಜತೆಗೆ, ಸಾರ್ವಜನಿಕ ಪ್ರದೇಶದಲ್ಲಿ ಒಪ್ಪಿಗೆಯಿಂದ ಕುಳಿತ ಜೋಡಿಗಳಿಗೆ ತೊಂದರೆ ಕೊಡಬಾರದು ಎಂದೂ ಸೂಚಿಸಲಾಗಿದೆ. ಸಾಲ ಮನ್ನಾ, ಅಕ್ರಮ ಕಸಾಯಿಖಾನೆಗಳ ವಿರುದ್ಧ ಕ್ರಮ, ಗ್ರಾಮೀಣ ಪ್ರದೇಶಗಳಿಗೆ ವಿದ್ಯುತ್‌, ಬುಂದೇಲ್‌ಖಂಡ್‌ ಪ್ರದೇಶ, ಪೂರ್ವಾಂಚಲ ಅಭಿವೃದ್ಧಿಗೆ ಯೋಜನೆಗಳು ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ.

ಕಸಾಯಿಖಾನೆ ಕ್ರಮ ಸಮರ್ಥನೆ
ಸುಪ್ರೀಂ ಕೋರ್ಟ್‌ ಮತ್ತು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ಆದೇಶ ದಂತೆ ರಾಜ್ಯದಲ್ಲಿ ಅಕ್ರಮ ಕಸಾಯಿ ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಮುಂದುವರಿಸಲಾಗುವುದು ಎಂದೂ ಸರ್ಕಾರ ಹೇಳಿದೆ. ಜತೆಗೆ, ಕಸಾಯಿಖಾನೆಗಳಿಗೆ ಹೊಸ ಮಾರ್ಗಸೂಚಿಗಳನ್ನೂ ಘೋಷಿಸಿದೆ. ಈವರೆಗೆ 26 ವಧಾಗೃಹ ಮುಚ್ಚಲಾಗಿದೆ ಎಂಬ ಮಾಹಿತಿಯನ್ನೂ ನೀಡಿದೆ.

ಟಾಪ್ ನ್ಯೂಸ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.