ಹಿಂದುತ್ವದ ಶಕ್ತಿ ಮೈಗೂಡಿಸಿಕೊಳ್ಳಬೇಕು: ಕೇಶವಮೂರ್ತಿ

Team Udayavani, Apr 13, 2017, 4:50 PM IST

1104kde3.jpg

ಕುಂದಾಪುರ:  ಕಳೆದ ಹಲವು ವರ್ಷಗಳಿಂದ ಹಿಂದೂ ಸಮಾಜದ ಮೇಲೆ ನಿರಂತರವಾಗಿ ಅಕ್ರಮಣಗಳು, ಅನ್ಯಾಯ, ದೌರ್ಜನ್ಯ ಹೆಚ್ಚಾಗುತ್ತಿದೆ. ಇದನ್ನು ತಡೆಯಬೇಕಾದರೆ ಹಿಂದುತ್ವದ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡು ಹಿಂದುತ್ವದ ಶಕ್ತಿ ಮೈಗೂಡಿಸಿಕೊಳ್ಳ ಬೇಕು. ಭಾರತದ ಶ್ರೇಷ್ಠತೆ, ಹಿಂದುತ್ವದ ಶ್ರೇಷ್ಠತೆಯನ್ನು ಮನಗಾಣಬೇಕು. 

ಹಿಂದುತ್ವದ ಬಗ್ಗೆ ಗೌರವ, ಭಕ್ತಿ ಬಂದಾಗ ನಮ್ಮನ್ನು ಯಾರಿಂದಲೂ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಸಂಪರ್ಕ ಪ್ರಮುಖ್‌ ದೊ. ಕೇಶವಮೂರ್ತಿ ಹೇಳಿದರು.

ಅವರು ಗಂಗೊಳ್ಳಿಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ವೀರೇಶ್ವರ ದೇವ ಸ್ಥಾನದ ವಠಾರದಲ್ಲಿ   ಜರಗಿದ 505 ಕಲಶಗಳ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಧಾರ್ಮಿಕ ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿ ಮಾತನಾಡಿದರು.

ಸ್ವಾತಂತ್ರಾÂನಂತರದ ಹಿಂದುತ್ವವನ್ನು ಅಲುಗಾಡಿಸುವ ಪ್ರಯತ್ನ ನಡೆಯುತ್ತಿದೆ. ಗೋಮಾತೆ ಹಿಂದುಗಳಿಗೆ ಶ್ರದ್ಧೆ. ಅಕ್ರಮ ಗೋಸಾಗಾಟ, ಗೋಹತ್ಯೆ ವಿರುದ್ಧ ಹಿಂದು ಜಾಗರಣ ವೇದಿಕೆ ಹೋರಾಟ ನಡೆಸಲಿದೆ. ಮತಾಂತರದ ಪಿಡುಗು ಹೆಚ್ಚಾಗುತ್ತಿದ್ದು, ಹಿಂದು ಧರ್ಮದ ಅನೇಕರನ್ನು ಈ ಬಲೆಗೆ ಬೀಳಿಸಲಾಗುತ್ತಿದೆ. ಮತಾಂತರ, ಲವ್‌ ಜಿಹಾದ್‌, ಅನ್ಯಾಯ, ಆಕ್ರಮಣದ ವಿರುದ್ಧ ಹಿಂದೂ ಜಾಗರಣ ವೇದಿಕೆ ಸದಾ ಹೋರಾಟ ನಡೆಸಲಿದೆ ಎಂದು ಅವರು ಹೇಳಿದರು.

ಆಶೀರ್ವಚನ ನೀಡಿ ಮಾತನಾಡಿದ ಕಾಸರಗೋಡು ಕೊಂಡೆವೂರು ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ  ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಧರ್ಮ ಮತ್ತು ದೇಶವನ್ನು ಉಳಿಸಿಕೊಳ್ಳಲು ಹಿಂದು ಸಮಾಜ ಬಾಂಧವರು ಒಗ್ಗಟ್ಟಿನಿಂದ ಪ್ರಯತ್ನಿಸಬೇಕು. ಹಿಂದುತ್ವದ ಜಾಗೃತಿ ಆಗಬೇಕು. ಹಿಂದುತ್ವವನ್ನು ದುರ್ಬಲ ಗೊಳಿಸುವುದರ ಬಗ್ಗೆ ಎಚ್ಚರ ವಹಿಸಬೇಕು. ಸಂಸ್ಕೃತಿ, ಸಂಸ್ಕಾರಗಳನ್ನು ರಕ್ಷಣೆ ಮಾಡಬೇಕು. ದೇಶದಲ್ಲಿ ಧಾರ್ಮಿಕ ಚಟುವಟಿಕೆಗಳಿಗೆ ಶಕ್ತಿ ತುಂಬುವ ವಾತಾವರಣ ನಿರ್ಮಾಣವಾಗಬೇಕು. ಭಗವಂತನ ಆರಾಧನೆ, ನಾಮಸ್ಮರಣೆ ಮಾಡಿದರೆ ಸಮಾಜದಲ್ಲಿ ಶಾಂತಿ ಸಮಾಧಾನ ನೆಲೆಸುತ್ತದೆ ಎಂದು ಹೇಳಿದರು.

ಶಿವಮೊಗ್ಗದ ಉದ್ಯಮಿ ರವೀಂದ್ರ ಶೇರುಗಾರ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಟ್ಯಾಕ್ಸಿಮೆನ್‌ ಅಸೋಸಿಯೇಶನ್‌ನ ಅಧ್ಯಕ್ಷ ಮಹಾಬಲ ಬಿ. ಪೂಜಾರಿ, ಗಂಗೊಳ್ಳಿ ನಿನಾದ ಸಂಸ್ಥೆಯ ಅಧ್ಯಕ್ಷ ಎಂ. ಮುಕುಂದ ಪೈ, ಶ್ರೀ ಇಂದುಧರ ದೇವಸ್ಥಾನದ ಅಧ್ಯಕ್ಷ ಸುಂದರ ಜಿ., ಉದ್ಯಮಿ ನಾಗರಾಜ ಪಂಡಿತ್‌, ಶ್ರೀ ಗುರುಜ್ಯೋತಿ ನ್ಪೋರ್ಟ್ಸ್ ಕ್ಲಬ್‌ನ ಸ್ಥಾಪಕ ಸದಸ್ಯ ವಿಜಯ ಖಾರ್ವಿ, ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ಅರವಿಂದ ಕೋಟೇಶ್ವರ, ಹಿಂದು ಜಾಗರಣ ವೇದಿಕೆ ಬೈಂದೂರು ತಾಲೂಕು ಅಧ್ಯಕ್ಷ ರವೀಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

ಗಂಗೊಳ್ಳಿ ಹಿಂಜಾವೇ ಅಧ್ಯಕ್ಷ ಗೋವಿಂದ್ರಾಯ ಶೇರುಗಾರ್‌ ಸ್ವಾಗತಿಸಿದರು. ಹಿಂಜಾವೇ ಉಡುಪಿ ಜಿಲ್ಲಾ ಸಹಸಂಚಾಲಕ ಟಿ. ವಾಸುದೇವ ದೇವಾಡಿಗ ಪ್ರಾಸ್ತಾವಿಕ ಮಾತುಗಳ ನ್ನಾಡಿದರು. ಯಶವಂತ ಖಾರ್ವಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-wewewqe

Tibetan ಆಧ್ಯಾತ್ಮಿಕ ನಾಯಕ ದಲೈ ಲಾಮಾ ಚಿಕಿತ್ಸೆಗಾಗಿ ಅಮೆರಿಕಕ್ಕೆ

suicide

IAS ಅಧಿಕಾರಿ ದಂಪತಿಯ ಪುತ್ರಿ 10 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Next Lok Sabha polls to be over by end of April : Chief Election Commissioner

Election: ಮುಂದಿನ ಲೋಕಸಭೆ ಚುನಾವಣೆ ಎಪ್ರಿಲ್ ಅಂತ್ಯದೊಳಗೆ ಮುಗಿಸುತ್ತೇವೆ: ಚುನಾವಣಾ ಆಯೋಗ

Deralakatte: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

Deralakatte: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

Kedar Jadhav

Kedar Jadhav; ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ ಆಲ್ ರೌಂಡರ್ ಕೇದಾರ್ ಜಾಧವ್

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLC Election; ಹಿಂದೆ ಸರಿದಿರುವುದಾಗಿ ಪ್ರಚಾರ: ರಘುಪತಿ ಭಟ್‌ ದೂರು

MLC Election; ಹಿಂದೆ ಸರಿದಿರುವುದಾಗಿ ಪ್ರಚಾರ: ರಘುಪತಿ ಭಟ್‌ ದೂರು

ಕೆ.ಸಿ.ಇ.ಟಿ ಫ‌ಲಿತಾಂಶ: ಜ್ಞಾನಸುಧಾ ಎಂಜಿನಿಯರಿಂಗ್‌ನಲ್ಲಿ 18 ರ್‍ಯಾಂಕ್‌

ಕೆ.ಸಿ.ಇ.ಟಿ ಫ‌ಲಿತಾಂಶ: ಜ್ಞಾನಸುಧಾ ಎಂಜಿನಿಯರಿಂಗ್‌ನಲ್ಲಿ 18 ರ್‍ಯಾಂಕ್‌

ಕ್ಷೇತ್ರದಲ್ಲಿ ಕೆಲಸ ಮಾಡಿ ತೋರಿಸುತ್ತೇನೆ… ಪದವೀಧರರು ನನ್ನ ಕೈ ಬಿಡಲಾರರು: ರಘುಪತಿ ಭಟ್‌

ಕ್ಷೇತ್ರದಲ್ಲಿ ಕೆಲಸ ಮಾಡಿ ತೋರಿಸುತ್ತೇನೆ… ಪದವೀಧರರು ನನ್ನ ಕೈ ಬಿಡಲಾರರು: ರಘುಪತಿ ಭಟ್‌

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

1-wewewqe

Tibetan ಆಧ್ಯಾತ್ಮಿಕ ನಾಯಕ ದಲೈ ಲಾಮಾ ಚಿಕಿತ್ಸೆಗಾಗಿ ಅಮೆರಿಕಕ್ಕೆ

ಹೊನ್ನಾಳಿ: ವಿದ್ಯಾದೇಗುಲಗಳಿಗೆ ಬೇಕಿದೆ ಮೂಲ ಸೌಲಭ್ಯ

ಹೊನ್ನಾಳಿ: ವಿದ್ಯಾದೇಗುಲಗಳಿಗೆ ಬೇಕಿದೆ ಮೂಲ ಸೌಲಭ್ಯ

ಇನ್ನು 61 ದಿನ ಮೀನುಗಾರಿಕೆ ಬಂದ್‌: ಲಂಗರು ಹಾಕಿದ ಬೋಟುಗಳು!

ಇನ್ನು 61 ದಿನ ಮೀನುಗಾರಿಕೆ ಬಂದ್‌: ಲಂಗರು ಹಾಕಿದ ಬೋಟುಗಳು!

Sandalwood: Mandela ready for shooting

Sandalwood: ಮಂಡೇಲಾ ಶೂಟಿಂಗ್ ಗೆ ರೆಡಿ

suicide

IAS ಅಧಿಕಾರಿ ದಂಪತಿಯ ಪುತ್ರಿ 10 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.