ನಾಳೆಯೇ ಹಕ್ಕುಪತ್ರ ವಿತರಿಸಿ: ಕಾಗೋಡು ತಿಮ್ಮಪ್ಪ


Team Udayavani, Apr 18, 2017, 4:08 PM IST

18-MADIKERI-3.jpg

ಸೋಮವಾರಪೇಟೆ: ತಾಲೂಕು ಕಚೇರಿಯಲ್ಲಿ ವಿತರಣೆಗೆ ಬಾಕಿಯಿರುವ ಹಕ್ಕುಪತ್ರ ಗಳನ್ನು ನಾಳೆಯಿಂದಲೇ ವಿತರಣೆ ಮಾಡಬೇಕೆಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸೂಚಿಸಿದರು.

ರವಿವಾರ ಬಜೆಗುಂಡಿ ಗ್ರಾಮಕ್ಕೆ ಭೇಟಿ, ಅಲ್ಲಿನ ಸಮುದಾಯ ಭವನದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. 
ಯಾರದೋ ಒತ್ತಡಕ್ಕೆ ಮಣಿದು ಹಕ್ಕುಪತ್ರ ವಿತರಿಸಲು ಕಂದಾಯ ಇಲಾಖೆ ವಿಳಂಬ ಮಾಡುತ್ತಿದೆ ಎಂದು ತಾಕೇರಿ ಸತೀಶ್‌, ಮಿಥುನ್‌, ನಂದಕುಮಾರ್‌ ಹೇಳಿದರು. ಇದರಿಂದ ಅಸಮಾ ಧಾನಗೊಂಡ ಸಚಿವರು, ಉಪವಿಭಾಗಾ ಧಿಕಾರಿ ಹಾಗು ತಹಸಿಲ್ದಾರ್‌ರನ್ನು ತರಾಟೆಗೆ ತೆಗೆದು ಕೊಂಡು, ವಿಳಂಬಕ್ಕೆ ಸೂಕ್ತ ಕಾರಣ ಕೊಡದಿದ್ದಾಗ, ನಾಳೆಯಿಂದಲೇ ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಸೂಚಿಸಿದರು.

ಬೇಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಜೆಗುಂಡಿ ಗ್ರಾಮದಲ್ಲಿ ಕಳೆದ 40 ವರ್ಷಗಳಿಂದ ವಾಸವಿರುವ ನಿವಾಸಿಗಳು ಹಕ್ಕುಪತ್ರ ಪಡೆಯಲು ಸಾಧ್ಯವಾಗಿಲ್ಲ. ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಬಜೆಗುಂಡಿ ಗ್ರಾಮದ ಸರ್ವೆ ನಂ 95/1 ರಲ್ಲಿ 68 ಎಕರೆ ಭೂಮಿ ಊರೂಡುವೆ ಎಂದು ಕಾರಣ ನೀಡಿ ಕಂದಾಯ ಇಲಾಖೆ ಅರ್ಜಿ ಯನ್ನು ತೆಗೆದುಕೊಳ್ಳುತ್ತಿಲ್ಲ. ಇಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ  ನೀಡಬೇಕೆಂದು ಬೇಳೂರು ಗ್ರಾ.ಪಂ ಸದಸ್ಯ ಕೆ.ಎ. ಯಾಕುಬ್‌ ಸೇರಿದಂತೆ, ಅಲ್ಲಿನ ನಿವಾಸಿಗಳು ಮನವಿ ಪತ್ರ ಸಲ್ಲಿಸಿದರು.

 ಅರಣ್ಯ ಭೂಮಿಯನ್ನು ಗ್ರಾಮದ ಅಭಿವೃದ್ಧಿಗೆ ನೀಡಲು ಅವಕಾಶವಿದ್ದು, ಪ್ರತಿಯೊಬ್ಬರು ಕಂದಾಯ ಇಲಾಖೆಗೆ 94ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದರೆ, ಹಕ್ಕುಪತ್ರ ಪಡೆಯಲು ಅವಕಾಶವಿದೆ ಎಂದು ಸಚಿವರು ಹೇಳಿದರು. ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ರಹಿತರ ಪಟ್ಟಿಯನ್ನು ಮಾಡುವಂತೆ ಪಿಡಿಒ ಅವರಿಗೆ ಸೂಚಿಸಿದ ಸಚಿವರು, ಪಂಚಾಯಿತಿ ವ್ಯಾಪ್ತಿಯಲ್ಲಿ ಪೈಸಾರಿ ಜಾಗವನ್ನು ಗುರುತಿಸಿ, ನಿವೇಶನ ನೀಡಲು ಕ್ರಮಕೈಗೊಳ್ಳಬೇಕು ಎಂದು ಹೇಳಿದರು. 

ಗ್ರಾಮಲೆಕ್ಕಿಗ, ಪಿಡಿಒ, ಪಂಚಾಯಿತಿ ಕಾರ್ಯದರ್ಶಿ ಜಂಟಿಯಾಗಿ ಪ್ರತಿ ಗ್ರಾಮ ನಕಾಶೆ ಇಟ್ಟುಕೊಂಡು, ನಿವೇಶನ ರಹಿತರ ಪಟ್ಟಿ ಮಾಡಬೇಕು. ಇದುವರೆಗೆ 94ಸಿ ಯಲ್ಲಿ ಅರ್ಜಿ ಸಲ್ಲಿಸಿದವರ ಅರ್ಜಿಯನ್ನು ಸ್ಥಳದಲ್ಲೇ ಪಡೆದು ಹಕ್ಕುಪತ್ರ ವಿತರಿಸಲು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ಈ ಮಣ್ಣಿನಲ್ಲಿ ಹುಟ್ಟಿದವನಿಗೆ ಭೂಮಿಯ ಹಕ್ಕು ಇದೆ. ಅಂತಹ ಹಕ್ಕು ಎಲ್ಲಾ ಜಾತಿ ಜನಾಂಗದವರಿಗೂ ಸಿಗಬೇಕು ಎಂಬ ಉದ್ದೇಶದಿಂದ ಸರಕಾರ ಭೂಮಿ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಿದ್ದರೂ, ಅಧಿಕಾರಿಗಳ ಅಸಡ್ಡೆಯಿಂದ ಸಮಸ್ಯೆಯಾಗಿದೆ ಎಂದು ಸಚಿವರು ಹೇಳಿದರು.

ಕರ್ನಾಟಕ ಹಸಿವು ಮುಕ್ತ ಹಾಗು ಅಭಿವೃದ್ಧಿ ಶೀಲ ರಾಜ್ಯವನ್ನಾಗಿ ನಿರ್ಮಾಣ ಮಾಡುವ ಗುರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕಿದ್ದು, ಸರಕಾರದ ಜನಪ್ರಿಯ ಯೋಜನೆ ಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದು ಹೇಳಿದರು. ಇದೇ ಸಂದರ್ಭ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವಾರೆ ಹಾಗೂ ಯಡವನಾಡು ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಘೋಷಣೆ ಮಾಡಲು ಸಚಿವರು ಸರಕಾರದ ಮಟ್ಟದಲ್ಲಿ ಪರಿಹರಿಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸನ್ಮಾನಿಸಿದರು.  

ವೇದಿಕೆಯಲ್ಲಿ ವಿಧಾನಪರಿಷತ್‌ ಸದಸ್ಯೆ ವೀಣಾ ಅಚ್ಚಯ್ಯ, ರೇಷ್ಮೆ ಮತ್ತು ತಂಬಾಕು ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿರಮೇಶ್‌, ಬೇಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯ, ಜಿಲ್ಲಾ ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ಜೆ.ಆರ್‌. ಪುಷ್ಪಲತಾ ಮೊದಲಾದವರಿದ್ದರು. 

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Kasaragod ಬೈಕ್‌ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

Kasaragod ಬೈಕ್‌ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.