ಬಂಟ್ವಾಳ : ಗ್ರಾ.ಪಂ.ಉಪಾಧ್ಯಕ್ಷ ಜಮೀಲ್ ಕರೋಪಾಡಿ ಬರ್ಬರ ಹತ್ಯೆ
Team Udayavani, Apr 20, 2017, 2:25 PM IST
ಬಂಟ್ವಾಳ : ಇಲ್ಲಿನ ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ,ಕಾಂಗ್ರೆಸ್ ಮುಖಂಡ
ಎ ಅಬ್ದುಲ್ ಜಮೀಲ್ ಕರೋಪಾಡಿ(40) ಅವರನ್ನು ದುಷ್ಕರ್ಮಿಗಳು ಮಾರಕಾಯುಧಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಕಚೇರಿಗೆ ನುಗ್ಗಿದ ದುಷ್ಕರ್ಮಿಗಳು ಬರ್ಬರವಾಗಿ ಇರಿದು ಪರಾರಿಯಾಗಿದ್ದಾರೆ. ಕತ್ತಿನ ಭಾಗದಲ್ಲಿ ಗಂಭೀರವಾಗಿ ಗಾಯಗೊಂಡು ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿರುವುದಾಗಿ ವರದಿಯಾಗಿದೆ.
ಸ್ಥಳಕ್ಕೆ ಪೊಲೀಸರ ತಂಡ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.
ಜಮೀಲ್ ತಂದೆ ಉಸ್ಮಾನ್ ಅವರು ತಾಲೂಕು ಪಂಚಾಯತ್ ಸದಸ್ಯರಾಗಿದ್ದಾರೆ.
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ