ವೀಸಾ ಆದೇಶದಿಂದ ನಿಮಗೂ ಕಷ್ಟ

Team Udayavani, Apr 22, 2017, 3:45 AM IST

niramala.jpg

ವಾಷಿಂಗ್ಟನ್‌/ನವದೆಹಲಿ: “ಎಚ್‌-1ಬಿ ವೀಸಾ ನಿಯಂತ್ರಣ ಆದೇಶಕ್ಕೆ ಸಹಿ ಹಾಕಿದ್ದೀರಿ. ಅದು ಭಾರತದಲ್ಲಿರುವ ಅಮೆರಿಕದ ಕಂಪನಿಗಳ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತದೆ,’ ಹೀಗೆಂದು ಎಚ್ಚರಿಕೆ ಕೊಟ್ಟದ್ದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಹಾಯಕ ಸಚಿವೆ ನಿರ್ಮಲಾ ಸೀತಾರಾಮನ್‌.

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆದೇಶಕ್ಕೆ ಸಹಿ ಹಾಕಿದ ಮಾರನೇ ದಿನವೇ ಕೇಂದ್ರದಿಂದ ಖಾರ ಪ್ರತಿಕ್ರಿಯೆ ವ್ಯಕ್ತವಾಗಿದೆ.ಭಾರತದಲ್ಲೂ ಅಮೆರಿಕ ಮೂಲದ ಕಂಪನಿಗಳು ಕಾರ್ಯ ನಿರ್ವಹಿಸುತ್ತಿದ್ದು, ಗಳಿಸುವ ಲಾಭಾಂಶವು ಅಮೆರಿಕದ ಆರ್ಥಿಕತೆಗೆ ಸೇರುತ್ತಿದೆ ಎಂಬುದನ್ನು ಮರೆಯಬಾರದು. 

ವಾಣಿಜ್ಯ ನೀತಿಗಳ ಪುನರ್‌ಪರಿಶೀಲನೆ ಸಂದರ್ಭದಲ್ಲಿ ಅಮೆರಿಕ ಕೆಲ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕಾಗುತ್ತದೆ. ಅಮೆರಿಕ ಕೈಗೊಳ್ಳುವ ನಿರ್ಧಾರವು ಕೇವಲ ಅಲ್ಲಿರುವ ಭಾರತೀಯರ ಮೇಲಷ್ಟೇ ಬೀರುವುದಿಲ್ಲ. ಭಾರತದಲ್ಲಿ ಹಲವು ವರ್ಷಗಳಿಂದ ಅಮೆರಿಕ ಮೂಲಕ ಕಂಪನಿಗಳು ಕಾರ್ಯ ನಿರ್ವಹಿಸುತ್ತಿರುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ. ಜಾಗತಿಕ ಮಟ್ಟ ಸುಲಲಿತ ವ್ಯಾಪಾರ ಸೇವಾ ಸೌಲಭ್ಯಗಳ ಸಂಬಂಧ ಒಡಂಬಡಿಕೆ ಮಾಡಿಕೊಳ್ಳುವಂತೆ ಕೋರಿ ವಿಶ್ವ ವ್ಯಾಪಾರ ಸಂಸ್ಥೆಗೆ (ಡಬ್ಲ್ಯುಟಿಒ) ಪ್ರಸ್ತಾವ ಸಲ್ಲಿಸಿದೆ ಎಂದು ಅವರು ಹೇಳಿದ್ದಾರೆ.

ಜೇಟ್ಲಿ ಚರ್ಚೆ: ಈ ನಡುವೆ ಅಮೆರಿಕ ಪ್ರವಾಸದಲ್ಲಿರುವ ಹಣಕಾಸು ಸಚಿವ ಅರುಣ್‌ ಜೇಟ್ಲಿ ಆದೇಶದ ಬಗ್ಗೆ ಅಮೆರಿಕ ವಾಣಿಜ್ಯ ಸಚಿವ ವಿಲ್ಬರ್‌ ರೋಸ್‌ ಜತೆ ಚರ್ಚಿಸಿದ್ದಾರೆ. ಅಮೆರಿಕದ ಆರ್ಥಿಕತೆಯ ಪ್ರಗತಿಗೆ ಭಾರತೀಯರು ನೀಡಿರುವ ಕೊಡುಗೆಗಳ ಕುರಿತೂ ಸಚಿವ  ಅವರಿಗೆ  ಜೇಟ್ಲಿ ಮನವರಿಕೆ ಮಾಡಿದ್ದಾರೆ.  ವೀಸಾ ನೀತಿ ಬಿಗಿಗೊಂಡಿದ್ದರಿಂದ ಭಾರತೀಯ ಐಟಿ ಕಂಪನಿಗಳು ಹಾಗೂ ವೃತ್ತಿಪರರು ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ ಸಚಿವ ರೋಸ್‌ಗೆ ಅರಿಕೆ ಮಾಡಿರುವ  ಜೇಟ್ಲಿ, ಅಮೆರಿಕದ ಆರ್ಥಿಕ ಅಭಿವೃದ್ಧಿಯಲ್ಲಿ ಭಾರತೀಯರ ಪಾತ್ರವನ್ನು ಹಾಗೂ ಅದರಿಂದಾಗಿ ಎರಡೂ ದೇಶಗಳಿಗೆ ಆಗಿರುವ ಅನುಕೂಲತೆಯನ್ನೂ ತಿಳಿಸಿದ್ದು, ಇದು ಮುಂದೆಯೂ ಮುಂದುವರಿಯಬೇಕು ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಜತೆಗೆ, ವೀಸಾ ನೀತಿ ಕುರಿತು ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಅಮೆರಿಕವು ಈ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.