ಐತಿಹಾಸಿಕ ಜಾಂಬ್ರಿ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ


Team Udayavani, Apr 28, 2017, 2:51 PM IST

27ksde21a.jpg

ಬದಿಯಡ್ಕ: ಕಾಸರಗೋಡು ಸಹಿತ ಕರಾವಳಿ ಕರ್ನಾಟಕದ ವೈಶಿಷ್ಟéಪೂರ್ಣ ನೆಟ್ಟಣಿಗೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾ ನದ ಐತಿಹಾಸಿಕ ಜಾಂಬ್ರಿ ಮಹೋತ್ಸವದ ಪೂರ್ವಭಾವಿಯಾಗಿ ಗುರುವಾರ ವಿವಿಧ ವೈದಿಕ ಕಾರ್ಯ ಕ್ರಮಗಳಿಗೆ ವಿಧ್ಯುಕ್ತ ಚಾಲನೆ ನೀಡಲಾಯಿತು.

ಗುರುವಾರ ಬೆಳಗ್ಗೆ ಶುದ್ಧಿ ಕಲಶ ತಂತ್ರಿವರ್ಯ ಕುಂಟಾರು ಬ್ರಹ್ಮಶ್ರೀ ವಾಸುದೇವ ತಂತ್ರಿ ಹಾಗೂ  ಬ್ರಹ್ಮಶ್ರೀ ರವೀಶ ತಂತ್ರಿಗಳಿಂದ ನೆರವೇರಿತು. ಬಳಿಕ ಶುಕ್ರವಾರದಿಂದ ಆರಂಭಗೊಳ್ಳಲಿರುವ ಅತಿರುದ್ರ ಮಹಾಯಾಗದ ಋತ್ವಿಜರಾದ ಬ್ರಹ್ಮಶ್ರೀ ಪುರೋಹಿತ ಪಳ್ಳತ್ತಡ್ಕ ಪರಮೇಶ್ವರ ಭಟ್‌ ಅವರನ್ನು ಪೂರ್ಣಕುಂಭ, ಮಂತ್ರಘೋಷಗಳೊಂದಿಗೆ ಸ್ವಾಗತಿಸಲಾಯಿತು.ಬಳಿಕ ಗುಳಿಗನ ಕೋಲ ನೆರವೇರಿತು. 

ಕ್ಷೇತ್ರದ ಪ್ರಧಾನ ದ್ವಾರದಲ್ಲಿ ಹೊರೆಕಾಣಿಕೆ ಮೆರವಣಿಗೆಯನ್ನು ಮುತ್ತುಕೊಡೆ, ಚೆಂಡೆ ಸಹಿತ ವಾದ್ಯಘೋಷಗಳೊಂದಿಗೆ ಸ್ವಾಗತಿಸಲಾಯಿತು. ಉಗ್ರಾಣ ಮುಹೂರ್ತವನ್ನು ಮಲ್ಲ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದ ಮೊಖೆ¤àಸರ ಆನೆಮಜಲು ವಿಷ್ಣು ಭಟ್‌ ಅವರು ತಂತ್ರಿವರ್ಯರ ನೇತೃತ್ವದಲ್ಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಾಂಬ್ರಿ ವಿಶೇಷ ಗಂಜಿ ಸೇವೆಗೆ ಮಂಗಳೂರಿನ ಮಧು ಸಮೂಹ ಸಂಸ್ಥೆಗಳ ಮಧು ಸೂದನ ಆಯರ್‌ ಮತ್ತು ಕುಳದಪಾರೆ ಸೀತಾರಾಮ ಹಾಗೂ ಕುಟುಂಬಸ್ಥರು ಕೊಡುಗೆ ನೀಡಿದ 2 ಸಾವಿರ ಕಿಲೋ ಅಕ್ಕಿಯನ್ನು ಕ್ಷೇತ್ರಕ್ಕೆ ಹಸ್ತಾಂತರಿಸಲಾಯಿತು. ತಂತ್ರಿವರ್ಯರಾದ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿ, ರವೀಶ ತಂತ್ರಿ, ನೆಟ್ಟಣಿಗೆ ಶ್ರೀ ಕ್ಷೇತ್ರದ ಆಡಳಿತ ಮೊಖೆ¤àಸರ ಎನ್‌. ದಾಮೋದರ ಮಣಿಯಾಣಿ ನಾಕೂರು, ಅತಿರುದ್ರ ಮಹಾಯಾಗ ಸಮಿತಿ ಅಧ್ಯಕ್ಷ ಬಿ. ಪ್ರಭಾಕರ ರಾವ್‌ ಬನದಗದ್ದೆ, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಬೇರಿಕೆ, ಪ್ರಧಾನ ಕಾರ್ಯದರ್ಶಿ ಎಂ. ಜಯಕರ ನಾಕೂರು, ಕ್ಷೇತ್ರ ಆಡಳಿತ ಸಮಿತಿ ಸದಸ್ಯರಾದ ಎಚ್‌.ಶ್ರೀಧರ ಕೇಕುಣ್ಣಾಯ, ನ್ಯಾಯವಾದಿ ಪದ್ಮನಾಭ ಕುಳದಪಾರೆ, ಸುಬ್ರಹ್ಮಣ್ಯ ಭಟ್‌ ಸಸಿಹಿತ್ಲು, ಗಿರೀಶ್‌ ನಾಯ್ಕ ಸರೋಳಿಮೂಲೆ, ಅರ್ಚಕ ರಾಮಪ್ರಸಾದ್‌ ಕೇಕುಣ್ಣಾಯ, ಆಹಾರ ಸಮಿತಿ ಅಧ್ಯಕ್ಷ ಪ್ರಶಾಂತ್‌ ಭಟ್‌ ಮುಳ್ಳಂಕೊಚ್ಚಿ, ಸ್ವಯಂಸೇವಕ ಸಮಿತಿ ಅಧ್ಯಕ್ಷ ಚಂದ್ರಶೇಖರ ರೈ ಬಜ, ವೈದಿಕ ಸಮಿತಿ ಅಧ್ಯಕ್ಷ ರಾಜಗೋಪಾಲ ಭಟ್‌ ಬೆಳೇರಿ, ಲಂಬೋದರ ರೈ, ಚೇತನ್‌, ಶಿವಪ್ರಸಾದ್‌, ಕಿಶನ್‌, ನವೀನ್‌, ಶ್ರೀಕಾಂತ್‌ ನೆಟ್ಟಣಿಗೆ, ಮಾಧವ ನೆಟ್ಟಣಿಗೆ ಸಹಿತ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಮಹಿಳಾ ಸಮಿತಿ ಪ್ರತಿನಿಧಿಗಳು ಉಪಸ್ಥಿತರಿದ್ದರು. ಗಣಪತಿ ಹೋಮ ನೆರವೇರಿತು. ಭೋಜನ ಶಾಲೆಯಲ್ಲಿ ಪ್ರಾರ್ಥನೆ, ಅಗ್ನಿಸ್ಪರ್ಶವನ್ನು ತಂತ್ರಿವರ್ಯರು ನೆರವೇರಿಸಿದರು.
ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನದಾನ ನೆರವೇರಿತು. ರಾತ್ರಿ ಶ್ರೀದೇವರ ಮಹಾ ಪೂಜೆಯ ಬಳಿಕ ಕುಂಜತ್ತೋಡಿ ಚೆರ್ವತ್ತೂರು ತರವಾಡು ಮನೆಯಿಂದ ಶ್ರೀ ವಿಷ್ಣುಮೂರ್ತಿ ದೈವದ ಭಂಡಾರ ಆಗಮನ, ಅನ್ನದಾನ ನಡೆಯಿತು.

ಅಪರಾಹ್ನ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ವೇದಿಕೆಯನ್ನು ಜೀರ್ಣೋದ್ದಾರ ಸಮಿತಿ ಮಾಜಿ ಅಧ್ಯಕ್ಷ  ಗೋಪಾಲಕೃಷ್ಣ ಭಟ್‌ ಕುಂಜತ್ತೋಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿರುದ್ರ ಮಹಾಯಾಗ ಸಮಿತಿ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ ಬನದಗದ್ದೆ ಅಧ್ಯಕ್ಷತೆ ವಹಿಸಿದ್ದರು. 
ಜಾಂಬ್ರಿ ಮಹೋತ್ಸವ ಸಮಿತಿ ಅಧ್ಯಕ್ಷ ಎಂ. ಮಾಧವ ನೆಟ್ಟಣಿಗೆ, ಬೆಳ್ಳೂರು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಲತಾ ಎಂ. ಅತಿರುದ್ರ ಮಹಾಯಾಗ ಸಮಿತಿ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಬೇರಿಕೆ ಉಪಸ್ಥಿತರಿದ್ದರು. ಚಂದ್ರಶೇಖರ ರೈ ಮುಂಡಾಸು ಸ್ವಾಗತಿಸಿ, ಶಿವಪ್ಪ ನಾಯ್ಕ ಕೈಪಂಗಳ ವಂದಿಸಿದರು.

ಟಾಪ್ ನ್ಯೂಸ್

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.