ಬಜೆಟ್‌ನಲ್ಲಿ ಲೋಪದೋಷ: ಬಿಜೆಪಿ ಸದಸ್ಯರ ಧರಣಿ 

Team Udayavani, Apr 28, 2017, 2:59 PM IST

2704bteph5B.jpg

ಬಂಟ್ವಾಳ:  ಪುರಸಭೆಯ 2017-18ನೇ ಸಾಲಿನ ಬಜೆಟ್‌ ಲೋಪ ದೋಷಗಳಿಂದ ಕೂಡಿದೆ. ಕೋಟ್ಯಂತರ ರೂಪಾಯಿ ವ್ಯತ್ಯಾಸ ಆಗಿರುವ ಅನುಮಾನ ಉಂಟಾಗಿದೆ. ಇದಕ್ಕೆ ನಗರಾಭಿವೃದ್ಧಿ ಕೋಶದ ಯೋಜನ  ನಿರ್ದೇಶಕರು ಸ್ಪಷ್ಟೀಕರಣ ನೀಡ ಬೇಕೆಂದು ಆಗ್ರಹಿಸಿ ಬಿಜೆಪಿ ಸದಸ್ಯರು ಎ. 27
ರಂದು ಜರಗಿದ ಸಾಮಾನ್ಯಸಭೆಯಲ್ಲಿ ಧರಣಿ ಕುಳಿತು ಪ್ರತಿಭಟನೆ ನಡೆಸಿದರು.

ಅಧ್ಯಕ್ಷ ಪಿ. ರಾಮಕೃಷ್ಣ ಆಳ್ವ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದೇವದಾಸ ಶೆಟ್ಟಿ ಅವರು  ಈ ವಿಷಯ ಪ್ರಸ್ತಾಪಿಸಿದರು.

“ಬಜೆಟ್‌ ಅಂಕಿಅಂಶಗಳ ವ್ಯತ್ಯಾಸದ ಕುರಿತು ಈಗಾಗಲೇ ನಾನು ದೂರು ನೀಡಿದ್ದೇನೆ. ಪುತ್ತೂರು ಲೆಕ್ಕಾಧಿಕಾರಿಯವರಿಂದ ತನಿಖೆಯೂ ಆಗಿದೆ. ಲೋಪದೋಷಗಳು ಇರುವುದು ದೃಢ ಪಟ್ಟಿದೆ. ಹಾಗಾಗಿ ಯೋಜನ ನಿರ್ದೇಶಕರು ಸಭೆಗೆ ಆಗಮಿಸಿ ಸ್ಪಷ್ಟೀಕರಣ ನೀಡಬೇಕು’ ಎಂದು ಅವರು ಒತ್ತಾಯಿಸಿದರು.ಇದಕ್ಕೆ  ಪ್ರತಿಕ್ರಿಯಿಸಿದ  ಅಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್‌ ನಂದರಬೆಟ್ಟು ಅವರು, “ಯೋಜನಾ ನಿರ್ದೇಶಕರು ತತ್‌ಕ್ಷಣ ಬರಲು ಅಸಾಧ್ಯ. ವಿಶೇಷ ಸಭೆ ಕರೆಯೋಣ’ ಎಂದರು. ಆದರೆ ಇದಕ್ಕೆ ಒಪ್ಪದ ಬಿಜೆಪಿ ಸದಸ್ಯರು ಧರಣಿ ಕುಳಿತರು.

ಪಟ್ಟು ಸಡಿಲಿಸದ ಸದಸ್ಯರು ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಮುಖ್ಯಾಧಿಕಾರಿ ಎಂ.ಎಚ್‌. ಸುಧಾಕರ್‌ ಸಹಿತ ಹಲವರು ವಿನಂತಿಸಿದರೂ ದೇವದಾಸ ಶೆಟ್ಟಿ ಅವರು ಸ್ಥಳದಿಂದ ಕದಲಲಿಲ್ಲ. ಬಿಜೆಪಿಯ ಇತರ ಸದಸ್ಯರಾದ ಸುಗುಣಾ ಕಿಣಿ, ಗೋವಿಂದ ಪ್ರಭು, ಭಾಸ್ಕರ್‌, ಸಂಧ್ಯಾ ನಾಯ್ಕ ಅವರು ಕೂಡ ದೇವದಾಸ ಶೆಟ್ಟಿ ಅವರೊಂದಿಗೆ ಧರಣಿ ಕುಳಿತರು. ಸಂಜೆ ವೇಳೆಗೆ ಯೋಜನ ನಿರ್ದೇಶಕರು ಸಭೆಗೆ ಆಗಮಿಸಿದರು. ಚರ್ಚೆ, ವಾಗ್ವಾದ ಮುಂದುವರಿಯಿತು.

ಸರಕಾರಿ ಭೂಮಿ ಅತಿಕ್ರಮಣಗೊಳ್ಳುತ್ತಿರುವ ಬಗ್ಗೆ ವಾಸು ಪೂಜಾರಿ ಅವರು ಸಭೆಯ ಗಮನ ಸೆಳೆದರು. ರೆಕಾರ್ಡ್‌ ರೂಮ್‌ ಸರಿಪಡಿಸುವಂತೆ ಒತ್ತಾಯಿಸಿದರು. ಪುರಸಭಾ ಮೀಟಿಂಗ್‌ ಹಾಲ್‌ಗೆ ಎ.ಸಿ. ಅಳವಡಿಸುವ ಬಗ್ಗೆ ಸಭೆ ನಿರ್ಣಯ ಕೈಗೊಂಡಿತು. 

ರಂಗಮಂದಿರಕ್ಕೆ ಪ್ರಸ್ತಾವ
ಬಿ.ಸಿ. ರೋಡ್‌ನ‌ ನಾರಾಯಣ ಗುರು ವೃತ್ತದ ಬಳಿ ಇರುವ ಸರಕಾರಿ ಜಾಗದಲ್ಲಿ ಆರ್‌.ಟಿ.ಒ. ಕಚೇರಿ,  ಅರಸು ಭವನ ನಿರ್ಮಿಸಲು ಜಾಗ ಮಂಜೂರುಗೊಳಿಸುವ ಕುರಿತು ತಹಶೀಲ್ದಾರ್‌ ಬರೆದಿರುವ ಪತ್ರದ ಬಗ್ಗೆ ಚರ್ಚೆ ನಡೆಯಿತು. ಆ ಜಾಗದಲ್ಲಿ ರಂಗಮಂದಿರ ನಿರ್ಮಿಸುವುದೇ ಸೂಕ್ತ ಎಂದು ಸದಾಶಿವ ಬಂಗೇರ ಹೇಳಿದರು.

ಮಫತ್‌ಲಾಲ್‌ ಲೇ ಔಟ್‌ನಲ್ಲಿ ಅತಿಕ್ರಮಣ ಮಾಡಿದ ಜಾಗವನ್ನು ತೆರವುಗೊಳಿಸಬೇಕು ಎಂದು ಮಹಮ್ಮದ್‌ ಶರೀಫ್ ಆಗ್ರಹಿಸಿದರು. ಸದಸ್ಯರಾದ ಮೋನಿಶ್‌ ಅಲಿ, ಇಕ್ಬಾಲ್‌, ಬಿ.ಮೋಹನ್‌, ಗಂಗಾಧರ್‌, ವಸಂತಿ ಚಂದಪ್ಪ, ಚಂಚಲಾಕ್ಷಿ, ಜಗದೀಶ ಕುಂದರ್‌, ನಾಮನಿರ್ದೇಶಿತ ಸದಸ್ಯ ಲೋಕೇಶ ಸುವರ್ಣ ಮೊದಲಾದವರು ವಿವಿಧ ವಿಷಯಗಳ ಕುರಿತು ಮಾತನಾಡಿದರು.

ಮುಖ್ಯಮಂತ್ರಿಗಳ ಗಮನಕ್ಕೆ ತರುವೆ : ದೇವದಾಸ ಶೆಟ್ಟಿ 
ಸುದ್ಧಿಗಾರರೊಂದಿಗೆ ಮಾತನಾಡಿದ ದೇವದಾಸ ಶೆಟ್ಟಿ ಅವರು, “ಪುರಸಭೆ ಬಜೆಟ್‌ ಲೋಪದೋಷಗಳ ಕುರಿತು ಅಧಿಕಾರಿಗಳಿಂದ ಸ್ಪಂದನೆ ಸಿಗುತ್ತಿಲ್ಲ. ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ’ ಎಂದು ಹೇಳಿದರು. 

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.