ಮೆಟ್ರೋ ಸ್ಟಾಪಲ್ಲಿ ಮಾವು ಮೇಳ

Team Udayavani, May 23, 2017, 12:34 PM IST

mango-mela.jpg

ಬೆಂಗಳೂರು: ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದಿಂದ ಬೈಯಪ್ಪನಹಳ್ಳಿ ಮೆಟ್ರೋ ರೈಲು ನಿಲ್ದಾಣದಲ್ಲಿ ಮಾವು ಮೇಳಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಮೇಳದಲ್ಲಿ ಒಟ್ಟಾರೆ ಐದು ಮಳಿಗೆಗಳಿಗೆ ಅವಕಾಶ ನೀಡಲಾಗಿದೆ. ಈ ಪೈಕಿ ಮೆಟ್ರೋ ನಿಲ್ದಾಣದ ಆವರಣದಲ್ಲಿ ಮೂರು ಮಳಿಗೆಗಳು ಹಾಗೂ ಮೆಟ್ರೋ ನಿರ್ಗಮನ ದ್ವಾರದ ಸಮೀಪ ಎರಡು ಮಳಿಗೆಗಳನ್ನು ತೆರೆಯಲಾಗಿದೆ.

ಸಾವಯವ ಮತ್ತು ನೈಸರ್ಗಿಕವಾಗಿ ಮಾಗಿಸಿದ ಮಾವು ಮಾರಾಟಕ್ಕೆ ನಿಗಮದಿಂದ ಹೆಚ್ಚಿನ ಪ್ರಾಮು­ಖ್ಯತೆ ನೀಡಿರುವ ಹಿನ್ನೆಲೆಯಲ್ಲಿ ಮೊದಲ ದಿನವೇ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮಾವಿಗೆ ಮಾರುಕಟ್ಟೆ ದರಕ್ಕಿಂತ ಶೇ.10ರಷ್ಟು ರಿಯಾಯಿತಿ ನೀಡಲಾಗಿದ್ದು, ಆಲ್ಫಾನ್ಸೋ, ಮಲ್ಲಿಕಾ, ದಶೇರಿ, ರಸಪುರಿ, ಮಲಗೋವಾ, ತೋತಾಪುರಿ ಮತ್ತಿತರ ಬಗೆಯ ಮಾವಿನ ಹಣ್ಣುಗಳು ಮೇಳದಲ್ಲಿ ಲಭ್ಯವಿವೆ. 

ಈ ಹಿಂದೆ ರಾಜ್ಯ ಮಾವು ಅಭಿವೃದ್ಧಿ ನಿಗಮ ನಾಯಂಡಹಳ್ಳಿ ಮೆಟ್ರೋ ರೈಲು ನಿಲ್ದಾಣದಲ್ಲಿ ಐದು ದಿನಗಳ ಕಾಲ ಮಾವು ಮೇಳ ಆಯೋಜಿಸಿತ್ತು. ಇದು ಯಶಸ್ವಿಯಾಗಿದ್ದು, ಸಾರ್ವಜನಿಕರಿಂದ ಹೆಚ್ಚಿನ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಇದೀಗ ಬೈಯಪ್ಪನಹಳ್ಳಿ ಮೆಟ್ರೋ ರೈಲು ನಿಲ್ದಾಣದಲ್ಲಿ ಸೋಮವಾರದಿಂದ 27ರವರೆಗೆ ಮಾವು ಮೇಳ ಆಯೋಜಿಸಲಾಗಿದೆ. ನಿಗಮದ ಅಧ್ಯಕ್ಷ ಎಲ್‌. ಗೋಪಾಲಕೃಷ್ಣ ಹಾಗೂ ನೂತನವಾಗಿ ನಾಮನಿರ್ದೇಶನಗೊಂಡ ನಿಗಮದ ಉಪಾಧ್ಯಕ್ಷ ಪಿ. ರಾಜ್‌ಕುಮಾರ್‌ ಅವರ ನೇತೃತ್ವದಲ್ಲಿ ಮೇಳಕ್ಕೆ ಚಾಲನೆ ನೀಡಲಾಯಿತು.

1000 ಮೆಟ್ರಿಕ್‌ ಟನ್‌ನಷ್ಟು ಮಾರಾಟ: “ಲಾಲ್‌ಬಾಗ್‌ ಸೇರಿದಂತೆ ರಾಜ್ಯದ ವಿವಿಧೆಡೆ ಮಾವು ಮತ್ತು ಹಲಸು ಮೇಳವನ್ನು ನಿಗಮದಿಂದ ಆಯೋಜನೆ ಮಾಡಲಾಗಿದ್ದು ಉತ್ತಮ ಪ್ರತಿಕ್ರಿಯೆ ಬಂದಿದೆ. ಸಹಕಾರನಗರದ ಬಿಬಿಎಂಪಿ ಆಟದ ಮೈದಾನ, ನಾಯಂಡಹಳ್ಳಿ ಮೆಟ್ರೋ ನಿಲ್ದಾಣದಲ್ಲೂ ಮಾವು ಮೇಳ ಆಯೋಜಿಸಲಾಗಿತ್ತು. ವಿವಿಧ ಮೇಳಗಳಲ್ಲಿ 1000ಕ್ಕೂ ಅಧಿಕ ಮೆಟ್ರಿಕ್‌ ಟನ್‌ ಮಾವು ಮಾರಾಟ ವಾಗಿದೆ,’ ಎಂದು ಗೋಪಾಲಕೃಷ್ಣ ಹೇಳಿದರು.

ರಾಜ್‌ಕುಮಾರ್‌ ಮಾವು ನಿಗಮದ ಉಪಾಧ್ಯಕ್ಷ 
ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮಕ್ಕೆ ನೂತನ ಉಪಾಧ್ಯಕ್ಷರನ್ನಾಗಿ ದಾವಣಗೆರೆಯ ಪಿ.ರಾಜ್‌ಕುಮಾರ್‌ ಅವರನ್ನು ನೇಮಿಸಲಾಗಿದೆ. ಮುಂದಿನ 18 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ನಿಗಮದ ಉಪಾಧ್ಯಕ್ಷರಾಗಿ ರಾಜ್‌ಕುಮಾರ್‌ ಕರ್ತವ್ಯ ನಿರ್ವಹಿಸಲಿದ್ದಾರೆ.  ಮೇ. 22ರಂದು ನಿಗಮದ ಕಚೇರಿಯಲ್ಲಿ ಉಪಾಧ್ಯಕ್ಷ ಪಿ.ರಾಜ್‌ಕುಮಾರ್‌ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕದಿರೇಗೌಡ ಉಪಸ್ಥಿತರಿದ್ದರು. 

ಮೆಟ್ರೋ ರೈಲು ಪ್ರಯಾಣಿಕರಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಬೈಯ್ಯಪ್ಪನಹಳ್ಳಿ ಮೆಟ್ರೋ ಆವರಣದಲ್ಲಿ ಮೇಳ ಆಯೋಜಿಸಲಾಗಿದೆ. ಮಳಿಗೆಯೊಂದಕ್ಕೆ ದಿನಕ್ಕೆ 575 ರೂ. ಬಾಡಿಗೆ ಯನ್ನು ಬಿಎಂಆರ್‌ಸಿಎಲ್‌ ಸಂಸ್ಥೆಗೆ ನಿಗಮ ಪಾವತಿಸುತ್ತಿದೆ. ಮಾವು ಬೆಳೆಗೆ ಉತ್ತಮ ಮಾರುಕಟ್ಟೆ ಕಲ್ಪಿಸುವುದು ಮತ್ತು ಗ್ರಾಹಕರಿಗೆ ನೈಸರ್ಗಿಕವಾಗಿ ಮಾಗಿಸಿದ ಮಾವು ಸಿಗುವಂತೆ ಮಾಡುವುದು ಮೇಳದ ಉದ್ದೇಶ. 
-ಕದಿರೇಗೌಡ, ವ್ಯವಸ್ಥಾಪಕ ನಿರ್ದೇಶಕ, ಮಾವು ಅಭಿವೃದ್ಧಿ ನಿಗಮ

ಟಾಪ್ ನ್ಯೂಸ್

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.