ಮಹದಾಯಿ, ಕಳಸಾ ವಿವಾದ; ಜೂನ್ 12ಕ್ಕೆ ಮತ್ತೆ ಕರ್ನಾಟಕ ಬಂದ್

Team Udayavani, May 27, 2017, 12:47 PM IST

Vatal_Nagaraj_380x300.jpg

ಬೆಂಗಳೂರು: ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶಿಸುವಂತೆ ಆಗ್ರಹಿಸಿ ಜೂ.12ರಂದು ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಲಾಗಿದೆ ಎಂದು ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್‌ ನಾಗರಾಜ್‌ ತಿಳಿಸಿದ್ದಾರೆ. 

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳಸಾ ಬಂಡೂರಿ ಮತ್ತು ಮಹದಾಯಿ ಯೋಜನೆ ಅನುಷ್ಠಾನಕ್ಕೆ ತರುವಂತೆ 2 ವರ್ಷಗಳಿಂದ ಉತ್ತರ ಕರ್ನಾಟಕದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಪ್ರದರ್ಶಿಸುತ್ತಿವೆ. ಕೂಡಲೇ ಪ್ರಧಾನಿಯವರು ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳ ಮುಖ್ಯಮಂತ್ರಿಗಳು ಸಭೆ ನಡೆಸಿ ಸಮಸ್ಯೆ ಇತ್ಯರ್ಥ ಪಡಿಸಬೇಕು ಎಂದು ಆಗ್ರಹಿಸಿದರು. 

ಬಯಲು ಸೀಮೆಯ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಅಲ್ಲಿನ ಸಾರ್ವಜನಿಕರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ಯೋಜನೆ ಜಾರಿ ಕುರಿತು ಇಂದಿಗೂ ಸ್ಪಷ್ಟ ನಿಲುವು ಮತ್ತು ಯೋಜನೆ ರೂಪಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೂ.6ರಂದು ಮೇಕೆದಾಟು ಯೋಜನೆ ಕುರಿತು ರಾಜ್ಯ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಿಂದ ರಾಮನಗರ ಮೂಲಕ ಕನಕಪುರದವರೆಗೆ ಬೃಹತ್‌ ರ್ಯಾಲಿ ನಡೆಸಲಾಗುವುದು. ಜೂ.12ರಂದು ಕೇಂದ್ರ ಕಾರ್ಖಾನೆಗಳ ಖಾಸಗೀಕರಣ ವಿರೋಧಿಸಿ ಮತ್ತು ಮಹದಾಯಿ ಯೋಜನೆಗೆ ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸಿ ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೂ ಕನ್ನಡ ಪರ ಸಂಘಟನೆಗಳೊಂದಿಗೆ ರ್ಯಾಲಿ ನಡೆಸುವುದಾಗಿ ಹೇಳಿದರು. 

ಕೇರಳ ಸರ್ಕಾರ ಕಾಸರಗೋಡಿನಲ್ಲಿ ಕನ್ನಡಿಗರ ಮೇಲೆ ಮಲೆಯಾಳಂ ಭಾಷೆ ಏರಿಕೆಗೆ ಯತ್ನಿಸುತ್ತಿದೆ. ಇದನ್ನು ಖಂಡಿಸಿ  ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಗುವುದು. ಬೆಳಗಾವಿಯಲ್ಲಿ ಎಂಇಎಸ್‌ ಕಾರ್ಯಕರ್ತರ ಪುಂಡಾಟಿಕೆ ಮಟ್ಟಹಾಕಲು ಕನ್ನಡಪರ ಸಂಘಟನೆಗಳು ತೀವ್ರ ಪ್ರತಿಭಟನೆ ಹಮ್ಮಿಕೊಂಡಿವೆ ಎಂದ ಅವರು, ಬೆಳಗಾವಿಯ ಕನ್ನಡಿಗ ಶಾಸಕರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ ಕೂಡಲೇ ಬೆಳಗಾವಿ ಪಾಲಿಕೆಯನ್ನು ಸೂಪರ್‌ಸೀಡ್‌ ಮಾಡಬೇಕು. ಎಂಇಎಸ್‌ ಕಾರ್ಯಕರ್ತರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಕರವೇ ಅಧ್ಯಕ್ಷ ಪ್ರವೀಣ್‌ಕುಮಾರ್‌ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.