ಕೇಂದ್ರ-ರಾಜ್ಯ ತಿಕ್ಕಾಟಕ್ಕೆ ನಾಂದಿ;ರಾಜ್ಯಕ್ಕೆ ಎಚ್ಚರಿಕೆ ನೀಡಿದ ಸಚಿವ

Team Udayavani, Jun 6, 2017, 3:45 AM IST

NANDI.jpg

ಬೆಂಗಳೂರು: ಕೇಂದ್ರದ ಪ್ರಮುಖ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರಕಾರ ಆಸಕ್ತಿ ತೋರಿಸುತ್ತಿಲ್ಲ ಎಂದು ನೇರವಾಗಿ ಟೀಕಿಸಿರುವ ಕೇಂದ್ರ ಸರಕಾರ, ಇದೇ ಪ್ರವೃತ್ತಿ ಮುಂದುವರಿಸಿದರೆ ತಾವೇ ಯೋಜನೆಗಳನ್ನು ಜನತೆಗೆ ನೇರ ತಲುಪಿಸುತ್ತೇವೆ ಎಂಬ ಎಚ್ಚರಿಕೆ ನೀಡಿದೆ.

ಯೋಜನೆಗಳ ಅನುಷ್ಠಾನದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಸರಿಯಾದ ಸಹಕಾರ ಸಿಗುತ್ತಿಲ್ಲ ಎಂಬ ಆರೋಪ ಇದುವರೆಗೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ ಸರಕಾರದಿಂದ ಬರುತ್ತಿತ್ತು. ಈಗ ರಾಜ್ಯ ಸರಕಾರದ ವಿರುದ್ಧ ಕೇಂದ್ರ ಸರಕಾರ ತಿರುಗಿ ಬಿದ್ದಿದ್ದು, ಕೇಂದ್ರದ ಪ್ರಮುಖ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರಕಾರ ಆಸಕ್ತಿ ತೋರಿಸುತ್ತಿಲ್ಲ ಎಂದು ದೂರಿದೆ. ಕೇಂದ್ರ ಸರಕಾರದ ಉಜಾಲ (ಎಲ್‌ಇಡಿ ಬಲ್ಬ್  ವಿತರಣೆ), ಉಜ್ವಲ (ಬಿಪಿಎಲ್‌ ಕುಟುಂಬಗಳಿಗೆ ಉಚಿತ ಗ್ಯಾಸ್‌ ಸಂಪರ್ಕ), ರೈತರಿಗೆ ಪ್ರಧಾನ ಮಂತ್ರಿ ಫ‌ಸಲ್‌ ಭಿಮಾ ಮೊದಲಾದ ಯೋಜನೆಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಆಸಕ್ತಿ ವಹಿಸುತ್ತಿಲ್ಲ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿರುವ ಕೇಂದ್ರ ಇಂಧನ ಖಾತೆ ಸಚಿವ ಪಿಯೂಷ್‌ ಗೋಯಲ್‌, ಇದೇ ಪ್ರವೃತ್ತಿಯನ್ನು ಮುಂದುವರಿಸಿದರೆ ರಾಜ್ಯ ಸರಕಾರದ ಬದಲಿಗೆ ಕೇಂದ್ರ ಸರಕಾರವೇ ತನ್ನ ಯೋಜನೆಗಳನ್ನು ನೇರ ಜನತೆಗೆ ತಲುಪಿಸುವ ಕಾರ್ಯ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಆದರೆ, ಈ ಆರೋಪವನ್ನು ರಾಜ್ಯ ಸರಕಾರ ಸಂಪೂರ್ಣ ಅಲ್ಲಗಳೆದಿದೆ. ಹೀಗಾಗಿ ಈ ವಿವಾದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ನಡುವಿನ ತಿಕ್ಕಾಟಕ್ಕೆ ಎಡೆಮಾಡಿಕೊಡುವ ಸಾಧ್ಯತೆ ಇದೆ.

ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಪತ್ರಕರ್ತರ ಜತೆ ಮಾತನಾಡಿದ ಕೇಂದ್ರ ಸಚಿವ ಪಿಯೂಷ್‌ ಗೋಯಲ್‌, ಕೇಂದ್ರ ಸರಕಾರದ ಉಜಾಲ ಯೋಜನೆಯಡಿ ಈಗಾಗಲೇ 23.89 ಕೋಟಿ ಎಲ್‌ಇಡಿ ಬಲ್ಬ್ ವಿತರಣೆ ಮಾಡಲಾಗಿದೆ. 
ಆದರೆ, ಸಾಕಷ್ಟು ಎಲ್‌ಇಡಿ ಬಲ್ಬ್ ಕೊಡುತ್ತೇವೆ ಎಂದು ಹೇಳಿದ್ದರೂ ಕರ್ನಾಟಕ ಕೇವಲ 1.58 ಕೋಟಿ ಮಾತ್ರ ವಿತರಣೆ ಮಾಡಿದೆ. ಅಲ್ಲದೆ, ಮಹಿಳಾ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಉಜ್ವಲ (ಎಲ್‌ಪಿಜಿ ವಿತರಣೆ) ಯೋಜನೆಯನ್ನು ರಾಜ್ಯ ಸರಕಾರ ಸಮರ್ಪಕವಾಗಿ ಅನುಷ್ಠಾನ ಮಾಡಿಲ್ಲ. ಜತೆಗೆ ರಾಜ್ಯದಲ್ಲಿ ಬರ ಇದ್ದರೂ ರೈತರಿಗೆ ಅನುಕೂಲವಾಗುವ ಪ್ರಧಾನ ಮಂತ್ರಿ ಫ‌ಸಲ್‌ ಭಿಮಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿಲ್ಲ. ಮಣ್ಣು ಆರೋಗ್ಯ ಕಾರ್ಡ್‌ ವಿತರಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ ಉಷ್ಣ ವಿದ್ಯುತ್‌ ಸ್ಥಾವರ ಗಳಿಗೆ ಅನುಕೂಲವಾಗುವಂತೆ ರಾಜ್ಯಕ್ಕೆ ಆರು ಕಲ್ಲಿದ್ದಲು ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ. ಆದರೆ, ಅದನ್ನು ಬಳಸಿಕೊಳ್ಳಲು ರಾಜ್ಯ ಸರಕಾರ ವಿಳಂಬ ಮಾಡುತ್ತಿದೆ ಎಂದ ಅವರು, ರಾಜ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ ದಿಂದ ಯಾವುದೇ ತಾರತಮ್ಯ  ಆಗು ತ್ತಿಲ್ಲ. ಆದರೆ, ರಾಜ್ಯ ಸರಕಾರವೇ ಕೇಂದ್ರದ ಯೋಜನೆ ಅನುಷ್ಠಾನಕ್ಕೆ ಮೀನಮೇಷ ಎಣಿಸುತ್ತಿದೆ.  ಜನರು (ಮತದಾರರು) ಕೇಂದ್ರ ಹಾಗೂ ರಾಜ್ಯ ಸರಕಾರದ ಕಾರ್ಯವೈಖರಿ ಯನ್ನು ಗಮನಿಸುತ್ತಿದ್ದಾರೆ ಮತ್ತು ಹೋಲಿಕೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

ಕರ್ನಾಟಕಕ್ಕೆ ಕಳೆದ ಮೂರು ವರ್ಷದಲ್ಲಿ ಕೇಂದ್ರ ಅತೀ ಹೆಚ್ಚಿನ ಅನುದಾನ ನೀಡಿದೆ. ಕೇಂದ್ರದಲ್ಲಿ ಯುಪಿಎ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಇದ್ದಾಗಲೂ ಇಷ್ಟು ಪ್ರಮಾಣದ ಅನುದಾನ ಕರ್ನಾಟಕ  ಪಡೆದಿಲ್ಲ. ಅನುದಾನ ಹಂಚಿಕೆಯಲ್ಲೂ ಕೇಂದ್ರ ಯಾವುದೇ ರೀತಿಯ ತಾರತಮ್ಯ ಮಾಡುತ್ತಿಲ್ಲ ಎಂದು ಅವರು ಸ್ಪಷ್ಪಪಡಿಸಿದರು.

ಪ್ರೀಮಿಯಂನಲ್ಲಿ ಕೇಂದ್ರ-ರಾಜ್ಯದ ಸಮಪಾಲು
ಪ್ರಧಾನ ಮಂತ್ರಿ ಫ‌ಸಲ್‌ ಭಿಮಾ ಯೋಜನೆಯಡಿ ವಿಮಾ ಕಂಪೆನಿ ನಿಗದಿಪಡಿಸಿದ ಪ್ರೀಮಿಯಂನ ಸ್ವಲ್ಪ ಮೊತ್ತವನ್ನು ರೈತರು ಭರಿಸುತ್ತಾರೆ. ಉಳಿದ ಮೊತ್ತವನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಮನಾಗಿ ಭರಿಸುತ್ತವೆ. ಹೀಗಾಗಿ ಕೇಂದ್ರ ಸರಕಾರವೇ ಪೂರ್ಣ ಪ್ರಮಾಣದಲ್ಲಿ ಯಾವ ರೀತಿ ಈ ಯೋಜನೆ ಜಾರಿಗೊಳಿಸಲು ಸಾಧ್ಯ? ಈ ಯೋಜನೆ ಬಗ್ಗೆ ರೈತರಲ್ಲಿ ಅರಿವು ಮೂಡಿಸುವಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆ ಆಗಿದ್ದೇನೋ ನಿಜ. ಆದರೆ, ಈ ವರ್ಷದಿಂದ ಫ‌ಸಲ್‌ ಭಿಮಾ ಯೋಜನೆಯಡಿ ವಿಮೆ ಮಾಡಿಸಿದವರ ಸಂಖ್ಯೆ ದುಪ್ಪಟ್ಟಾಗಿದೆ ಎನ್ನುತ್ತವೆ ಕೃಷಿ ಇಲಾಖೆ ಮೂಲಗಳು.

ಟಾಪ್ ನ್ಯೂಸ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.