ಚರಿತ್ರೆಯ ಪುಟಗಳಿಂದ ಕಾವೇರಿದ ಚಿತ್ರ

Team Udayavani, Jun 23, 2017, 1:11 PM IST

Kaveri-Theerada-Charitre-Au.jpg

ಈಗಾಗಲೇ ರೈತರ ಆತ್ಮಹತ್ಯೆ ಕುರಿತ ಅನೇಕ ಚಿತ್ರಗಳು ಬಂದಿವೆ. ಆದರೆ, ಕಾವೇರಿ ನೀರನ್ನು ಹೇಗೆಲ್ಲಾ ಕಾಪಾಡಬಹುದು ಎಂಬ ಬಗ್ಗೆ ಸಿನಿಮಾ ಬಂದಿರಲಿಲ್ಲ. ಅಂಥದ್ದೊಂದು ವಿಷಯ ಇಟ್ಟುಕೊಂಡು ಹೊಸಬರು
“ಕಾವೇರಿ ತೀರದ ಚರಿತ್ರೆ’ ಎಂಬ ಚಿತ್ರ ಮಾಡಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿದಿದ್ದು, ಇಷ್ಟರಲ್ಲೇ ತೆರೆಗೆ ಬರಲು ರೆಡಿಯಾಗುತ್ತಿದೆ. ಇತ್ತೀಚೆಗೆ ಚಿತ್ರದ ಧ್ವನಿಸುರುಳಿ ಬಿಡುಗಡೆಯೂ ನಡೆಯಿತು.

ನಿರ್ದೇಶಕ ಪ್ರವೀಣ್‌ಗೆ ಇದು ಮೊದಲ ಸಿನಿಮಾ. ಕಾವೇರಿ ಹುಟ್ಟಿದ ಚರಿತ್ರೆ, ಹರಿಯುವ ಜಾಗ ಸೇರಿದಂತೆ ನೀರನ್ನು ಯಾವ ರೀತಿ ಬಳಸಬೇಕು, ಹೇಗೆ ಉಳಿಸಬೇಕು ಎಂಬ ವಿಷಯ ಚಿತ್ರದ ಹೈಲೆಟ್‌. ಇಲ್ಲಿ ನೀರು ಪೋಲಾಗುವುದಕ್ಕೊಂದು ಪರಿಹಾರವೂ ಇದೆ. ಅದನ್ನು ಚಿತ್ರದಲ್ಲೇ ನೋಡಬೇಕು. ಮಂಡ್ಯ, ಕೆ.ಆರ್‌.ಪೇಟೆ ಸುತ್ತಮುತ್ತ 35 ದಿನಗಳ ಕಾಲ ಚಿತ್ರೀಕರಿಸಲಾಗಿದೆ ಎಂದು ವಿವರ ಕೊಟ್ಟರು ಪ್ರವೀಣ್‌.

ಚಿತ್ರಕ್ಕೆ ರೈತ ಪುಟ್ಟರಾಜು ನಿರ್ಮಾಪಕರು. ನಿರ್ಮಾಣಕ್ಕಿಳಿಯುವಷ್ಟು ಧೈರ್ಯ ಬಂದಿದ್ದು, ಕಥೆ ಕೇಳಿದ ಮೇಲಂತೆ. ಅವರ ಮಗ ನವೀನ್‌ ಗೌಡಗೆ ಸಿನಿಮಾ ಮಾಡುವ ಆಸೆ ಇತ್ತಂತೆ. ಒಂದಷ್ಟು ಕಥೆ ಕೇಳಿದಾಗ, ಯಾವುದೂ ಇಷ್ಟ ಆಗಲಿಲ್ಲವಂತೆ. ಕೊನೆಗೆ ಈ ಕಥೆ ಇಷ್ಟವಾಗಿದ್ದೇ ತಡ, ರೈತರಿಗೊಂದು ಸಂದೇಶ, ಕಾವೇರಿ ಪೋಲಾಗದಂತೆ ಒಂದು ಪರಿಹಾರ ಕುರಿತು ಸಿನಿಮಾ ಮಾಡಿದ್ದಾಗಿ ಹೇಳುತ್ತಾರೆ ಅವರು. ಚಿತ್ರದ ನಾಯಕ ನವೀನ್‌ ಗೌಡಗೆ ಇದು ಮೊದಲ ಸಿನಿಮಾವಂತೆ.

ಸಿನಿಮಾಗೆ ಬೇಕಾದ ಎಲ್ಲಾ ತಯಾರಿ ಮಾಡಿಕೊಂಡೇ ಕ್ಯಾಮೆರಾ ಮುಂದೆ ನಿಂತಿದ್ದಾಗಿ ಹೇಳುವ ನವೀನ್‌, ಇಲ್ಲಿ ಪೊಲೀಸ್‌ ಅಧಿಕಾರಿಯಾಗಿ ನಟಿಸಿದ್ದಾರಂತೆ. ಮೊದಲ ಚಿತ್ರವಾದ್ದರಿಂದ ಇಲ್ಲಿ ಒಂದಷ್ಟು ಎಡವಟ್ಟುಗಳಿವೆ. ಅದನ್ನೆಲ್ಲಾ ಪಕ್ಕಕ್ಕಿಟ್ಟು ನಮ್ಮ ಪ್ರಯತ್ನವನ್ನು ಬೆಂಬಲಿಸಿ ಎಂದರು ನವೀನ್‌.

ನಾಯಕಿ ಅಖೀಲಾ ನಾಯ್ಡುಗೆ ಇದು ಮೊದಲ ಚಿತ್ರ. ಈ ಹಿಂದೆ ಕೆಲ ಧಾರಾವಾಹಿಗಳಲ್ಲಿ ನಟಿಸಿದ ಅನುಭವವೂ ಅವರಿಗೆ ಇದೆ. ಅವರಿಲ್ಲಿ ಪತ್ರಕರ್ತೆಯಾಗಿ ಕಾಣಿಸಿಕೊಂಡಿದ್ದಾರಂತೆ. ಇನ್ನು, ಚಿತ್ರದಲ್ಲಿ ಪ್ರೀತಿ ಎಂಬ ಬಾಲ ನಟಿ ಕೂಡ ನಟಿಸಿದ್ದು, ಕಾವೇರಿ ಸಮಸ್ಯೆಗೆ ಒಂದು ಪ್ರಾಜೆಕ್ಟ್ ರೆಡಿ ಮಾಡುವ ಹುಡುಗಿಯಾಗಿ ನಟಿಸಿದ್ದಾರಂತೆ. ಚಿತ್ರಕ್ಕೆ ಎ.ಟಿ.ರವೀಶ್‌ ಸಂಗೀತವಿದೆ. ವಿಶೇಷವೆಂದರೆ, ನಿರ್ದೇಶಕರೇ ಇಲ್ಲಿ ಕಥೆ, ಚಿತ್ರಕಥೆ, ಸಂಭಾಷಣೆ, ಸಂಕಲನ, ಛಾಯಾಗ್ರಹಣ, ಕಲೆ, ಸಾಹಸ ಇತ್ಯಾದಿ ಇತ್ಯಾದಿ ಇತ್ಯಾದಿ ಮಾಡುವ ಮೂಲಕ “ಸಾಧಕ’ರಾಗಿದ್ದಾರೆ. ಆದರೆ, ಚಿತ್ರದ ಪ್ರೋಮೋ ನೋಡಿದಾಗಲಷ್ಟೇ ಅವರ ಸಾಧನೆಯಲ್ಲಿ ಎಷ್ಟೆಲ್ಲಾ ತಪ್ಪಿದ್ದವು ಅನ್ನೋದು ಗೊತ್ತಾಯ್ತು. ಅಲ್ಲಿಗೆ ಆಡಿಯೋ ರಿಲೀಸ್‌ ಕಾರ್ಯಕ್ರಮಕ್ಕೂ ತೆರೆಬಿತ್ತು.

ಟಾಪ್ ನ್ಯೂಸ್

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.