ಬೆಂಗಳೂರಿಗೆ ಸ್ಮಾರ್ಟ್ ಸಿಟಿ ಭಾಗ್ಯ; ಪಟ್ಟಿಯಿಂದ ರಾಯ್ ಬರೇಲಿ ಔಟ್!
Team Udayavani, Jun 23, 2017, 1:20 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿಯ ಸ್ಮಾರ್ಟ್ ಸಿಟಿ ಯೋಜನೆಯ 3ನೇ ಹಂತದಲ್ಲಿ ಆಯ್ಕೆಯಾದ ನಗರಗಳ ಹೆಸರನ್ನು ಕೇಂದ್ರ ಸರ್ಕಾರ ಶುಕ್ರವಾರ ಘೋಷಿಸಿದೆ. ಕೇಂದ್ರ ಸಚಿವ ವೆಂಕಯ್ಯನಾಯ್ಡು ಪ್ರಕಟಿಸಿರುವ ಪಟ್ಟಿಯಲ್ಲಿ ಕರ್ನಾಟಕದ ಬೆಂಗಳೂರು ಸೇರಿದಂತೆ 30 ನಗರಗಳು ಆಯ್ಕೆಯಾಗಿವೆ.
ನೂತನ ಸ್ಮಾರ್ಟ್ ಸಿಟಿಯ ಪಟ್ಟಿಯಲ್ಲಿ ತಿರುವನಂತಪುರಂ ಮೊದಲ ಸ್ಥಾನ ಗಿಟ್ಟಿಸಿಕೊಂಡಿದೆ. ತ್ರಿವೆಂಡ್ರಂ, ರಾಜ್ ಪುರ್, ಅಮರಾವತಿ, ಪಾಟ್ನ, ಕರೀಂನಗರ್, ಮುಝಾಫರ್ ಪುರ್, ಪಾಂಡಿಚೇರಿ, ಗಾಂಧಿನಗರ್, ಶ್ರೀನಗರ್, ಸಾಗರ್, ಕರ್ನಲ್, ಸಾಟ್ನಾ, ಬೆಂಗಳೂರು, ಶಿಮ್ಲಾ, ಡೆಹ್ರಾಡೂನ್, ತಿರುಪುರ್, ಪಿಂಪ್ರಿ ಚಿಂಚಾವಾಡ್, ಬಿಲಾಸ್ ಪುರ್, ಪಾಸಿಘಾಟ್, ಜಮ್ಮು, ದಾವೊದ್, ತಿರುನೆಲ್ವೇಲಿ, ತೂತುಕುಡಿ, ತಿರುಚಿರಾಪಳ್ಳಿ, ಜಾನ್ಸಿ, ಐಜಾವಲ್, ಅಲಹಾಬಾದ್, ಅಲಿಗಢ್, ಗ್ಯಾಂಗ್ ಟಕ್ ಸ್ಮಾರ್ಟ್ ಸಿಟಿ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಆದರೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿರುವ ರಾಯ್ ಬರೇಲಿ ಕ್ಷೇತ್ರ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.
ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು ಅವರು ಸ್ಮಾರ್ಟ್ ಸಿಟಿ ಪಟ್ಟಿಯನ್ನು ಬಿಡುಗಡೆಗೊಳಿಸಿದರು. ಸುಮಾರು 45 ನಗರಗಳು ಸ್ಪರ್ಧಿಸಿದ್ದು, ಇದರಲ್ಲಿ ಕೇವಲ 30ನಗರಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಸ್ಮಾರ್ಟ್ ಸಿಟಿ ಯೋಜನೆಯ ಹಿನ್ನೆಲೆಯಲ್ಲಿ 30 ನಗರಗಳನ್ನು ಆಯ್ಕೆ ಮಾಡಲಾಗಿದ್ದು, ಒಟ್ಟು 57, 393 ಕೋಟಿ ರೂಪಾಯಿ ಹೂಡಿಕೆಯಾಗಲಿದೆ ಎಂದು ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…