ಮನೆ ಎದುರೇ ರೌಡಿಶೀಟರ್‌ ಪಳನಿ ಮರ್ಡರ್‌

Team Udayavani, Jun 24, 2017, 11:10 AM IST

palani1-rowdi-shiter.jpg

ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್‌ವೊಬ್ಬನನ್ನು ನಾಲ್ವರು ಆಗಂತುಕರು ಆತನ ಮನೆಯ ಎದುರು ಹತ್ಯೆಗೈದು ಪರಾರಿಯಾಗಿರುವ ಘಟನೆ ನ್ಯೂ ಬಾಗಲೂರಿನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಪಳನಿ (42) ಅಲಿಯಾಸ್‌ ಲೇಔಟ್‌ ಪಳನಿ ಹತ್ಯೆಯಾದ ರೌಡಿಶೀಟರ್‌. ಬೆಳಗ್ಗೆ 7 ಗಂಟೆ ಸುಮಾರಿಗೆ ಮನೆ ಬಳಿಯ ಟೀ ಅಂಗಡಿಗೆ ಹೋಗುತ್ತಿದ್ದ ಪಳನಿ ಮೇಲೆ ನಾಲ್ವರು ಹೆಲ್ಮೆಟ್‌ಧಾರಿಗಳು ಮಾರಕಾಸ್ತ್ರಗಳಿಂದ ಮನಬದ್ದಂತೆ ಹಲ್ಲೆ ನಡೆಸಿದರು. 

ಪಳನಿಯನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫ‌ಲಿಸದೇ ಸಾವನ್ನಪ್ಪಿದ್ದಾನೆ. ಕೊಲೆಗೂ ಮೊದಲೇ ಸ್ಥಳಕ್ಕೆ ಬಂದಿರುವ ಆರೋಪಿಗಳು ಹತ್ತಿರದ ಸಿಸಿಟಿವಿಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

20 ವರ್ಷಗಳ ಹಿಂದೆ ಕೆ.ಜಿ.ಹಳ್ಳಿ ಠಾಣೆಯಲ್ಲಿ ಪಳನಿ ವಿರುದ್ಧ ರೌಡಿಪಟ್ಟಿ ತೆರೆಯಲಾಗಿದ್ದು, ಮೂರು ಕೊಲೆ, 7 ಕೊಲೆ ಯತ್ನ ಮತ್ತು ಒಂದು ಪೊಕೊÕ ಪ್ರಕರಣ ಕೂಡ ದಾಖಲಾಗಿದೆ. ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ಪಳನಿ ವಾರದ ಹಿಂದಷ್ಟೇ ಬಿಡುಗಡೆಯಾಗಿದ್ದ. ಈತನ ವಿರೋಧಿ ಬಣದವರೆ ಕೊಲೆ ಮಾಡಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಫೀಲ್ಡ್‌ನಲ್ಲಿ ಒಬ್ಬನೇ ಪಳನಿ: ಹತ್ತು ವರ್ಷಗಳ ಹಿಂದೆ ವಿವೇಕನಗರ ಠಾಣಾ ವ್ಯಾಪ್ತಿಯಲ್ಲಿ ಪಳನಿ ಎಂಬ ರೌಡಿಶೀಟರ್‌ ಜತೆ ವಿರೋಧ ಕಟ್ಟಿಕೊಂಡಿದ್ದ  ಪಳನಿ ಅಲಿಯಾಸ್‌ ಲೇಔಟ್‌ ಪಳನಿ, “ಫೀಲ್ಡ್‌ನಲ್ಲಿ ಒಬ್ಬನೇ ಪಳನಿ ಇರಬೇಕು. ಅದು ನಾನಾಗಿರಬೇಕು,’ ಎಂದು 2003ರಲ್ಲಿ ವಿವೇಕನಗರದ ಪಳನಿ ಮೇಲೆ ಮಾರಣಾಂತಿಕ ದಾಳಿ ನಡೆಸಿ, ಕೊನೆಗೆ ಆಸ್ಪತ್ರೆಗೆ ನುಗ್ಗಿ ದಾರುಣವಾಗಿ ಹತ್ಯೆಗೈದಿದ್ದ.

ಈ ಪ್ರಕರಣದಲ್ಲಿ ಜೈಲು ಸೇರಿದ್ದ ಲೇಔಟ್‌ ಪಳನಿ ಹೊರಬರುತ್ತಿದ್ದಂತೆ ದಲಿತ ಸಂಘಟನೆಯೊಂದನ್ನು ಕಟ್ಟಿಕೊಂಡಿದ್ದ. ರಿಯಲ್‌ ಎಸ್ಟೇಟ್‌ ವ್ಯವಹಾರ ಕೂಡ ನಡೆಸುತ್ತಿದ್ದ.  ಸ್ಥಳೀಯ ಪಾಲಿಕೆ ಸದಸ್ಯರ  ಜತೆ ಕೂಡ ವಿರೋಧ ಕಟ್ಟಿಕೊಂಡು ಅವರ ಬೆಂಬಲಿಗರಿಗೂ ಎಚ್ಚರಿಕೆ ನೀಡಲು ಹೋಗಿ ಜೈಲು ಸೇರಿದ್ದ. ವಾರದ ಹಿಂದಷ್ಟೇ ಬಿಡುಗಡೆಯಾಗಿ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.