ಶಾಂತಿ-ಸೌಹಾರ್ದತೆ ಕಾಪಾಡಲು ಮನವಿ

Team Udayavani, Jun 25, 2017, 11:53 AM IST

dvg5.jpg

ಹರಪನಹಳ್ಳಿ: ರಂಜಾನ್‌ ಹಬ್ಬ ಆಚರಣೆ ವೇಳೆ ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಸಿಪಿಐ ಡಿ.ದುರುಗಪ್ಪ ಮನವಿ ಮಾಡಿದರು. ಪಟ್ಟಣದ ಪೊಲೀಸ್‌ ಠಾಣೆ ಆವರಣದಲ್ಲಿ ರಂಜಾನ್‌ ಹಬ್ಬದ ಅಂಗವಾಗಿ ನಡೆದ ಶಾಂತಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ರಂಜಾನ್‌ ಹಬ್ಬದ ದಿನದಂದು ಅಹಿತರ ಘಟನೆಗಳು ಸಂಘವಿಸದಂತೆ ಪ್ರತಿಯೊಬ್ಬರು ಸಹಕರಿಸಬೇಕು. ಹಲವು ಸೂಕ್ಷ್ಮ ಸನ್ನಿವೇಶಗಳು ಇರುವುದರಿಂದ ನಾಗರಿಕರ ಹಿತ ಕಾಪಾಡುವುದು ಮತ್ತು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ರಕ್ಷಣೆ ಹೊಣೆ ನಮ್ಮ ಮೇಲಿದೆ. ಈ ಹಿಂದಿನಿಂದ ನಡೆದು ಬಂದಂತೆ ಸೌಹಾರ್ದಯುತವಾಗಿ ರಂಜಾನ್‌ ಆಚರಿಸುವಂತೆ ಹೇಳಿದರು. 

ಅಂಜುಮನ್‌ ಸಮಿತಿ ಅಧ್ಯಕ್ಷ ಸಿ.ಜಾವೀದ್‌ ಮಾತನಾಡಿ, ಈದ್ಗಾ ಮೈದಾನದಲ್ಲಿ ನಡೆಯುವ ಪ್ರಾರ್ಥನೆಗೆ ಬರುವವರ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ವಾಹನಗಳನ್ನು ನಿಲುಗಡೆ ವ್ಯವಸ್ಥೆ ಮಾಡಬೇಕು. ಸಮುದಾಯದ ಬಡವರು ಕೂಲಿ ಕೆಲಸಕ್ಕೆ ತೆರಳಿ ಸಂಜೆ ಮನೆಗೆ ಬರುವುದರಿಂದ ಪಟ್ಟಣದ ಅಂಗಡಿ ಮುಗ್ಗಟ್ಟುಗಳನ್ನು ರಾತ್ರಿ 11 ಗಂಟೆವರೆಗೆ ತೆರೆಯುವಂತೆ ಅವಕಾಶ ಕಲ್ಪಿಸಿದರೆ ಖರೀದಿಗೆ ಸಹಾಯವಾಗುತ್ತದೆ ಎಂದು ಸಲಹೆ ನೀಡಿದರು. 

ಪುರಸಭೆ ಮಾಜಿ ಅಧ್ಯಕ್ಷ ಡಿ.ಅಬ್ದುಲ್‌ ರಹಿಮಾನಸಾಬ್‌ ಮಾತನಾಡಿ, 4 ಕಡೆಗಳಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ. 30 ದಿನಗಳ ಕಾಲ ಉಪವಾಸವಿದ್ದು, ದೇಹ ದಂಡಿಸಿರುತ್ತಾರೆ. ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಸಹೋದರಂತೆ ಇರುವುದರಿಂದ ಶಾಂತಿಯುವಾಗಿ ಹಬ್ಬ ಆಚರಿಸುತ್ತೇವೆ. ಸಭೆಗೆ ಕೇವಲ ಮುಸ್ಲಿಂ ಮುಖಂಡರನ್ನು ಆಹ್ವಾನಿಸುವ ಬದಲು ಎಲ್ಲಾ ಸಮುದಾದವರನ್ನು ಆಹ್ವಾನಿಸಬೇಕಿತ್ತು ಎಂದರು.

ಪಿಎಸ್‌ಐ ರಾಜೇಂದ್ರನಾಯ್ಕ ಮಾತನಾಡಿ, ಜನರು ಕೆಲಸಕ್ಕೆ ಹೋಗಿ ತಡವಾಗಿ ಬರುವುದರಿಂದ ಬಟ್ಟೆ, ಅಗತ್ಯ ಸಾಮಾನು ಖರೀದಿಸಲು ರಸ್ತೆ ಬದಿ ಅಂಗಡಿ ಮುಗ್ಗಟ್ಟು ಹಾಕಿಕೊಳ್ಳಲು ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ವಕೀಲ ಟಿ.ವೆಂಕಟೇಶ್‌, ಅಲ್ಮರಸೀಕೆರೆ ರಾಜಣ್ಣ, ರಾಜಪ್ಪ ಮಾತನಾಡಿದರು. ಜಾಫರ್‌ಸಾಭ್‌, ಆರ್‌.ವಾಗೀಶ್‌, ಗಣೇಶ್‌, ಭಂಗಿ ಕೆಂಚಪ್ಪ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

47 Lakhs collected for Kanhaiya Campaign!

Kanhaiya Kumar ಕ್ಯಾಂಪೇನ್‌ಗೆ 47 ಲಕ್ಷ ರೂ. ದೇಣಿಗೆ ಸಂಗ್ರಹ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.