ಪ್ರಾಥಮಿಕ ಚಿಕಿತ್ಸೆ ಮಾಹಿತಿ ಅತ್ಯಗತ್ಯ

Team Udayavani, Jun 28, 2017, 12:48 PM IST

dvg1.jpg

ದಾವಣಗೆರೆ: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವರಿಗೆ ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲಕ ಪ್ರಾಣ ಉಳಿಸುವಂತಹ ಕ್ರಮಗಳ ಬಗ್ಗೆ ಹೆಚ್ಚಿನ ಮಾಹಿತಿ, ಜಾಗೃತಿಯ ಅಗತ್ಯ ಇದೆ ಎಂದು ಜೆ.ಜೆ. ಎಂ. ವೈದ್ಯಕೀಯ ಮಹಾವಿದ್ಯಾಲಯದ ಅರವಳಿಕೆ ವಿಭಾಗದ ಮುಖ್ಯಸ್ಥ ಡಾ| ಆರ್‌. ರವಿ ಅಭಿಪ್ರಾಯಪಟ್ಟಿದ್ದಾರೆ. 

ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ… ವಿಷಯ ಕುರಿತ ಪ್ರಾಯೋಗಿಕ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ವಿದೇಶದಲ್ಲಿ ವೈದ್ಯರು, ಸಾರ್ವಜನಿಕರು, ಪೊಲೀಸರಾದಿಯಾಗಿ ಅಪಘಾತದಲ್ಲಿ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡುವ ಮೂಲಕ ಸಾವಿರಾರು ಜನರ ಅತ್ಯಮೂಲ್ಯ ಪ್ರಾಣ ಉಳಿಸುವರು.

ಪ್ರತಿಯೊಬ್ಬರಿಗೆ ಪ್ರಾಥಮಿಕ ಚಿಕಿತ್ಸೆ, ಕ್ರಮಗಳ ಬಗ್ಗೆ ಮಾಹಿತಿ ಇರುತ್ತದೆ. ಆದರೆ, ನಮ್ಮಲ್ಲಿ ಅಂತಹ ವಾತಾವರಣ ಇಲ್ಲ ಎಂದು ತಿಳಿಸಿದರು. ಅಪಘಾತದಲ್ಲಿ ಗಾಯಗೊಂಡವರ ಹೃದಯಬಡಿತ, ರಕ್ತಸಂಚಲನೆ, ಉಸಿರಾಟಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು ಅತೀ ಮುಖ್ಯ. ಹೃದಯಕ್ಕೆ ರಕ್ತ ಸಂಚಲನೆ ಆಗುವುದು 4-6 ನಿಮಿಷ ತಡವಾದಲ್ಲಿ ಮೆದುಳು ನಿಷ್ಕಿಯವಾಗುತ್ತದೆ.

ಮೆದುಳು ನಿಷ್ಕಿಯವಾಗದಂತೆ ಆಮ್ಲಜನಕ, ಉಸಿರಾಟದ ವ್ಯವಸ್ಥೆ ಮಾಡಬೇಕು. ಅದನ್ನು ವೈದ್ಯಕೀಯ ಭಾಷೆಯಲ್ಲಿ ಗೋಲ್ಡನ್‌ ಮಿನಿಟ್‌ ಎನ್ನಲಾಗುತ್ತದೆ. ಆ ಗೋಲ್ಡನ್‌ ಮಿನಿಟ್‌ನಲ್ಲಿ ಸೂಕ್ತ ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲಕ ಪ್ರಾಣ ರಕ್ಷಣೆ ಮಾಡಬಹುದು ಎಂದು ತಿಳಿಸಿದರು. ಅಪಘಾತದಲ್ಲಿ ಸ್ಥಳದಲ್ಲಿ ಅತ್ಯಗತ್ಯವಾದ ಪ್ರಾಥಮಿಕ ಚಿಕಿತ್ಸೆ ನೀಡುವ ಜೊತೆಗೆ ಕೂಡಲೇ ಆಸ್ಪತ್ರೆಗೆ ಸಾಗಿಸುವಂತಾಗಬೇಕು. 

ಸಕಾಲದಲ್ಲಿ ಸೂಕ್ತ ಪ್ರಾಥಮಿಕ ಚಿಕಿತ್ಸೆ ಕೊಡುವ ಮೂಲಕ ಸಾವಿರಾರು ಜನರ ಪ್ರಾಣ ಉಳಿಸಬಹುದು. ಪ್ರಾಥಮಿಕ ಚಿಕಿತ್ಸಾ ಕ್ರಮಗಳ ಬಗ್ಗೆ ಹೆಚ್ಚಿನ ತಿಳಿವಳಿಕೆ, ಜಾಗೃತಿ ಮೂಡಿಸಬೇಕಿದೆ ಎಂದು ತಿಳಿಸಿದರು.ಜಿಲ್ಲಾ ರಕ್ಷಣಾಧಿಕಾರಿ ಡಾ| ಭೀಮಾಶಂಕರ್‌ ಎಸ್‌. ಗುಳೇದ್‌ ಮಾತನಾಡಿ, ದಾವಣಗೆರೆ ಜಿಲ್ಲೆಯಲ್ಲಿ 2016 ರಲ್ಲಿ ನಡೆದ ರಸ್ತೆ ಅಪಘಾತದಲ್ಲಿ 304 ಜನರು ಸಾವನ್ನಪ್ಪಿದ್ದರೆ, ನೂರಾರು ಜನರು ಗಾಯಗೊಂಡಿದ್ದಾರೆ.

ಚಾಲಕರ ನಿರ್ಲಕ್ಷ, ತಾಂತ್ರಿಕ ದೋಷ ಹೀಗೆ ಯಾವುದೇ ಕಾರಣದಿಂದಲೇ ಆಗಲಿ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಸಕಾಲಿಕವಾಗಿ ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲಕ ಜೀವ ಉಳಿಸುವಂತಾಗಬೇಕು ಎಂದು ತಿಳಿಸಿದರು. ಅಪಘಾತ ಸಂಭವಿಸಿದ ತಕ್ಷಣ ಗಾಯಾಳುಗಳಿಗೆ ನೀಡುವ ಪ್ರಾಥಮಿಕ ಚಿಕಿತ್ಸೆ ನೀಡುವ ಸಮಯ ವೈದ್ಯಕೀಯ ಭಾಷೆಯಲ್ಲಿ ಗೋಲ್ಡನ್‌ ಅವರ್‌. ಆ ಅವಧಿಯಲ್ಲಿ ಗಾಯಕ್ಕೆ ತುತ್ತಾದವರ ಉಸಿರಾಟ, ಹೃದಯ ಬಡಿತ, ರಕ್ತ ಸಂಚಲನೆ ಸರಾಗವಾಗಿರುವಂತೆ ನೋಡಿಕೊಳ್ಳಬೇಕು.

ಪ್ರಾಥಮಿಕ  ಚಿಕಿತ್ಸಾ ಕ್ರಮಗಳ ಬಗ್ಗೆ ಹೆಚ್ಚು ಮಾಹಿತಿ ಪಡೆಯುವಂತಾಗಬೇಕು ಎಂದರು. ಜೆ.ಜೆ. ಎಂ. ವೈದ್ಯಕೀಯ ಮಹಾವಿದ್ಯಾಲಯದ ಡಾ| ಶಿಲ್ಪಾ ಮಾತನಾಡಿ, ಅಪಘಾತದ ನಂತರ ಪ್ರಾಥಮಿಕ ಚಿಕಿತ್ಸೆ ಕೊಡುವಂತದ್ದು ಜೀವ ಉಳಿಸುತ್ತದೆ. ಸಾರ್ವಜನಿಕರು ಹೆಚ್ಚಿನ ಮಟ್ಟದಲ್ಲಿ ಪ್ರಾಥಮಿಕ ಚಿಕಿತ್ಸಾ ಕ್ರಮಗಳ ಬಗ್ಗೆ ತಿಳಿದುಕೊಳ್ಳುವಂತಾಗಬೇಕು ಎಂದು ಆಶಿಸಿದರು. ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕಿ ಯಶೋಧಾ ಎಸ್‌. ವಂಟಿಗೋಡಿ, ಡಾ| ಅನಿತಾ ಇದ್ದರು. 

ಟಾಪ್ ನ್ಯೂಸ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.