ಮೂರು ದಿನಗಳ ಭೇಟಿಗಾಗಿ ಪ್ರಧಾನಿ ಮೋದಿ ಇಸ್ರೇಲ್ಗೆ ಪ್ರಯಾಣ
Team Udayavani, Jul 4, 2017, 1:15 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಗಳವಾರ ಬೆಳಗ್ಗೆ 3 ದಿನಗಳ ಪ್ರವಾಸಾರ್ಥ ಇಸ್ರೇಲ್ಗೆ ಪ್ರಯಾಣ ಬೆಳೆಸಿದರು.
ಪ್ರಧಾನಿ ಮೋದಿ ಅವರು ಜು.6ರ ವರೆಗೆ ಇಸ್ರೇಲ್ನಲ್ಲಿ ಇರುತ್ತಾರೆ. ಅದಕ್ಕೆ ಮುನ್ನ ಅವರು ಜರ್ಮನಿಯ ಹ್ಯಾಂಬರ್ಗ್ ಗೆ ಪ್ರಯಾಣಿಸಿ ಅಲ್ಲಿ ಜಿ-20 ರಾಷ್ಟ್ರಗಳ ಶೃಂಗ ಸಭೆಯಲ್ಲಿ ಪಾಲ್ಗೊಳುತ್ತಾರೆ.
ಮೋದಿ ಅವರು ತಮ್ಮ ಇಸ್ರೇಲ್ ಭೇಟಿಯಲ್ಲಿ ಅಧ್ಯಕ್ಷ ರುವೆನ್ ರಿವಿನ್ ಅವರನ್ನೂ ಕಾಣುವರಲ್ಲದೆ ಉಭಯ ದೇಶಗಳ ಸಿಇಓಗಳನ್ನು ಹಾಗೂ ಇಂಡಿಯಾ ಡಯಾನ್ಪೋರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
1918ರ ಹೈಪಾ ವಿಮೋಚನೆಯಲ್ಲಿ ಬಲಿದಾನಗೈದ ಧೀರ ಭಾರತೀಯ ಸೈನಿಕರಿಗೆ ಮೋದಿ ಪುಷ್ಪಾಂಜಲಿ ಸಲ್ಲಿಸಲಿದ್ದಾರೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗಿನ ಭೇಟಿಯಲ್ಲಿ ಉಭಯ ದೇಶಗಳ ನಡುವಿನ ಪರಸ್ಪರ ಲಾಭದಾಯಕ ಎನಿಸುವ ವ್ಯಾಪಕ ವಿಷಯಗಳಿಗೆ ಸಂಬಂಧಿಸಿ ಆಳವಾದ ಚರ್ಚೆ ನಡೆಸಲಾಗುವುದು ಎಂದು ಪ್ರಧಾನಿ ಮೋದಿ ತಮ್ಮ ಫೇಸ್ ಬುಕ್ ಪೋಸ್ಟ್ನಲ್ಲಿ ಹೇಳಿದ್ದಾರೆ.
“ಭಯೋತ್ಪಾದನೆಯಂತಹ ಸಮಾನ ಹಾಗೂ ಪ್ರಮುಖ ಭದ್ರತಾ ಸವಾಲುಗಳನ್ನು ನಿಭಾಯಿಸುವ ಬಗ್ಗೆಯೂ ನಾವು ಚರ್ಚಿಸಲಿದ್ದೇವೆ’ ಎಂದು ಮೋದಿ ತಿಳಿಸಿದ್ದಾರೆ.
ಇಸ್ರೇಲಿಗೆ ಭೇಟಿ ನೀಡುವ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿರುವ ಮೋದಿ, “ಈ ಅಭೂತಪೂರ್ವ ಭೇಟಿಯನ್ನು ಕಾತರದಿಂದ ಎದುರು ನೋಡುತ್ತಿರುವ ನಾನು, ಈ ಭೇಟಿ ಉಭಯ ದೇಶಗಳನ್ನು ಹಾಗೂ ಅವುಗಳ ಜನರನ್ನು ಇನ್ನಷ್ಟು ಸನಿಹಕ್ಕೆ ತರುವಂತಾಗಲೆಂದು ಹಾರೈಸುತ್ತೇನೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ