ರಸ್ತೆ ಮೇಲ್ದರ್ಜೆಗೆ: ಮನವಿ ನೀಡಲು ನಿರ್ಣಯ


Team Udayavani, Jul 5, 2017, 3:35 AM IST

Road-3-7.jpg

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮ ಪಂಚಾಯತ್‌ನ 2017-18ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ಪುಂಜಾಲಕಟ್ಟೆ ನಂದಗೋಕುಲ ಸಭಾಂಗಣದಲ್ಲಿ ಸೋಮವಾರ ಜರಗಿತು. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಮೂರ್ಜೆ- ನಯನಾಡು ರಸ್ತೆಯನ್ನು ಮೇಲ್ದರ್ಜೆಗೆ ಏರಿಸಲು ಸಂಬಂಧಿತ ಇಲಾಖೆಗೆ ಪತ್ರ ಮುಖೇನ ವಿನಂತಿಸಲು ಗ್ರಾಮಸಭೆಯಲ್ಲಿ ನಿರ್ಣಯಿಸಲಾಯಿತು.

ಬಂಟ್ವಾಳ ಕೃಷಿ ಅಧಿಕಾರಿ ನಾರಾಯಣ ಶೆಟ್ಟಿ ಅವರು ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿ ಮಾತನಾಡಿ, ಗ್ರಾ.ಪಂ.ನ ಅಭಿವೃದ್ಧಿ ಕಾರ್ಯಗಳಿಗೆ ಅಭಿನಂದನೆ ಸಲ್ಲಿಸಿದರು. ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮಸ್ಥರು ಗ್ರಾಮಸಭೆಗಳಲ್ಲಿ ಭಾಗವಹಿಸಿ ಸೂಕ್ತ ಸಲಹೆ, ಸೂಚನೆಗಳನ್ನು ನೀಡುವುದರ ಮೂಲಕ ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕು ಎಂದರು. 2016-17ನೇ ಆರ್ಥಿಕ ವರ್ಷದಲ್ಲಿ ಶೇ. ನೂರು ಕರ ಸಂಗ್ರಹಕ್ಕೆ ಸಹಕರಿಸಿದ ಗ್ರಾಮಸ್ಥರನ್ನು, ನಯನಾಡು ಪರಿಸರಕ್ಕೆ ಕುಡಿಯುವ ನೀರು ಒದಗಿಸಿದ ಉದ್ಯಮಿ ಹರೀಂದ್ರ ಪೈ ಅವರನ್ನು ಅಭಿನಂದಿಸಿದರು.

ಪೂರ್ಣ ಸಹಕಾರ
ಜಿ.ಪಂ. ಸದಸ್ಯ ಎಂ.ತುಂಗಪ್ಪ ಬಂಗೇರ ಮಾತನಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ತನ್ನ ಅನುದಾನದಿಂದ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ. ಜಿಲ್ಲಾ ಪಂಚಾಯತ್‌ನಿಂದ ದೊರಕುವ ಅನುದಾನಗಳನ್ನು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ವಿನಿಯೋಗಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.

ಪುಂಜಾಲಕಟ್ಟೆ ಪ್ರಾ. ಆ. ಕೇಂದ್ರ ಆಯುಷ್‌ ವೈದ್ಯಾಧಿಕಾರಿ ಡಾ| ಸೋಹನ್‌ ಕುಮಾರ್‌ ಎನ್‌. ಮಾಹಿತಿ ನೀಡಿ ಮಾತನಾಡಿ ಮಳೆಗಾಲದ ಸಾಂಕ್ರಾಮಿಕ ರೋಗಗಳು ಬಾರದಂತೆ ಮುನ್ನೆಚ್ಚರಿಕೆ  ವಹಿಸಿಕೊಳ್ಳಬೇಕು. ಸಕಾಲದಲ್ಲಿ ಸರಿಯಾದ ಔಷಧ ಪಡೆದುಕೊಳ್ಳಬೇಕು ಎಂದರು. ಗ್ರಾಮಸ್ಥರ ಪರ ರಾಜೇಂದ್ರ ಕೆ.ವಿ., ಮೋಹನ್‌ ಸಾಲ್ಯಾನ್‌ ಅವರು ಅಭಿವೃದ್ಧಿ ಕಾರ್ಯಗಳ ವಿವರ ಕೇಳಿದರು. ಇದೇ ವೇಳೆ 2017-18ನೇ ಸಾಲಿನ ವಸತಿ ಯೋಜನೆ, ನಿವೇಶನ, ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಫಲಾನುಭವಿಗಳ ಪಟ್ಟಿ ಮಾಡಲಾಯಿತು.

ಉಪಾಧ್ಯಕ್ಷೆ ಲಕ್ಷ್ಮೀ ಜೆ. ಬಂಗೇರ,  ತಾ.ಪಂ. ಸದಸ್ಯ ರಮೇಶ್‌ ಪೂಜಾರಿ, ಗ್ರಾ.ಪಂ. ಸದಸ್ಯರಾದ ಲಕ್ಷ್ಮೀನಾರಾಯಣ ಹೆಗ್ಡೆ, ಯೋಗೇಂದ್ರ, ಸರೋಜಾ ಡಿ.ಶೆಟ್ಟಿ, ಸೀತಾ, ವಸಂತಿ, ಸುಮಿತ್ರಾ, ರಾಜೇಶ್‌ ಪೂಜಾರಿ, ಪಶು ವೈದ್ಯಾಧಿಕಾರಿ ರಾಜವರ್ಮ ಜೈನ್‌, ತೋಟಗಾರಿಕೆ ಇಲಾಖಾಧಿಕಾರಿ ನಂದಿನಿ,  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಸಿಂಧೂ ಕೆ.ವಿ., ಕಂದಾಯ ಇಲಾಖೆಯ ಕುಮಾರ ಟಿ.ಸಿ., ಸಮಾಜ ಕಲ್ಯಾಣ ಇಲಾಖೆಯ ಮೇಲ್ವಿಚಾರಕ ಪ್ರಸಾದ್‌, ವಗ್ಗ ಮೆಸ್ಕಾಂ ಎಂಜಿನಿಯರ್‌ ಟಿ.ಎನ್‌ ರಂಗಸ್ವಾಮಿ, ಕಿರಿಯ ಆರೋಗ್ಯ ಸಹಾಯಕಿ ಪ್ರಮೀಳಾ, ನಿತ್ಯಾನಂದ, ಪಿಲಾತಬೆಟ್ಟು ವ್ಯ.ಸೇ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜಪ್ಪ ಮೂಲ್ಯ, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತ್‌ ಸಿಬಂದಿ ಉಪಸ್ಥಿತರಿದ್ದರು. ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಬಾಲಕೃಷ್ಣ ಪೂಜಾರಿ ಅವರು ಸ್ವಾಗತಿಸಿ, ವರದಿ ಮಂಡಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.