ಬ್ಲೂ ಚಿಪ್ ಶೇರುಗಳ ಬಲದಲ್ಲಿ ಮುಂಬಯಿ ಶೇರು 75 ಅಂಕ ಜಿಗಿತ
Team Udayavani, Jul 5, 2017, 10:27 AM IST
ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದಿರುವ ಹೊರತಾಗಿಯೂ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ, ಬ್ಲೂ ಚಿಪ್ ಶೇರುಗಳ ಬಲದಲ್ಲಿ, 75 ಅಂಕಗಳ ಏರಿಕೆಯನ್ನು ದಾಖಲಿಸಿತು.
ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್ 39.28 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 31,249.07 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 13.95 ಅಂಕಗಳ ಏರಿಕೆಯೊಂದಿಗೆ 9,627.25 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ರಿಲಯನ್ಸ್, ಐಟಿಸಿ, ಟಾಟಾ ಮೋಟರ್, ಟಾಟಾ ಸ್ಟೀಲ್ ಮತ್ತು ಎಸ್ ಬ್ಯಾಂಕ್ ಶೇರುಗಳು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್ಗಳು : ಮಹೀಂದ್ರ, ಟಾಟಾ ಮೋಟರ್, ರಿಲಯನ್ಸ್ ಮತ್ತು ಅಂಬುಜಾ ಸಿಮೆಂಟ್ಸ್. ಟಾಪ್ ಲೂಸರ್ಗಳು : ಭಾರ್ತಿ ಏರ್ಟೆಲ್, ಇನ್ಫೋಸಿಸ್, ವಿಪ್ರೋ, ಐಟಿಸಿ, ಎಚ್ಡಿಎಫ್ಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್