ಸುಧಾಕರ್ ರಾಜೀನಾಮೆ ಹೇಳಿಕೆ: ಸಂಸದ ಮೊಯ್ಲಿ ಮನೆ ಮೇಲೆ ಕಲ್ಲು ತೂರಾಟ
Team Udayavani, Jul 7, 2017, 8:37 AM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಶಾಸಕ ಕೆ. ಸುಧಾಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ ಬೆನ್ನಲೇ ಕಾಂಗ್ರೆಸ್ ಕಾರ್ಯಕರ್ತರು ಸಂಸದ ವೀರಪ್ಪ ಮೊಯ್ಲಿ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.
ಶಾಸಕ ಸುಧಾಕರ್ ರಾಜೀನಾಮೆ ನೀಡುವುದಾಗಿ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದರು. ರಾಜೀನಾಮೆಗೆ ಸಂಸದ ವೀರಪ್ಪ ಮೊಯ್ಲಿ ಕಾರಣ ಎಂದು ಆಕ್ರೋಶಗೊಂಡ ಬೆಂಬಲಿಗರು ಚಿಕ್ಕಬಳ್ಳಾಪುರ ನಗರದ ಶಂಕರಮಠದಲ್ಲಿರುವ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿರುವ ಸುಧಾಕರ್ ತಂದೆ ಕೇಶವ್ ರೆಡ್ಡಿಯವರು ತಮ್ಮ ಸ್ಥಾನದಿಂದ ಕೆಳಗಿಳಿಯುವಂತೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸೂಚನೆ ನೀಡಿದ್ದರು. ಇದರಿಂದ ಬೇಸರಗೊಂಡ ಸುಧಾಕರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿಕೊಂಡಿದ್ದರು.
ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್