ಬಂಟ್ವಾಳದಲ್ಲಿ ಬೃಹತ್ ಪ್ರತಿಭಟನೆ;ಸಂಸದೆ ಶೋಭಾ ಸೇರಿ ಹಲವರು ವಶಕ್ಕೆ
Team Udayavani, Jul 7, 2017, 11:30 AM IST
ಬಂಟ್ವಾಳ: ಬಿ.ಸಿ. ರೋಡ್‌ನಲ್ಲಿ ಜು. 4ರ ರಾತ್ರಿ ಆರ್‌ಎಸ್‌ಎಸ್ ಕಾರ್ಯಕರ್ತ ಶರತ್ ಅವರ ಮೇಲೆ ಮರಣಾಂತಿಕ ಹಲ್ಲೆ ಪ್ರಕರಣ ಖಂಡಿಸಿ, ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಬಿ.ಸಿ.ರೋಡ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಿಷೇಧಾಜ್ಞೆಯ ನಡುವೆಯೂ ನಡೆದ ಶಾಂತಿಯುತ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ
ಸಂಸದ ನಳಿನ್ ಕುಮಾರ್ ಕಟೀಲ್,ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಬಿಜೆಪಿ ನಾಯಕರು, ಸಂಘ ಪರಿವಾರದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆಯಲ್ಲಿ ಸಾವಿರಾರು ಜನ ಹಿಂದೂ ಸಂಘಟನೆ ಕಾರ್ಯಕರ್ತರು ಭಾಗಿಯಾಗಿದ್ದು, ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿತ್ತು.
ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಕಾರ್ಯಕರ್ತರು ಹೆಗಲ ಮೇಲೆ ಹೊತ್ತುಕೊಂಡು ಒಂದು ಸುತ್ತು ಮೆರವಣಿಗೆ ಮಾಡಿದರು.
ಸಂಸದೆ ಶೋಭಾ ಕರಂದ್ಲಾಜೆ ಅವರು ಹಲ್ಲೆಗೀಡಾಗಿರುವ ಶರತ್ ಅವರ ಬಿ.ಸಿ.ರೋಡ್‌ನ ಲಾಂಡ್ರಿಗೆ ಭೇಟಿ ನೀಡಿದರು. ಈ ವೇಳೆ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿದರು.
ಇದುವರೆಗೆ ಆರೋಪಿಗಳ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿಲ್ಲ.ಆರೋಪಿಗಳ ಶೋಧಕ್ಕಾಗಿ ಆರು ತನಿಖಾ ತಂಡಗಳನ್ನು ರಚಿಸ ಲಾಗಿದೆ. ಈಗಾಗಲೇ 20 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರೂ ಮಹತ್ವದ ಸುಳಿವು ಲಭಿಸಿಲ್ಲ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ
ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೆಸ್ಸೆಸ್ ಕಾರ್ಯಕರ್ತ ಶರತ್ ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಏನೂ ಆಗದೆ ಯಥಾ ಸ್ಥಿತಿಯಲ್ಲಿದೆ. ತಲೆ ಮತ್ತು ಕುತ್ತಿಗೆಯ ಭಾಗಕ್ಕೆ ತೀವ್ರ ಗಾಯಗೊಂಡಿರುವ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ
ತಾಲೂಕಿನಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು
Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ