ಐಸಿಯುನಲ್ಲಿ ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿಗೆ ಚಿಕಿತ್ಸೆ
Team Udayavani, Jul 8, 2017, 3:15 AM IST
ಕಾರವಾರ: ಜಾನಪದ ಕೋಗಿಲೆ ಪದ್ಮಶ್ರೀ ಸುಕ್ರಿ ಬೊಮ್ಮ ಗೌಡ ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು,
ಉಸಿರಾಟದ ಸಮಸ್ಯೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಿವಿಲ್ ಆಸ್ಪತ್ರೆ ಆಡಳಿತಾಧಿಕಾರಿ ಡಾ| ಶಿವಾನಂದ ಕುಡ್ತಲ
ಕರ್ ತಿಳಿಸಿದ್ದಾರೆ.
ಜು. 4ರಂದು ಬೆಂಗಳೂರಿನ ಸಾಗರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದ ಅವರು, ಅಲ್ಲಿಂದ ಬಂದ ಮೇಲೆ ಶುಕ್ರವಾರ ಬೆಳಗಿನಜಾವ ಕಾರವಾರ ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆರೋಗ್ಯ ಮೊದಲು ಕಳವಳಕಾರಿಯಾಗಿದ್ದರೂ, ಈಗ ಸುಧಾರಿಸಿಕೊಂಡಿದ್ದಾರೆ. ಸುಕ್ರಜ್ಜಿಗೀಗ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತಜ್ಞ ವೈದ್ಯರು ತಪಾಸಣೆ ಮಾಡಿದ್ದು, ಶ್ವಾಸಕೋಶದಲ್ಲಿನ ಸೋಂಕು ಹೊರತುಪಡಿಸಿದರೆ ಬೇರಾವ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಉಸಿರಾಟದ ತೊಂದರೆ ಅನುಭವಿಸುತ್ತಿರುವ ಸುಕ್ರಜ್ಜಿ ಇದೀಗ ಚೇತರಿಸಿಕೊಂಡಿದ್ದಾರೆ. ಸ್ವಲ್ಪ ದ್ರವಾಹಾರವನ್ನು ಸೇವಿಸಿದ್ದು, ಕಳವಳ ಪಡುವಂತಹದ್ದೇನಿಲ್ಲ.
ಆದರೂ ಅವರ ಆರೋಗ್ಯದ ಬಗ್ಗೆ ನಿಗಾ ಇಡಲಾಗಿದೆ. 48 ಗಂಟೆಗಳ ಕಾಲ ಅವರ ಆರೋಗ್ಯದ ಸ್ಥಿರತೆಯನ್ನು ಗಮನಿಸಲಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್