ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ:ಯೋಧ,ಪತ್ನಿ ದಾರುಣ ಸಾವು
Team Udayavani, Jul 8, 2017, 9:53 AM IST
ಶ್ರೀನಗರ: ಶನಿವಾರ ಪಾಕ್ ಪಡೆಗಳು ಗಡಿ ನಿಯಂತ್ರಣ ರೇಖೆಯ ಪೂಂಛ್ ಸೆಕ್ಟರ್ನಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಮನೆಯಲ್ಲಿದ್ದ ಯೋಧ ಮತ್ತು ಪತ್ನಿ ದಾರುಣವಾಗಿ ಸಾವನ್ನಪ್ಪಿದ್ದು, ಮಕ್ಕಳಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಜೆ ಪಡೆದು ಮನೆಗೆ ಬಂದಿದ್ದ ಯೋಧ ಶೌಕತ್ ಅಲಿ (35), ಪತ್ನಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗ್ಗೆ 6.30 ರ ವೇಳೆ ಚಕ್ಕಾದಾ ಭಾಗ್ ಮತ್ತು ಖರ್ರಿ ಪ್ರದೇಶದಲ್ಲಿ ಭಾರೀ ಗುಂಡಿನ ದಾಳಿ ನಡೆಸಲಾಗಿದ್ದು, ಸಣ್ಣ ಶಸ್ತ್ರಾಸ್ತ್ರಗಳು ಮತ್ತು ಮೋರ್ಟಾರ್ ಶೆಲ್ಗಳನ್ನು ದಾಳಿಗೆ ಪಾಕ್ ಪಡೆಗಳು ಬಳಸಿವೆ.
ಪಾಕ್ ಪಡೆಗಳ ದಾಳಿಗೆ ಭಾರತೀಯ ಯೋಧರು ದಿಟ್ಟ ಪ್ರತ್ಯುತ್ತರ ನೀಡಿರುವುದಾಗಿ ಸೇನಾ ಮೂಲಗಳು ತಿಳಿಸಿವೆ. ಗಾಯಗೊಂಡ ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.
ಬಂಡಿಪೋರಾದ ಹಾಜಿನ್ ಪ್ರದೇಶದಲ್ಲಿರುವ ಸೇನಾ ನೆಲೆಯ ಮೇಲೆ ಶನಿವಾರ ಬೆಳಗ್ಗೆ ಉಗ್ರರು ದಾಳಿ ನಡೆಸಿದ್ದು , ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಭದ್ರತಾ ಪಡೆಗಳು ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಹಿಜ್ಬುಲ್ ಮುಜಾಹಿದೀನ್ ಕಮಾಂಡರ್, ಉಗ್ರ ಬುರ್ಹಾನ್ ವಾನಿಯ ಹತ್ಯೆಗೆ ಇಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆಸಲು ಸಿದ್ಧತೆ ನಡೆಸಲಾಗಿದೆ. ಭದ್ರತೆಯನ್ನು ಆಯೋಜಿಸಲಾಗಿದೆ. ಕಣಿವೆಯಲ್ಲಿ ಲೀಸ್ ಲೈನ್ನಲ್ಲಿ ನಡೆಯುವ ಸಾಮಾಜಿಕ ಜಾಲ ತಾಣಗಳನ್ನು ಬ್ಲಾಕ್ ಮಾಡಲಾಗಿದ್ದು ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಶ್ರೀನಗರ ಮತ್ತು ಬಾರಾಮುಲ್ಲಾದಲ್ಲಿ ಕರ್ಫ್ಯೂ ರೀತಿಯ ಪರಿಸ್ಥಿತಿ ಹೇರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ