ನೀಟ್‌ ನೋಂದಣಿಗೆ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಅವಕಾಶಕ್ಕೆ ಆಕ್ರೋಶ

Team Udayavani, Jul 12, 2017, 11:28 AM IST

neet.jpg

ಬೆಂಗಳೂರು: “ನೀಟ್‌ ತೇರ್ಗಡೆಯಾದ ಹೊರ ರಾಜ್ಯದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೈದ್ಯಕೀಯ ಸೀಟಿಗೆ ನೋಂದಾಣಿ ಮಾಡಿಕೊಳ್ಳಲು ಅವಕಾಶ ನೀಡಿರುವುದರಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಇದರ ವಿರುದ್ಧ ಜು.13ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ,’ ಎಂದು ರಾಜ್ಯದ ವಿದ್ಯಾರ್ಥಿಗಳ ಪಾಲಕರು ಹೇಳಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿಯ ಪಾಲಕರಾದ ಕರುಣಾಕರ ಹೆಗಡೆ, “ವೈದ್ಯಕೀಯ ಮತ್ತು ದಂತವೈದ್ಯಕೀಯ ಸೀಟುಗಳಿಗೆ ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ರಾಷ್ಟ್ರೀಯ ಅರ್ಹತೆ ಹಾಗೂ ಪ್ರವೇಶ ಪರೀಕ್ಷೆಯಲ್ಲಿ (ನೀಟ್‌) ತೇರ್ಗಡೆ ಹೊಂದಿದ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕರ್ನಾಟಕದ ವೈದ್ಯಕೀಯ ಕಾಲೇಜಿನಲ್ಲಿ ಸೀಟು ನೀಡಲು ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ.

ಆದರೆ, ಬೇರ್ಯಾವ ರಾಜ್ಯದಲ್ಲೂ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಅವಕಾಶ ನೀಡಿಲ್ಲ. ರಾಜ್ಯ ಸರ್ಕಾರ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಈ ನಿರ್ಧಾರದಿಂದ ರಾಜ್ಯದ ಸಾವಿರಕ್ಕೂ ಅಧಿಕ ಪ್ರತಿಭಾವಂತ ವಿದ್ಯಾರ್ಥಿಗಳು ವೈದ್ಯಕೀಯ ಸೀಟಿನಿಂದ ವಂಚಿತರಾಗಲಿದ್ದಾರೆ,’ ಎಂದು ತಿಳಿಸಿದರು.

ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಯುವ ವೈದ್ಯರ ಸಂಘದ ಅಧ್ಯಕ್ಷ ಡಾ. ಭರತ್‌ ಕುಮಾರ್‌ ಮಾತನಾಡಿ, “ಅಖೀಲ ಭಾರತ ಮಟ್ಟದ ಶೇ.15ರಷ್ಟು ಸೀಟು ಯಾರಿಗೇ ಬೇಕಾದರೂ ಹಂಚಿಕೆ ಮಾಡಲಿ. ಆದರೆ, ಉಳಿದ ಶೇ.85ರಷ್ಟು ಸೀಟು ಕರ್ನಾಟಕದ ವಿದ್ಯಾರ್ಥಿಗಳಿಗೆ ನೀಡಬೇಕು.

ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ವೈದ್ಯಕೀಯ ಸೀಟು ನೀಡುವುದರಿಂದ ರಾಜ್ಯದ ಯುವ ವೈದ್ಯರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಲಿದೆ. ರಾಜ್ಯ ಸರ್ಕಾರ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಈ ನಿರ್ಧಾರ ಖಂಡಿಸಿ ಜು.13ರಂದು ಬೆಂಗಳೂರಿನ ಮೈಸೂರ್‌ ಬ್ಯಾಂಕ್‌ ವೃತ್ತದಿಂದ ಮೌರ್ಯ ವೃತ್ತದ ತನಕ ಜಾಥ ನಡೆಸಿ, ನಂತರ ಬೃಹತ್‌ ಪ್ರತಿಭಟನೆ ಮಾಡಿ, ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದೇವೆ,’ ಎಂದರು.

ಟಾಪ್ ನ್ಯೂಸ್

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Chabahar

Chabahar ಮಧ್ಯ ಏಷ್ಯಾಕ್ಕೆ ಭಾರತದ ಹೆಬ್ಟಾಗಿಲು

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Pudu ಗ್ರಾಮದ ಪುರಾತನ ಫರಂಗಿ ಕೆರೆ; ನರೇಗಾದಲ್ಲಿ ಪ್ರಯತ್ನಿಸಿದರೂ ಕೈಗೂಡದ ಅಭಿವೃದ್ಧಿ ಕಾರ್ಯ

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Chabahar

Chabahar ಮಧ್ಯ ಏಷ್ಯಾಕ್ಕೆ ಭಾರತದ ಹೆಬ್ಟಾಗಿಲು

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Pudu ಗ್ರಾಮದ ಪುರಾತನ ಫರಂಗಿ ಕೆರೆ; ನರೇಗಾದಲ್ಲಿ ಪ್ರಯತ್ನಿಸಿದರೂ ಕೈಗೂಡದ ಅಭಿವೃದ್ಧಿ ಕಾರ್ಯ

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.