32,000 ಅಂಕಗಳ ಗಡಿ ದಾಟಿ ಹೊಸ ದಾಖಲೆ ಸ್ಥಾಪಿಸಿದ ಮುಂಬಯಿ ಶೇರು

Team Udayavani, Jul 13, 2017, 11:49 AM IST

Sensex-Rally-700.jpg

ಮುಂಬಯಿ : ಹಣದುಬ್ಬರ ಪ್ರಮಾಣ ದಾಖಲೆಯ ಕೆಳಟಮಟ್ಟವನ್ನು ತಲುಪಿರುವ ಕಾರಣ ಆರ್‌ಬಿಐ ಬಡ್ಡಿ ದರವನ್ನು ನಿಶ್ಚಿತವಾಗಿಯೂ ಕಡಿತಗೊಳಿಸುವುದೆಂಬ ಲೆಕ್ಕಾಚಾರದಲ್ಲಿ ಹೊಸ ಹುಮ್ಮಸ್ಸು ಪಡೆದ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಚರಿತ್ರೆಯಲ್ಲೇ ಮೊತ್ತ ಮೊದಲ ಬಾರಿಗೆ 32,000 ಅಂಕಗಳ ಮಟ್ಟವನ್ನು ದಾಟಿ ಹೊಸ ದಾಖಲೆ ನಿರ್ಮಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಹೊಸ ಎತ್ತರದ ಮಟ್ಟವಾಗಿ 9,879 ಅಂಕಗಳ ಮಟ್ಟವನ್ನು ತಲುಪಿ ದಾಖಲೆ ರೂಪಿಸಿತು. 

ಇಂದಿನ ಆರಂಭಿಕ ವಹಿವಾಟಿನಲ್ಲಿ 215.60 ಅಂಕಗಳ ಏರಿಕೆಯನ್ನು ದಾಖಲಿಸಿದ ಸೆನ್ಸೆಕ್‌, ಬೆಳಗ್ಗೆ 11.45ರ ಹೊತ್ತಿಗೆ 205.18 ಅಂಕಗಳ ಮುನ್ನಡೆಯನ್ನು ಉಳಿಸಿಕೊಂಡು 32,010.00 ಅಂಕಗಳ ಮಟ್ಟದಲ್ಲೂ, ನಿಫ್ಟಿ ಸೂಚ್ಯಂಕ 55.50 ಅಂಕಗಳ ಏರಿಕೆಯನ್ನು ಕಾಯ್ದುಕೊಂಡು 9,871.60 ಅಂಕಗಳ ಮಟ್ಟದಲ್ಲೂ ವ್ಯವಹಾರನಿರತವಾಗಿದ್ದವು. 

ಇಂದಿನ ಆರಂಭಿಕ ವಹಿವಾಟಿನಲ್ಲಿ ರಿಲಯನ್ಸ್‌, ಎಕ್ಸಿಸ್‌ ಬ್ಯಾಂಕ್‌, ಟಿಸಿಎಸ್‌, ಎಸ್‌ ಬ್ಯಾಂಕ್‌, ಐಟಿಸಿ ಶೇರುಗಳು ಹೆಚ್ಚು ಕ್ರಿಯಾಶೀಲವಾಗಿದ್ದವು. 

ಐಡಿಯಾ ಸೆಲ್ಯುಲರ್‌, ಐಟಿಸಿ, ಐಸಿಐಸಿಐ ಬ್ಯಾಂಕ್‌, ಎಸ್‌ ಬ್ಯಾಂಕ್‌, ಭಾರ್ತಿ ಏರ್‌ಟೆಲ್‌  ಶೇರುಗಳು ಟಾಪ್‌ ಗೇನರ್‌ ಎನಿಸಿಕೊಂಡವು; ಭಾರ್ತಿ ಇನ್‌ಫ್ರಾಟೆಲ್‌, ಒಎನ್‌ಜಿಸಿ, ಟಾಟಾ ಮೋಟರ್‌, ಎಸಿಸಿ ಮತ್ತು ಮಹೀಂದ್ರ ಶೇರುಗಳು ಟಾಪ್‌ ಲೂಸರ್‌ ಎನಿಸಿಕೊಂಡವು. 

ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿ ಧನಾತ್ಮಕ ಸನ್ನಿವೇಶ ನೆಲೆಗೊಂಡಿರುವುದು ಹಾಗೂ ಅಮೆರಿಕದ ಫೆಡ್‌ ಬ್ಯಾಂಕ್‌ ಮುಖ್ಯಸ್ಥರು ಯುಎಸ್‌ ಬಡ್ಡಿದರಗಳನ್ನು ಕ್ರಮೇಣ ಏರಿಸಲಾಗುವುದು ಎಂದು ಹೇಳಿರುವುದು ಭಾರತೀಯ ಶೇರು ಮಾರುಕಟ್ಟೆಯಲ್ಲಿನ ತೇಜಿಗೆ ಕಾರಣವಾಯಿತು. 

ಕಳೆದ ಮೂರು ದಿನಗಳ ನಿರಂತರ ವಹಿವಾಟಿನಲ್ಲಿ ಸೆನ್ಸೆಕ್ಸ್‌ ಒಟ್ಟು 444.18 ಅಂಕ ಗಳಿಸಿರುವುದು ಗಮನಾರ್ಹವಾಗಿದೆ. 

ಟಾಪ್ ನ್ಯೂಸ್

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.