ಟಾಸ್ಕ್ ಪೋರ್ಸ್‌ ರಚನೆಗೆ ಸರ್ಕಾರ ಮುಂದಾಗಲಿ

Team Udayavani, Jul 18, 2017, 12:26 PM IST

mys2.jpg

ಮೈಸೂರು: ರಾಜ್ಯದಲ್ಲಿ ಎದುರಾಗಿರುವ ತೀವ್ರ ಬರಗಾಲದಿಂದ ಕಂಗೆಟ್ಟಿರುವ ರೈತರ ಹಿತದೃಷ್ಟಿಯಿಂದ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್‌ ರಚಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಮಾಜಿ ಸಚಿವ, ಬಿಜೆಪಿ ರೈತ ಮೋರ್ಚಾ ರಾಜಾಧ್ಯಕ್ಷ ಸಿ.ಎಚ್‌.ವಿಜಯಶಂಕರ್‌ ಆಗ್ರಹಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಮುಂಗಾರು ಹಾಗೂ ಹಿಂಗಾರು ವೈಫ‌ಲ್ಯದಿಂದಾಗಿ ಕಳೆದ ಮೂರು ವರ್ಷಗಳಿಂದ ನಿರಂತರ ಬರಗಾಲವಿದ್ದು, ಪ್ರಸಕ್ತ ಸಾಲಿನಲ್ಲೂ ಇದೇ ಪರಿಸ್ಥಿತಿ ಮುಂದುವರಿದ ಪರಿಣಾಮ ರಾಜ್ಯದ ರೈತರು ಕಂಗಾಲಾಗಿದ್ದಾರೆ. ಅಲ್ಲದೆ ರಾಜ್ಯದ ರೈತರು ಹವಾಮಾನ ಇಲಾಖೆ ವರದಿಯಂತೆ ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿದ್ದರು.

ಆದರೆ ಮುಂಗಾರು ಅವಧಿ ಶೇ.75 ಮುಗಿದಿದ್ದು, ಈ ವರ್ಷವೂ ಮುಂಗಾರು ಕೈಕೊಟ್ಟ ಹಿನ್ನೆಲೆ ರಾಜ್ಯದ ಯಾವ ಕೆರೆ, ಕಟ್ಟೆಗಳು ಭರ್ತಿಯಾಗದ ಹಿನ್ನೆಲೆ ರಾಜ್ಯದ ಅಗತ್ಯತೆಗೆ ಬೇಕಾದಷ್ಟು ನೀರು ಸಹ ಈವರೆಗೂ ಸಂಗ್ರಹವಾಗಿಲ್ಲ. ಇದರಿಂದಾಗಿ ರಾಜ್ಯದಲ್ಲಿ ಶೇ.40 ಪ್ರದೇಶದಲ್ಲಿ ಮಾತ್ರ ಬಿತ್ತನೆ ಕಾರ್ಯ ನಡೆದಿದ್ದು ಅದರಲ್ಲೂ ಶೇ.30 ಬೆಳೆ ನಷ್ಟವಾಗುವ ಆತಂಕ ಎದುರಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ರೈತರಿಗೆ ಸಲಹೆ ನೀಡಿ: ರಾಜ್ಯದಲ್ಲಿ ಸತತ ನಾಲ್ಕನೇ ವರ್ಷದಿಂದಲೂ ಬರ ಪರಿಸ್ಥಿತಿ ಆವರಿಸಿದ್ದು, ರೈತಾಪಿ ವರ್ಗ ತತ್ತರಿಸಿದೆ. ಆದರೆ ರಾಜ್ಯದಲ್ಲಿ ಬರದ ತೀವ್ರತೆ ಹೆಚ್ಚಾಗುತ್ತಿದ್ದರೂ ರಾಜ್ಯ ಸರ್ಕಾರ ರೈತರ ಹಿತಕಾಪಾಡುವ ನಿಟ್ಟಿನಲ್ಲಿ ಯಾವ ಮುಂಜಾಗೃತ ಕ್ರಮವನ್ನು ಕೈಗೊಳ್ಳದೆ ನಿರ್ಲಕ್ಷಿಸಿದೆ.

ಇದರ ಪರಿಣಾಮದಿಂದ ಈಗಾಗಲೇ ತೋಟಗಾರಿಕೆ ಬೆಳೆಗಳು ಅರ್ಧದಷ್ಟು ನಾಶವಾಗಿದ್ದು, ಉಳಿದ ಬೆಳೆ ರೈತರಿಗೆ ಸಿಗುವಂತೆ ಮಾಡುವ ಸಲುವಾಗಿ ರಾಜ್ಯ ಸರ್ಕಾರ ರೈತರಿಗೆ ಅಗತ್ಯ ಸಲಹೆ ನೀಡಲು ತಜ್ಞರ ಸಮಿತಿ ರಚಿಸಬೇಕು. ಅಲ್ಲದೆ ಬರದಿಂದ ಕಂಗಾಲಾಗಿರುವ ರೈತರಿಗೆ ಯಾವ ಬೆಳೆ ಬೆಳೆಯಬೇಕು, ಮಳೆಯಾಶ್ರಿತ ಹಾಗೂ ನೀರಾವರಿ ಪ್ರದೇಶಗಳಲ್ಲಿ ಯಾವ ಬೆಳೆಗಳ ಬಿತ್ತನೆ ಮಾಡಬೇಕೆಂಬ ಬಗ್ಗೆಯೂ ರೈತರಿಗೆ ಸಲಹೆ ನೀಡುವ ಜತೆಗೆ ಪರ್ಯಾಯ ಬೆಳೆಯ ಬಗ್ಗೆಯೂ ಮಾಹಿತಿ ನೀಡಬೇಕೆಂದು ಒತ್ತಾಯಿಸಿದರು.

ತುರ್ತು ಸಭೆ ನಡೆಸಿ: ಕಳೆದ ಮೂರು ವರ್ಷದಿಂದ ಭೀಕರ ಬರಗಾಲ ಆವರಿಸಿದ್ದರೂ ರಾಜ್ಯ ಸರ್ಕಾರ ನೀರಾವರಿ ಅಚ್ಚುಕಟ್ಟು ಪ್ರದೇಶದ ಕೆರೆ-ಕಟ್ಟೆಗಳನ್ನು ತುಂಬಿಸುವ ಯಾವ ಪ್ರಯತ್ನ ಮಾಡದ ಹಿನ್ನೆಲೆ ಎಲ್ಲಾ ಕೆರೆ-ಕಟ್ಟೆಗಳು ಬರಿದಾಗಿವೆ. ಹೀಗಾಗಿ ಕಾವೇರಿ, ಕಪಿಲ, ತುಂಗ¸‌ದ್ರಾ ಸೇರಿದಂತೆ ರಾಜ್ಯದಲ್ಲಿರುವ ಎಲ್ಲಾ ಅಣೆಕಟ್ಟುಗಳ ಸಲಹಾ ಸಮಿತಿಗಳ ಸಭೆ ಶೀಘ್ರವೇ ನಡೆಸಬೇಕು. ಆ ಮೂಲಕ ಸದ್ಯದ ಪರಿಸ್ಥಿತಿಯಲ್ಲಿ ಅಣೆಕಟ್ಟೆಗಳಲ್ಲಿ ಸಂಗ್ರಹವಾಗಿರುವ ನೀರಿನ ಸದ್ಬಳಕೆ ಮಾಡಿಕೊಳ್ಳುವ ಕುರಿತು ಚರ್ಚಿಸಿ, ಕ್ರಮವಹಿಸಬೇಕು.

ಈ ಸಬೆಗೆ ಕೇವಲ ಸಲಹಾ ಸಮಿತಿ ಸದಸ್ಯರು, ಅಧಿಕಾರಿಗಳು ಮಾತ್ರವಲ್ಲದೆ ರೈತರು ಸಹ ಭಾಗವಹಿಸಲು ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ, ಮುಂದಿನ 15 ದಿನದೊಳಗೆ ಸಲಹಾ ಸಮಿತಿ ಸಭೆ ನಡೆಸದಿದ್ದಲ್ಲಿ, ಆಗಸ್ಟ್‌ ಮೊದಲ ವಾರದಲ್ಲಿ ಅಚ್ಚುಕಟ್ಟು ವ್ಯಾಪ್ತಿಯ ಅಧೀಕ್ಷಕ ಅಭಿಯಂತರರ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು.

ಫ‌ಸಲ್‌ ಬಿಮಾ ಜಾರಿಗೊಳಿಸಿ: ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಫ‌ಸಲ್‌ ಬಿಮಾ ಯೋಜನೆ ಜಾರಿಗೆ ತಂದಿದೆ. ಆದರೆ ರಾಜ್ಯದಲ್ಲಿ ಈ ಯೋಜನೆಯನ್ನು ತೋಟಗಾರಿಕೆ ಬೆಳೆಗಳಿಗೆ ಸೇರಿಸದೆ ರೈತರಿಗೆ ವಂಚಿಸಲಾಗುತ್ತಿದ್ದು, ಇದರಿಂದ ಈಗಾಗಲೇ ಬರದಿಂದ ತತ್ತರಿಸಿರುವ ರೈತರಿಗೆ ರಾಜ್ಯ ಸರ್ಕಾರ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ.

ಈ ಹಿನ್ನೆಲೆ ರಾಜ್ಯ ಸರ್ಕಾರ ಮುಂದಿನ 1 ತಿಂಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಫ‌ಸಲ್‌ ಬಿಮಾ ಯೋಜನೆ ಜಾರಿಗೊಳಿಸದಿದ್ದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳಿಗೆ ದಿಗ್ಬಂಧನ ಹಾಕುವ ಮೂಲಕ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಶಿವಣ್ಣ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಸನ್ನ ಎನ್‌.ಗೌಡ, ಮುಖಂಡರಾದ ಬೋರೇಗೌಡ, ಸತೀಶ್‌, ರಾಜೇಶ್‌, ಪ್ರಭಾಕರ ಸಿಂಧೆ ಹಾಜರಿದ್ದರು.

ಸರ್ಕಾರ ಪ್ರಸ್ತಾವನೆ ಸಲ್ಲಿಸಲಿ: ಮಳೆ ಅಭಾವದಿಂದಾಗಿ ರಾಜ್ಯದ ಅಣೆಕಟ್ಟುಗಳಲ್ಲಿ ನೀರಿನ ಕೊರತೆಯಿಂದಾಗಿ ಕೃಷಿ ಚಟುವಟಿಕೆಗಳಿಗೆ ನೀರಿಲ್ಲದ ಪರಿಸ್ಥಿತಿ ಎದುರಾಗಿದೆ. ಈ ನಡುವೆ ನೀರಿಗಾಗಿ ಈಗಾಗಲೇ ತಮಿಳುನಾಡು ಸರ್ಕಾರ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೂಡಲೇ ಕೇಂದ್ರ ತಜ್ಞರ ಸಮಿತಿಯನ್ನು ರಾಜ್ಯಕ್ಕೆ ಆಹ್ವಾನಿಸಿ ಪರಿಸ್ಥಿತಿ ಅವಲೋಕಿಸಲು ಪ್ರಸ್ತಾವನೆ ಕಳುಹಿಸಬೇಕು. ಒಂದೊಮ್ಮೆ ರಾಜ್ಯ ಸರ್ಕಾರ ಪ್ರಸ್ತಾವನೆ ಕಳುಹಿಸಿದರೆ ಅದಕ್ಕೆ ಬಿಜೆಪಿ ಬೆಂಬಲ ನೀಡಲಿದೆ ಎಂದು ಸಿ.ಎಚ್‌.ವಿಜಯಶಂಕರ್‌ ತಿಳಿಸಿದರು.

ಟಾಪ್ ನ್ಯೂಸ್

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.