ಭಾರತದ ಕಲಾಪ್ರಕಾರ ಅಗಾಧ

Team Udayavani, Jul 24, 2017, 2:44 PM IST

24-SHIV-3.jpg

ಶಿವಮೊಗ್ಗ: ವೈವಿಧ್ಯಮಯ ಸಾಂಸ್ಕೃತಿಕ ಹಿನ್ನೆಲೆ ಹೊಂದಿರುವ ಭಾರತ ದೇಶದ ಎಲ್ಲ ಪ್ರಾಂತ್ಯಗಳಲ್ಲಿಯೂ ತನ್ನದೇ ಆದ ಕಲಾ ಪ್ರಕಾರಗಳಿವೆ ಎಂದು ವಿಧಾನ ಪರಿಷತ್‌ ಸಭಾಪತಿ ಡಿ.ಎಚ್‌. ಶಂಕರಮೂರ್ತಿ ಹೇಳಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಭಾನುವಾರ ಕೇಂದ್ರ ಸಂಸ್ಕೃತಿ ಸಚಿವಾಲಯದ ಸಹಯೋಗದಲ್ಲಿ ಭಾರತೀಯ ಸಾಂಸ್ಕೃತಿಕ ನಕ್ಷೆ ರಚನೆಯ “ನ್ಯಾಷನಲ್‌ ಮಿಷನ್‌ ಆನ್‌ ಕಲ್ಚರಲ್‌ ಮ್ಯಾಪಿಂಗ್‌ ಆಫ್ ಇಂಡಿಯಾ’ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ
ಮಾತನಾಡಿದರು. ದೇಶದ ಎಲ್ಲ ಕಲಾ ಪ್ರಕಾರಗಳಲ್ಲಿಯೂ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಸಾಧನೆ ಮಾಡಿರುವ ಅಸಾಮಾನ್ಯ ಪ್ರತಿಭೆಗಳಿದ್ದಾರೆ. ಚಿತ್ರಗಾರಿಕೆ, ಸಂಗೀತ, ಸಾಹಿತ್ಯ ಸೇರಿದಂತೆ ಬಹುತೇಕ ಕಲೆಗಳಲ್ಲಿ ವಿಶ್ವಕ್ಕೆ ಮಾದರಿಯಾಗುವ ಪ್ರತಿಭಾನ್ವಿತರಿದ್ದಾರೆ ಎಂದರು.

ಭಾರತದ ಸಾಂಸ್ಕೃತಿಕ ಪರಂಪರೆಯು ವಿಶ್ವದಲ್ಲಿಯೇ ಶ್ರೇಷ್ಠತೆಯಿಂದ ಕೂಡಿದೆ. ಭಾರತ ಜಾಗತಿಕ ಇತಿಹಾಸದಲ್ಲಿ ಗುರುತಿಸಿಕೊಂಡಿರುವುದೇ ತನ್ನಲ್ಲಿರುವ ವೈವಿಧ್ಯಮಯ ಸಾಂಸ್ಕೃತಿಕ ಹಿನ್ನೆಲೆಯಿಂದ, ವಿಶ್ವದಲಿಯೇ ಅತ್ಯಂತ ಹೆಚ್ಚು ಕಲೆಯ ವಿಧಗಳನ್ನು ಇಲ್ಲಿ ಕಾಣಬಹುದು ಎಂದು ಹೇಳಿದರು.
ಶಿವಮೊಗ್ಗ ಜಿಲ್ಲೆ ಕೂಡ ವಿಶ್ವದ ಗಮನ ಸೆಳೆಯುತ್ತಿರುವ ರಾಜ್ಯದ ಸಾಂಸ್ಕೃತಿಕ ಕೇಂದ್ರ ಎಂದೆ ಗುರುತಿಸಲ್ಪಡುತ್ತಿದೆ. ವೈಶಿಷ್ಟಪೂರ್ಣ ಕಲೆಗಳು, ಕಲಾವಿದರನ್ನು ಹೊಂದಿರುವ ಸ್ಥಳವಾಗಿದೆ. ಅಲ್ಲದೆ, ರಾಜಕೀಯ, ಸ್ವಾತಂತ್ರ್ಯ ಹೋರಾಟ, ಪ್ರವಾಸಿ ತಾಣ, ಸಾಹಿತ್ಯ, ಕಲೆ, ರಂಗಕ್ಷೇತ್ರ, ಸಂಗೀತ,
ಗಮಕ ಸೇರಿದಂತೆ ವಿವಿಧ ವಿಷಯಗಳಿಂದ ಹೆಸರು ಗಳಿಸಿದೆ ಎಂದರು.

ಕೇಂದ್ರ ಸಂಸ್ಕೃತಿ ಸಚಿವಾಲಯದ ಸಹಾಯಕ ಕಾರ್ಯದರ್ಶಿ ಸುಮಿತ್‌ ಸತ್ತಾವನ್‌ ಮಾತನಾಡಿ, ನ್ಯಾಷನಲ್‌ ಕಲ್ಚರಲ್‌ ಮ್ಯಾಪಿಂಗ್‌ ಕಲಾವಿದರ ಒಗ್ಗೂಡಿಸುವ ಅತಿ ದೊಡ್ಡ ವೇದಿಕೆ ಇದಾಗಿದೆ ಎಂದು ತಿಳಿಸಿದರು. ಕಲಾವಿದೆ ನಳಿನಿ ಮಾತನಾಡಿ, ಕೇಂದ್ರ ಸರ್ಕಾರವು ದೇಶದ ಕಲಾವಿದರಿಗೆ ಸೂಕ್ತ ಗೌರವ ಸಿಗುವಂತೆ ಮಾಡಲು ರಾಷ್ಟ್ರಾದ್ಯಂತ ನೋಂದಣಿ ಕೆಲಸ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕಲಾವಿದರಿಗೆ ಸರ್ಕಾರದಿಂದ ಅಗತ್ಯ ಪ್ರೋತ್ಸಾಹ ಒದಗಿಸಲು ಕಲ್ಚರಲ್‌ ಮ್ಯಾಪಿಂಗ್‌ ನೆರವಾಗಲಿದೆ ಎಂದರು. ಶಿವಮೊಗ್ಗ ಜಿಲ್ಲೆಯ ವಿವಿಧ ಕಲಾ ಪ್ರಕಾರಗಳಲ್ಲಿ ಸಾಧನೆ
ಮಾಡಿರುವ ಕಲಾವಿದರನ್ನು ಗೌರವಿಸಲಾಯಿತು. ನ್ಯಾಷನಲ್‌ ಮಿಷನ್‌ ಆನ್‌ ಕಲ್ಚರಲ್‌ ಮ್ಯಾಪಿಂಗ್‌ ಆಫ್ ಇಂಡಿಯಾ ಸಂಚಾಲಕ ಡಾ| ಬಿ.ವಿ. ರಾಜಾರಾಂ, ದಕ್ಷಿಣ ವಲಯ ಉಪನಿರ್ದೇಶಕ ಜೋಸೇಫ್, ಕಲಾವಿದೆ ಕಮಲಿನಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.