ಕನ್ನಡ ಉಳಿವಿನಲ್ಲಿ ಮಹಿಳೆಯ ಪಾತ್ರ ಮಹತ್ತರ: ಸುಜಾತಾ

Team Udayavani, Jul 25, 2017, 7:25 AM IST

24ksde17.jpg

ಕಾಸರಗೋಡು: ಕನ್ನಡ ಭಾಷೆಯ ಉಳಿಕೆಯಲ್ಲಿ ಮಹಿಳೆಯರು ವಹಿಸಬಹುದಾದ ಪಾತ್ರ ಮಹತ್ತರ ವಾದುದು ಎಂದು ಕಾಸರಗೋಡು ಸರಕಾರಿ ಕಾಲೇಜು ಕನ್ನಡ ವಿಭಾಗ ಮುಖ್ಯಸ್ಥೆ ಸುಜಾತ ಎಸ್‌. ಅಭಿಪ್ರಾಯಪಟ್ಟರರು.

ಅವರು ಬೀರಂತಬೈಲಿನ ಕನ್ನಡ ಮಹಿಳಾ ಸಂಘದ ಸಭಾಂಗಣದಲ್ಲಿ ಜರಗಿದ ಕನ್ನಡ ಚಿಂತನೆಯ 23 ನೇ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮನೆಯ ಹೊಣೆಗಾರಿಕೆಯ ಜೊತೆಗೆ ಸಾಮಾಜಿಕ ವಾಗಿ ತೊಡಗಿಸಿಕೊಳ್ಳುವಲ್ಲಿ ಅನೇಕ ಸಮಸ್ಯೆಗಳನ್ನು ಮಹಿಳೆಯರು ಎದುರಿಸಬೇಕಾಗಿ ಬರುತ್ತದೆ. ಹೀಗಿದ್ದೂ ಆರೋಗ್ಯಪೂರ್ಣ ಚಟುವಟಿಕೆಗಳಲ್ಲಿ ಭಾಗಿ ಗಳಾಗಿ ಮತ್ತೂಂದು ತಲೆಮಾರಿಗೂ ಸಂಸ್ಕೃತಿಯನ್ನು ಹಸ್ತಾಂತರಿಸುವಲ್ಲಿ ಅವರು ಬಹಳ ದೊಡ್ಡ ಕೊಡುಗೆ ನೀಡುತ್ತಿದ್ದಾರೆ ಎಂದರು.

“ಮಹಿಳೆಯರು ಮತ್ತು ಕನ್ನಡ ಹೋರಾಟ’ ಎಂಬ ವಿಷಯದಲ್ಲಿ ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ವಿಭಾಗದ ನಿವೃತ್ತ ಮುಖ್ಯಸ್ಥೆ ಡಾ|ಯು.ಮಹೇಶ್ವರಿ ವಿಶೇಷೋಪನ್ಯಾಸ ನೀಡಿದರು. ಕನ್ನಡ ಹೋರಾಟ ಮತ್ತು ಕಾಸರಗೋಡು ಕನ್ನಡ ಮಹಿಳಾ ಸಂಘದ ಹುಟ್ಟಿಗೆ ಅವಿನಾಭಾವ ಸಂಬಂಧವಿದೆ ಎಂದು ತಿಳಿಸಿದ ಅವರು ಭಾಷಾವಾರು ಪ್ರಾಂತ್ಯ ರಚನೆಗೆ ಮುನ್ನವೇ ಕಾಸರಗೋಡನ್ನು ಕರ್ನಾಟಕದಲ್ಲೇ ಉಳಿಸುವಂತೆ ಇಲ್ಲಿನ ಸಾವಿರಾರು ಸಂಖ್ಯೆಯ ಮಹಿಳೆಯರು ಒಂದಾಗಿ ರೈಲಿನಲ್ಲಿ ಸಂಚರಿಸುತ್ತಿದ್ದ ಪ್ರಧಾನಿ ಇಂದಿರಾಗಾಂಧಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಘಟನೆಯಿಂದ ಆರಂಭಿಸಿ ಇಂದಿನ ಪ್ರತಿ ಹೋರಾಟದಲ್ಲಿ ಮಹಿಳೆಯರು ಭಾಗವಹಿಸುತ್ತಿರುವ ಬಗೆಯನ್ನು ವಿವರಿಸಿದರು.

ಬೆಂಗಳೂರಿನ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಅಪೂರ್ವ ಕಲಾವಿದರು ಕಾಸರಗೋಡು, ಕಾಸರ ಗೋಡು ಕನ್ನಡ ಮಹಿಳಾ ಸಂಘಗಳ ಜಂಟಿ ಆಶ್ರಯದಲ್ಲಿ ಈ ಸಮಾರಂಭ ನಡೆಯಿತು.ಮಹಿಳಾ ಸಂಘದ ಅಧ್ಯಕ್ಷೆ ವಿಜಯಲಕ್ಷಿ$¾à ಶ್ಯಾನು ಭೋಗ್‌ ಅಧ್ಯಕ್ಷತೆ ವಹಿಸಿದರು. ಮಹಿಳಾ ಗುಡಿಕೈಗಾರಿಕೆ ಘಟಕದ ಅಧ್ಯಕ್ಷೆ ದೇವಕಿ ಕೆ.ಜಿ.ಭಟ್‌, ಸುಗಮ ಸಂಗೀತ ಪರಿಷತ್‌ ಕೇರಳ ಗಡಿನಾಡ ಘಟಕದ ಅಧ್ಯಕ್ಷೆ ರಾಧಾಮುರಳೀಧರ್‌ ಉಪಸ್ಥಿತರಿದ್ದರು. ಮಹಿಳಾ ಸಂಘದ ಪ್ರಧಾನ ಕಾರ್ಯದರ್ಶಿ ಭಾರತೀ ಬಾಬು ಸ್ವಾಗತಿಸಿದರು. 

ಅಪೂರ್ವ ಕಲಾವಿದರು ಸಂಸ್ಥೆಯ ಅಧ್ಯಕ್ಷ ಉಮೇಶ್‌ ಎಂ.ಸಾಲಿಯಾನ್‌ ಪ್ರಾಸ್ತಾವಿಕ ಭಾಷಣ  ಮಾಡಿದರು. ಪತ್ರಕರ್ತ ವಿ.ಜಿ. ಕಾಸರಗೋಡು ಕಾರ್ಯಕ್ರಮ ನಿರೂಪಿಸಿದರು. ಗ್ರಂಥಪಾಲಕಿ ಹರಿಣಾಕ್ಷಿ ಭೋಜರಾಜ್‌ ವಂದಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಂಗಳೂ ರಿನ ಡಿ. ದೇವರಾಜ್‌ ಅವರಿಂದ ಗೀತಾ ಗಾಯನ ಜರಗಿತು. ಹಿಮ್ಮೇಳದಲ್ಲಿ ಹಾರ್ಮೋನಿಯಂನಲ್ಲಿ ಧ್ರುವರಾಜ್‌ ಆಚಾರ್ಯ, ತಬ್ಲಾದಲ್ಲಿ ಗಗನ್‌ರಾಜ್‌ ಆಚಾರ್ಯ ಸಹಕರಿಸಿದರು. ಉಳಿದಂತೆ ಹರಿಣಾಕ್ಷಿ, ಹರ್ಷದಾ, ವಿನಯಾ, ಶ್ಯಾಮಲಾ ರವಿರಾಜ್‌, ಧ್ರುವ ರಾಜ್‌, ಗಗನ್‌ರಾಜ್‌ ಗಾಯನ ನಡೆಸಿದರು.
 
ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.